ದೊಡ್ಡಬಳ್ಳಾಪುರ | ಅನುಮತಿ ಇಲ್ಲದೆ ಹೊಸ ವರ್ಷದ ಪಾರ್ಟಿ; ರೆಸಾರ್ಟ್ ಮೇಲೆ ಪೊಲೀಸ್ ದಾಳಿ

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ತೊಡಗಿದ್ದವರಿಗೆ ಪೊಲೀಸರು ಶಾಕ್ ನೀಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಹೆಗ್ಗಡಿಹಳ್ಳಿ ಸಮೀಪದ ಈಚೀಸ್ ರೆಸಾರ್ಟ್‌ನಲ್ಲಿ ಅನುಮತಿ ಇಲ್ಲದೆ ಮದ್ಯಪಾನ ಪಾರ್ಟಿ ಆಯೋಜಿಸಿದ್ದ ಆರೋಪದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

- Advertisement -

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಾಧಿಕ್ ಪಾಷ ಅವರ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು, ರೆಸಾರ್ಟ್‌ನಲ್ಲಿ ಸುಮಾರು 40 ಮಂದಿ ಯುವಕರು ಪಾರ್ಟಿ ಮಾಡುತ್ತಿದ್ದರೆಂದು ತಿಳಿದುಬಂದಿದೆ. ದಾಳಿ ವೇಳೆ ಸ್ಥಳದಿಂದ ಸಾಕಷ್ಟು ಮದ್ಯದ ಬಾಟಲಿಗಳು ಹಾಗೂ ಸೌಂಡ್ ಬಾಕ್ಸ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪೊಲೀಸರ ಅನುಮತಿ ಇಲ್ಲದೆ ಮದ್ಯದ ಪಾರ್ಟಿ ಆಯೋಜಿಸಿರುವುದು ಕಾನೂನು ಉಲ್ಲಂಘನೆಯಾಗಿದ್ದು, ಈ ಹಿನ್ನೆಲೆಯಲ್ಲಿ ಖಾಸಗಿ ರೆಸಾರ್ಟ್ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

ಇದನ್ನೂ ಓದಿ: ಬೆಂಗಳೂರು | ಲಂಚ ಪಡೆದು ಸಿಕ್ಕಿಬಿದ್ದ ACP

ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ನಿಗಾವಹಿಸಲಾಗಿದ್ದು, ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...