ದೊಡ್ಡಬಳ್ಳಾಪುರ | ಸೂರತ್ ಸೀರೆಗಳ ನಿಷೇಧ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬಂದ್; ನೀರಸ ಪ್ರತಿಕ್ರಿಯೆ

Date:

ನೇಯ್ಗೆ ಉದ್ಯಮವನ್ನು ಉಳಿಸಿ ಮುಂದುವರೆಸುವ ನಿಟ್ಟಿನಲ್ಲಿ ಸೂರತ್ ಸೀರೆಗಳ ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನೇಕಾರರ ಸಂಘದಿಂದ ಇಂದು ದೊಡ್ಡಬಳ್ಳಾಪುರ ನಗರದಲ್ಲಿ ಬಂದ್‌ಗೆ ಕರೆ ನೀಡಲಾಗಿತ್ತು.

- Advertisement -

ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್‌ಗೆ ಕರೆ ನೀಡಿದ್ದರೂ, ನೇಕಾರರ ಸಂಘದ ಬಂದ್‌ಗೆ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ನಗರದಲ್ಲಿ ಬಸ್‌ಗಳ ಸಂಚಾರ ಎಂದಿನಂತಿತ್ತು. ಸಾರ್ವಜನಿಕರು ಸಹ ಸಹಜವಾಗಿ ಓಡಾಟ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕೆಲವು ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಮುಚ್ಚಿದ್ದರೆ, ಬಹುತೇಕ ಅಂಗಡಿಗಳು ಎಂದಿನಂತೆ ತೆರೆಯಲ್ಪಟ್ಟಿದ್ದವು. ಯಾವುದೇ ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಬಂದ್ ಮಾಡಿಸಬಾರದೆಂದು ಪೊಲೀಸ್ ಇಲಾಖೆ ಸ್ಪಷ್ಟ ಸೂಚನೆ ನೀಡಿದ್ದು, ನೇಕಾರರ ಸಂಘವು ಅಂಗಡಿ ಮಾಲೀಕರಿಗೆ ಸ್ವಯಂ ಇಚ್ಛೆಯಿಂದ ಬಂದ್‌ಗೆ ಸಹಕರಿಸುವಂತೆ ಮನವಿ ಮಾಡಿಕೊಂಡಿತು.

ಇದನ್ನೂ ಓದಿ: ದೊಡ್ಡಬಳ್ಳಾಪುರ | ಅನುಮತಿ ಇಲ್ಲದೆ ಹೊಸ ವರ್ಷದ ಪಾರ್ಟಿ; ರೆಸಾರ್ಟ್ ಮೇಲೆ ಪೊಲೀಸ್ ದಾಳಿ

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಪೊಲೀಸ್ ಬಂದೋಬಸ್ತ್‌ ಏರ್ಪಡಿಸಲಾಗಿತ್ತು. ವಿಶೇಷವಾಗಿ ದೊಡ್ಡಬಳ್ಳಾಪುರ ನಗರ ಬಸ್ ನಿಲ್ದಾಣದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿತ್ತು. ನೇಯ್ಗೆ ಉದ್ಯಮ ಸಂಕಷ್ಟದಲ್ಲಿದ್ದು, ಸ್ಥಳೀಯ ನೇಕಾರರ ಬದುಕು ಉಳಿಸುವ ಉದ್ದೇಶದಿಂದಲೇ ಬಂದ್‌ಗೆ ಕರೆ ನೀಡಲಾಗಿದೆ ಎಂದು ನೇಕಾರರ ಸಂಘದ ಮುಖಂಡರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...