ಎಸ್‌ ಎಂ ಕೃಷ್ಣ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಡಿಸಿಎಂ ಡಿ ಕೆ ಶಿವಕುಮಾರ್‌

Date:

ವಿಧಾನಸಭೆ ಅಧಿವೇಶನ ಆರಂಭಕ್ಕೂ ಮೊದಲು ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅವರ ಮನೆಗೆ ಭೇಟಿ ನೀಡಿದ್ದ ನೂತನ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭೇಟಿ ನೀಡಿ ಆಶೀರ್ವಾದ ಪಡೆದರು.

- Advertisement -

ಎಸ್ ಎಂ ಕೃಷ್ಣ ನಿವಾಸದ ಬಳಿ ಸುದ್ದಿಗಾರರು ಜೊತೆಗೆ ಮಾತನಾಡಿದ ಡಿಕೆಶಿ, “ವಿಧಾನಸಭೆ ನೂತನ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕಾರ ಮಾಡುವ ನನಗೆ ರಾಜಕೀಯವಾಗಿ ಪ್ರೋತ್ಸಾಹ ನೀಡಿರುವ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಆಶೀರ್ವಾದ ಪಡೆಯುವುದು ನನ್ನ ಕರ್ತವ್ಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಒಬಿಸಿ ಮೀಸಲಾತಿ ಮತ್ತು ಕೆನೆಪದರ: ಸುಪ್ರೀಂನ ಮಾರ್ಚ್ ತೀರ್ಪಿನ...

ಒಬಿಸಿ ಮೀಸಲಾತಿ ಸೌಲಭ್ಯ ಪಡೆಯಲು 'ಕೆನೆಪದರ' ನಿರ್ಧರಿಸುವಾಗ ಕೇವಲ ಪೋಷಕರ ವಾರ್ಷಿಕ ವೇತನವನ್ನೇ ಏಕೈಕ ಮಾನದಂಡವಾಗಿ ಪರಿಗಣಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ಮಾರ್ಚ್ ತೀರ್ಪನ್ನು ಪುನರುಚ್ಚರಿಸಿದೆ. 1993ರ ಮೂಲ ನಿಯಮಗಳೇನು? ಕೆಳಹಂತದ...

ಮೈಕ್ರೋಸಾಫ್ಟ್‌ ಸರ್ವರ್ ಕ್ರಾಶ್; ತಲ್ಲಣಗೊಂಡ ಆನ್‌ ಲೈನ್‌ ಜಗತ್ತು!

ಆಧುನಿಕ ಕಚೇರಿ ವ್ಯವಹಾರ ಮತ್ತು ಡಿಜಿಟಲ್ ಸಂವಹನದ ಬೆನ್ನೆಲುಬಂತಿರುವ ತಂತ್ರಜ್ಞಾನ ದೈತ್ಯ ಮೈಕ್ರೋಸಾಫ್ಟ್‌ನ ಸರ್ವರ್‌ಗಳಲ್ಲಿ ಕಾಣಿಸಿಕೊಂಡ ಅನಿರೀಕ್ಷಿತ ತಾಂತ್ರಿಕ ದೋಷವು ಜಾಗತಿಕ ಮಟ್ಟದಲ್ಲಿ ಭಾರಿ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಗುರುವಾರ (ನವೆಂಬರ್ 12) ಸಂಜೆಯಿಂದ...

ಸ್ಮರಣೆ | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೇ ಜೈಲುಶಿಕ್ಷೆ ವಿಧಿಸಿ,...

ನ್ಯಾಯಮೂರ್ತಿಗಳ ವಿರುದ್ಧ ಜಾತಿ ತಾರತಮ್ಯದ ಆರೋಪ ಮಾಡಿ, ನ್ಯಾಯಾಂಗದೊಂದಿಗಿನ ಸಂಘರ್ಷ ನಡೆಸಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗೇ ಐದು ವರ್ಷಗಳ ಶಿಕ್ಷೆಯ ಆದೇಶ ಹೊರಡಿಸಿ, ಕೊನೆಗೆ ತಾವೇ ಆರು ತಿಂಗಳ ಜೈಲುವಾಸ ಅನುಭವಿಸಿದ್ದವರು,...

“ಹೀಗಾಗಿ, ಅವರ ನಿವಾಸಕ್ಕೆ ಭೇಟಿ ನೀಡಿ, ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆಯಲು ಬಂದಿದ್ದೆ. ಅವರು ‘ಬೆಂಗಳೂರು ಇತಿಹಾಸ’ವೆಂಬ ಪುಸ್ತಕ ನೀಡಿದ್ದಾರೆ. ಕೃಷ್ಣ ಅವರು ಬಹಳ ದೂರದೃಷ್ಟಿಯಿಂದ ಈ ಪುಸ್ತಕ ನೀಡಿದ್ದಾರೆ” ಎಂದು ಹೇಳಿದರು.

ಅಂಡರ್‌ಪಾಸ್‌ಗಳ ಬಗ್ಗೆ ವರದಿ ಪಡೆದು ಮುನ್ನೆಚ್ಚರಿಕೆ ವಹಿಸಬೇಕಿದೆ; ಡಿಕೆಶಿ

ಬೆಂಗಳೂರು ನಗರದ ಪ್ರಮುಖ ಅಂಡರ್‌ಪಾಸ್‌ಗಳ ಕುರಿತು ವರದಿ ತರಿಸಿಕೊಡು ಈ ಪ್ರದೇಶಗಳಲ್ಲಿ ಈ ರೀತಿ ಆಗದ ರೀತಿಯಲ್ಲಿ ಮುನ್ನೆಚ್ಚರಿಕೆ ವಹಿಸಬೇಕಿದೆ. ಪ್ರತಿಯೊಂದು ಜೀವ ಕಾಪಾಡುವುದು ನಮ್ಮ ಕರ್ತವ್ಯ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಚುನಾವಣೆಯಲ್ಲಿ ಕೊಟ್ಟ ಹಣ ಹಂಚಿಲ್ಲದವರು ವಾಪಸ್ ಕೊಡಿ: ನಾರಾಯಣಗೌಡ

ಮಳೆಗೆ ಬ್ಯಾಟರಾಯನಪುರದಲ್ಲಿ 27 ವರ್ಷದ ಯುವಕ ಕೊಚ್ಚಿ ಹೋಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಭಾನುವಾರ ರಾತ್ರಿ ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ಇಂತಹ ದುರ್ಘಟನೆಯ ನಡೆಯುತ್ತಿರುವುದು ದುರದೃಷ್ಟಕರ. ನಾವು ಎಲ್ಲೇ ಇದ್ದರೂ ಕಾಲುವೆಗಳ ಬಳಿ ಬಹಳ ಜಾಗೃತವಾಗಿ ಇರಬೇಕು” ಎಂದು ಸಲಹೆ ನೀಡಿದರು.

“ಹಿಂದೆ ಕೇಂದ್ರ ಸರ್ಕಾರ ನರ್ಮ್ ಯೋಜನೆ ಮೂಲಕ ನಗರಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಬಹಳ ನೆರವು ನೀಡಿದ್ದರು. ನಗರಗಳಿಗೆ ಕೇಂದ್ರ ಸರ್ಕಾರದ ಯೋಜನೆಗಳನ್ನು ಎಷ್ಟರ ಮಟ್ಟಿಗೆ ಸದುಪಯೋಗ ಪಡಿಸಿಕೊಂಡಿದ್ದಾರೆ ಎಂದು ನೋಡಬೇಕಿದೆ” ಎಂದರು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಮಕ್ಕಳಿಗೆ ಪಠ್ಯದ ಜೊತೆಗೆ ಜೀವನ ಮೌಲ್ಯಗಳ ಸಂಸ್ಕಾರವೂ ಅಗತ್ಯ: ಪ್ರವೀಣ ಗುಂಡಗಾವಿ

ಮಕ್ಕಳಲ್ಲಿ ಉತ್ತಮ ಗುಣ, ಸಂಸ್ಕಾರ ಮತ್ತು ಸಾಮಾಜಿಕ ಜವಾಬ್ದಾರಿಯ ಮನೋಭಾವ ಬೆಳೆಸುವ...

ವಿಜಯಪುರ |ಗ್ರಾಮೀಣ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆಗೆ ವಿಜ್ಞಾನಜಾತ್ರೆ ಪೂರಕ: ಮಧು ಬಂಗಾರಪ್ಪ

ಗ್ರಾಮೀಣ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ, ಸಂಶೋಧನಾ ಪ್ರವೃತ್ತಿ ಹಾಗೂ ಸೃಜನಶೀಲತೆ ಬೆಳೆಸಲು...

ಕಾರವಾರಕ್ಕೆ ಆಗಮಿಸಿದ ವಂದೇ ಭಾರತ್ ಎಕ್ಸ್‌ಪ್ರೆಸ್: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಂದ ಸ್ವಾಗತ

ಬೆಂಗಳೂರು–ಮಡಗಾಂವ್ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಶುಕ್ರವಾರದಿಂದ...

ಸಂವಿಧಾನ ಚಾಲ್ತಿಗೆ ತರುವಲ್ಲಿ ಶಾಸಕಾಂಗ ಎಡವಿದೆ: ಹಿರಿಯ ವಕೀಲ ರಂಜನ್ ರಾವ್

ಭಾರತದ ಜನತೆಗೆ ಭದ್ರತೆಯನ್ನು ಕಲ್ಪಿಸುವ ಸಂವಿಧಾನವು ಅಸ್ತಿತ್ವದಲ್ಲಿದ್ದರೂ ಅದನ್ನು ಚಾಲ್ತಿಗೆ ತರುವಲ್ಲಿ...