ದೊಡ್ಡಬಳ್ಳಾಪುರ |ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಕೆಐಎಡಿಬಿ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ

Date:

ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಕೆಐಎಡಿಬಿ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಸೇರಿದಂತೆ ಐದು ಗ್ರಾಮಗಳ ಸುಮಾರು 2100 ಎಕರೆ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವುದಕ್ಕೆ ರೈತರು ತೀವ್ರ ಆಕ್ರೋಶ ಹೊರಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ದೊಡ್ಡಬೆಳವಂಗಲ ಹೋರಾಟ ಕೇಂದ್ರದಿಂದ ದೇವನಹಳ್ಳಿ ತಾಲ್ಲೂಕಿನ ಜಿಲ್ಲಾಡಳಿತ ಭವನದವರೆಗೆ ನಡೆದ ರ್ಯಾಲಿಯಲ್ಲಿ 100ಕ್ಕೂ ಹೆಚ್ಚು ಟ್ರ್ಯಾಕ್ಟರ್‌ಗಳಲ್ಲಿ ರೈತರು ಭಾಗವಹಿಸಿ ಪ್ರತಿಭಟನೆ ನಡೆಸಿದರು.

ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.

ರೈತರ ಹೋರಾಟಕ್ಕೆ ಕನ್ನಡ ಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ವಿಶೇಷವಾಗಿ ಚನ್ನರಾಯಪಟ್ಟಣ ಭೂ ಸ್ವಾಧೀನ ಹೋರಾಟ ಸಮಿತಿಯೂ ಪ್ರತಿಭಟನೆಯಲ್ಲಿ ಭಾಗವಹಿಸಿತ್ತು.

ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕ ಧೀರಾಜ್ ಮುನಿರಾಜು ಹಾಗೂ ಮಾಜಿ ಶಾಸಕ ವೆಂಕಟರಮಣಯ್ಯ ಭಾಗವಹಿಸಿ ರೈತರ ಪರವಾಗಿ ಧ್ವನಿ ಎತ್ತಿದರು.

“ಫಲವತ್ತಾದ ಕೃಷಿ ಭೂಮಿ ನಮ್ಮ ಜೀವನಾಧಾರ. ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯಿಂದ ಕೂಡಲೇ ಹಿಂದೆ ಸರಿಯಬೇಕು. ನಮ್ಮಭೂಮಿ ನಮಗೇ ಉಳಿಯಬೇಕು. ಒಂದು ವೇಳೆ ಸರ್ಕಾರ ಈ ಪ್ರಕ್ರಿಯೆಯನ್ನು ಮುಂದುವರಿಸಿದರೆ ತಕ್ಕ ಪಾಠ ಕಲಿಸುತ್ತೇವೆ” ಎಂದು ರೈತರು ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ..? ಚಿಂತಾಮಣಿ | 10 ವರ್ಷ ಅಭಿವೃದ್ಧಿ ಮಾಡಲಿಲ್ಲ,ಮಾಡಿದ್ದು ಕುಚೇಷ್ಟೆ ಕುತಂತ್ರ

ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಆಗ್ರಹಿಸಿ ರೈತರು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹ: ಅ.9ರಂದು ಮತ ಕಾವಲು ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್...