RSS ಪಥಸಂಚಲನದಲ್ಲಿ ಭಾಗಿ: ಯಶಸ್ವಿನಿ ಟ್ರಸ್ಟ್‌ನಿಂದ ಡಾ. ಶ್ರೀಧರ್ ಹೆಸರು ಕೈಬಿಟ್ಟ ಸರ್ಕಾರ

Date:

ಆರ್‌ಎಸ್‌ಎಸ್‌(RSS) ಪಥಸಂಚಲನದಲ್ಲಿ ಗಣವಸ್ತ್ರ ಧರಿಸಿ ಭಾಗಿಯಾಗಿದ್ದ ತಿಪಟೂರಿನ ವೈದ್ಯ ಶ್ರೀಧರ್ ಹೆಸರನ್ನು ಯಶಸ್ವಿನಿ ಟ್ರಸ್ಟ್‌ನಿಂದ ತೆಗೆದುಹಾಕಲಾಗಿದೆ. ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ವೈದ್ಯರಿಗೆ ಸರ್ಕಾರದ ಯಶಸ್ವಿನಿ ಟ್ರಸ್ಟ್‌ ಟ್ರಸ್ಟಿಯಾಗಿ ನೇಮಿಸಲಾಗಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.

- Advertisement -

ಇದು ಕಾಂಗ್ರೆಸ್‌ ಪಕ್ಷವು ಹೊಂದಿರುವ ಕೋಮುವಾದಿ ವಿರೋಧಿ ಮತ್ತು ಸಾಮರಸ್ಯ ನೀತಿಗೆ ವಿರುದ್ಧವಾಗಿದೆ. ಕ್ಷಣವೇ ಡಾ. ಶ್ರೀಧರ್ ಅವರನ್ನು ಟ್ರಸ್ಟಿಯಾಗಿ ನೇಮಿಸಿ ಹೊರಡಿಸಿರುವ ಸುತ್ತೋಲೆಯನ್ನು ಹಿಂಪಡೆಯಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸಿ.ಬಿ ಶಶಿಧರ್ ಒತ್ತಾಯಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ತುಮಕೂರು | RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ವೈದ್ಯನಿಗೆ ‘ಯಶಸ್ವಿನಿ ಟ್ರಸ್ಟ್‌’ನಲ್ಲಿ ಸ್ಥಾನ; ಕಾಂಗ್ರೆಸ್‌ ಕಾರ್ಯಕರ್ತರ ವಿರೋಧ

ತೀವ್ರ ವಿರೋಧಗಳ ಬೆನ್ನಲ್ಲೇ ಯಶಸ್ವಿನಿ ಟ್ರಸ್ಟ್‌ನ ಟ್ರಸ್ಟಿ ಸ್ಥಾನದಿಂದ ವೈದ್ಯ ಶ್ರೀಧರ್ ಹೆಸರನ್ನು ಕೈಬಿಡಲಾಗಿದೆ. ಈ ಸಂಬಂಧ ಸರ್ಕಾರ ಆದೇಶವನ್ನು ಹೊರಡಿಸಿದ್ದು, “ಆಡಳಿತಾತ್ಮಕ ದೃಷ್ಟಿಯಿಂದ ಈ ಹಿಂದಿನ ಆದೇಶವನ್ನು ಮಾರ್ಪಡಿಸಿ, ಡಾ. ಶೀಧರ್ ಅವರ ಹೆಸರನ್ನು ಕೈಬಿಡಲಾಗಿದೆ” ಎಂದು ತಿಳಿಸಿದೆ.

ಈ ಹಿಂದಿನ ಆದೇಶ ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಶಶಿಧರ್, “ಅಕ್ಟೋಬರ್ 12ರಂದು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ಆಯೋಜಿಸಿತ್ತು. ಆ ಕಾರ್ಯಕ್ರಮದಲ್ಲಿ ಕುಮಾರ್ ಆಸ್ಪತ್ರೆಯ ಡಾ. ಶ್ರೀಧರ್ ಅವರು ಗಣವೇಶ ಧರಿಸಿ ಭಾಗಿಯಾಗಿದ್ದರು. ಮಾತ್ರವಲ್ಲದೆ, ಆ್ಯಂಬುಲೆನ್ಸ್‌ಅನ್ನೂ ಕೊಂಡೊಯ್ದಿದ್ದರು. ಅವರನ್ನು ಸರ್ಕಾರದ ‘ಯಶಸ್ವಿನಿ ಟ್ರಸ್ಟ್‌’ಗೆ ಟ್ರಸ್ಟಿಯಾಗಿ ನೇಮಿಸುವಂತೆ ಕಾಂಗ್ರೆಸ್‌ ಶಾಸಕ ಪಡಕ್ಷರಿ ಅವರು ಶಿಫಾರಸು ಮಾಡಿದ್ದರು. ಅವರ ಶಿಫಾರಸಿನಂತೆ ಸರ್ಕಾರವು ಡಾ. ಶ್ರೀಧರ್ ಅವರನ್ನು ಟ್ರಸ್ಟಿಯಾಗಿ ನೇಮಿಸಿದೆ. ಇದು, ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಕಳವಳ ಹುಟ್ಟುಹಾಕಿದೆ” ಎಂದು ತಿಳಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...