ದೊಡ್ಡಬಳ್ಳಾಪುರ | ಪಾರ್ಕ್ ಜಾಗದಲ್ಲಿ ಕೈಗಾರಿಕಾ ತ್ಯಾಜ್ಯ ಹೂತಿದ್ದನ್ನು ಪ್ರಶ್ನಿಸಿದ ಗ್ರಾಮಸ್ಥರ ಮೇಲೆ ಗುತ್ತಿಗೆದಾರನ ದರ್ಪ

Date:

ದೊಡ್ಡಬಳ್ಳಾಪುರದಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಉದ್ಯಾನ(ಪಾರ್ಕ್‌ ಜಾಗ)ಕ್ಕೆಂದು ಮೀಸಲಿಟ್ಟ ಜಾಗದಲ್ಲಿ ಕೈಗಾರಿಕೆ ತ್ಯಾಜ್ಯವನ್ನು ಹೂತುಹಾಕಲಾಗುತ್ತಿತ್ತು. ಇದನ್ನು ರೆಡ್ ಹ್ಯಾಂಡ್ ಆಗಿ ಪತ್ತೆಹಚ್ಚಿದ ಗ್ರಾಮಸ್ಥರು ಗುತ್ತಿಗೆದಾರನನ್ನು ಪ್ರಶ್ನೆ ಮಾಡಿದರೆ ಆತ ಗ್ರಾಮಸ್ಥರ ಮೇಲೆಯೇ ದರ್ಪ ಮೆರೆದಿದ್ದಾನೆ.

- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಓಬದೇನಹಳ್ಳಿ ಕೈಗಾರಿಕಾ ಪ್ರದೇಶ ಮತ್ತು ಅಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿ ಗಡಿಭಾಗದಲ್ಲಿನ ಉದ್ಯಾನಕ್ಕೆ ಮೀಸಲಿಟ್ಟ ಜಾಗ, ಸುಟ್ಟಘಟ್ಟ ಗ್ರಾಮಕ್ಕೆ ಸೇರಿದ ಈ ಜಾಗದಲ್ಲಿ ಕಸ ತ್ಯಾಜ್ಯ ವಿಲೇವಾರಿ ಮಾಡುವ ಗುತ್ತಿಗೆದಾರ ನಂಜೇಗೌಡ ಎಂಬಾತ ಯಾರಿಗೂ ಗೊತ್ತಾಗದಂತೆ ಗುಂಡಿ ತೋಡಿ ಕೈಗಾರಿಕಾ ತ್ಯಾಜ್ಯವನ್ನು ಹೂತು ಹಾಕುತ್ತಿದ್ದಾನೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಓಬದೇನಹಳ್ಳಿ ನಿವಾಸಿ ಮುನಿರಾಜು ಮಾತನಾಡಿ, “ಥರ್ಮಾಕೋಲ್, ಆಹಾರ ತ್ಯಾಜ್ಯ, ಮೆಡಿಕಲ್ ವೇಸ್ಟೇಜ್, ರಾಸಾಯನಿಕ ಯುಕ್ತ ತ್ಯಾಜ್ಯವನ್ನು ತಂದು ಪಾರ್ಕ್‌ ಜಾಗದಲ್ಲಿ ಸುರಿಯಲಾಗುತ್ತಿದೆ. ಈ ತ್ಯಾಜ್ಯಕ್ಕೆ ಬೆಂಕಿ ಹಚ್ಚುತ್ತಾರೆ. ಮಣ್ಣುಸುರಿದು ಮುಚ್ಚುತ್ತಾರೆ. ಬೆಂಕಿ ಹಚ್ಚಿದಾಗ ಊರೆಲ್ಲ ದಟ್ಟ ಹೊಗೆಯಿಂದ ಆವರಸಿಕೊಳ್ಳುತ್ತದೆ. ಇದರಿಂದ ಯಾರೂ ಮನೆಗಳಲ್ಲಿ ವಾಸ ಮಾಡುವುದಕ್ಕೆ ಆಗುವುದಿಲ್ಲ. ಗುಡ್ಡದಹಳ್ಳಿ ನಂಜೇಗೌಡ ಎಂಬ ವ್ಯಕ್ತಿ ಟ್ರ್ಯಾಕ್ಟರ್ ಮೂಲಕ ತ್ಯಾಜ್ಯವನ್ನು ತಂದು ಸುರಿಯುತ್ತಿರುವುದನ್ನು ಗಮನಿಸಿ ಪ್ರಶ್ನೆ ಮಾಡಿದಾಗ ನಮ್ಮ ಮೇಲೆ ದರ್ಪದಿಂದ ಮಾತನಾಡಿ, ಹಲ್ಲೆ ಮಾಡಲು ಮುಂದಾಗಿದ್ದಾನೆ. ನಮಗೆ ನಮ್ಮ ಮಕ್ಕಳಿಗೆ ಹಾಗೂ ಮುಂದಿನ ಪೀಳಿಗೆಗೆ ಏನಾದರೂ ಹೆಚ್ಚುಕಮ್ಮಿಯಾದರೆ ಯಾರು ಹೊಣೆ. ಈ ಕೂಡಲೇ ತ್ಯಾಜ್ಯ ಸುರಿಯುವುದನ್ನು ನಿಲ್ಲಿಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ‌ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಅಭಿವೃದ್ಧಿ ಅನುದಾನದಿಂದ ಪರಿಹಾರ ನೀಡುವುದು ಯಾವ ನ್ಯಾಯ: ಪಾಲಿಕೆ ಸದಸ್ಯ ಪ್ರಶ್ನೆ

ಸ್ಥಳಕ್ಕೆ ಅಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ನಂದಿನಿ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿ, “ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು, ಮಣ್ಣಿನಲ್ಲಿ ಹೂತುಹಾಕಿರುವ ತ್ಯಾಜ್ಯವನ್ನು ಹೊರಗೆ ತೆಗೆದು ಸೂಕ್ತ ರೀತಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡುವಂತೆ ಗುತ್ತಿಗೆದಾರನಿಗೆ ಎಚ್ಚರಿಕೆ ನೀಡಲಾಗಿದೆ. ತ್ಯಾಜ್ಯ ಸುರಿದ ಕೈಗಾರಿಕೆ ಮತ್ತು ಗುತ್ತಿಗೆದಾರನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...