ದೊಡ್ಡಬಳ್ಳಾಪುರ | ಮಹಿಳೆಯ ಹೊಟ್ಟೆಯಲ್ಲಿ 5 ಕೆಜಿ ಗಾತ್ರದ ಗೆಡ್ಡೆ; ಹೊರತೆಗೆಯುವಲ್ಲಿ ವೈದ್ಯರು ಯಶಸ್ವಿ

Date:

ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದ ಮಹಿಳೆಯೊಬ್ಬರು ಹೊಟ್ಟೆನೋವೆಂದು ನರಳುತ್ತಿದ್ದರು. ತಪಾಸಣೆ ನಡೆಸಿದ ವೈದ್ಯರು ಆಕೆಯ ಹೊಟ್ಟೆಯಲ್ಲಿದ್ದ 5 ಕೆಜಿ ಗಾತ್ರದ ಗೆಡ್ಡೆಯನ್ನು ಶಸ್ತ್ರ ಚಿಕಿತ್ಸೆ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ 45 ವರ್ಷದ ಮಹಿಳೆ ಕಳೆದ ಮೂರು ತಿಂಗಳಿಂದ ಹೊಟ್ಟೆನೋವಿನಿಂದ ನರಳುತ್ತಿದ್ದರು. ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದ ಆಕೆ, ವೈದ್ಯರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಡಾ. ಅರ್ಚನಾ ಅವರು ಪರೀಕ್ಷೆ ನಡೆಸಿದ್ದು, ಹೊಟ್ಟೆಯಲ್ಲಿ 5 ಕೆಜಿ ಗಾತ್ರದ ಗೆಡ್ಡೆ ಇರುವುದು ಸ್ಕ್ಯಾನಿಂಗ್​ನಲ್ಲಿ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ವರದಹಳ್ಳಿ ಸುತ್ತಲ ಗ್ರಾಮಗಳಿಗೆ ಕೋಳಿ ತರದಂತೆ ನಾಕಾಬಂಧಿ; ಹಕ್ಕಿಜ್ವರದ ಹಿನ್ನೆಲೆ ಜಿಲ್ಲಾಧಿಕಾರಿ ಆದೇಶ

ಬಳಿಕ ಡಾ. ಅರ್ಚನಾ ನೇತೃತ್ವದ ತಂಡ ಸತತ ಎರಡು ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಗೆಡ್ಡೆಯನ್ನು ಹೊರಗೆ ತೆಗೆದಿದ್ದಾರೆ. ಇದೀಗ ಮಹಿಳೆಯ ಆರೋಗ್ಯ ಸ್ಥಿರವಾಗಿದ್ದು, ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚಿನ ಪರೀಕ್ಷೆಗಾಗಿ ಗೆಡ್ಡೆಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಶಸ್ತ್ರಚಿಕಿತ್ಸೆ ನಡೆಸಿದ ಡಾ.ಅರ್ಚನಾ ನೇತೃತ್ವದ ವೈದ್ಯರ ತಂಡವನ್ನು ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ರಮೇಶ್, ಟಿಎಚ್ಒ ಡಾ. ಶಾರದಾ ನಾಗನಾಥ್ ಹಾಗೂ ಡಾ. ಮಂಜುನಾಥ್ ಅಭಿನಂದಿಸಿದ್ದಾರೆ.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ಒಗ್ಗೂಡಿದ ಪ್ರಗತಿಪರ ಧ್ವನಿಗಳು

ಸಂವಿಧಾನ, ಪ್ರಜಾಪ್ರಭುತ್ವ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಾಮಾಜಿಕ ಸೌಹಾರ್ದತೆಯ ರಕ್ಷಣೆಗಾಗಿ ಧಾರವಾಡದಲ್ಲಿ...

ಮರಗಳೇ ಇಲ್ಲದ ಜಾಗಕ್ಕೆ ಅರಣ್ಯ ಇಲಾಖೆಯ ಆಕ್ಷೇಪ; ಸಾರ್ವಜನಿಕರ ಆಕ್ರೋಶ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕೇನೆಕುಂಜದ ಸರಕಾರಿ ಜಮೀನಿನಲ್ಲಿ...

ರಾಯಚೂರು | ಬರ ಪರಿಹಾರ ಸಮೀಕ್ಷೆ: ಪಾಟ್ನಾದ ಭತ್ತದ ಅಧಿಕಾರಿ ಭೇಟಿ

ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಾನಸಿಂಗ್ ಅವರ ನೇತೃತ್ವದ ಅಧಿಕಾರಿಗಳ...

161 ಕಾಮಗಾರಿಗಳಿಗೆ ಶಂಕುಸ್ಥಾಪನೆ-ಉದ್ಘಾಟನೆ; ಜನಕಲ್ಯಾಣವೇ ಸರ್ಕಾರದ ಸಂಕಲ್ಪ: ಸಿದ್ದರಾಮಯ್ಯ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲಾಗಿದ್ದು, ದಾಸನೂರು...