ದೊಡ್ಡಬಳ್ಳಾಪುರ | 2028ರ ಚುನಾವಣೆಯಲ್ಲಿ ರಾಜ್ಯದ ಜನತೆ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ನೀಡಿ ಅಧಿಕಾರಕ್ಕೆ ತರಲಿದ್ದಾರೆ : ಸಚಿವ ಕೆ.ಹೆಚ್ ಮುನಿಯಪ್ಪ

Date:

ದೊಡ್ಡಬಳ್ಳಾಪುರ ತಾಲ್ಲೂಕಿನ ಶಿರವಾರ ಗ್ರಾಮದಲ್ಲಿ ₹1 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಸಚಿವ ಕೆ.ಹೆಚ್ ಮುನಿಯಪ್ಪ ಶಂಕುಸ್ಥಾಪನೆ ಮಾಡಿದರು.

- Advertisement -

ಈ ಸಂದರ್ಭದಲ್ಲಿ ಮಾತನಾಡಿ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಹಾಗೂ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವುದು ನನ್ನ ಬದ್ಧತೆಯಾಗಿದೆ. ಅಭಿವೃದ್ಧಿ ಕಾಮಗಾರಿಗಳ ಜೊತೆಗೆ ಜನಸಾಮಾನ್ಯರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ನಿವೇಶನ ರಹಿತ ಬಡ ಕುಟುಂಬಗಳಿಗೆ 500 ನಿವೇಶನಗಳನ್ನು ಹಂಚಿಕೆ ಮಾಡುವ ಕಾರ್ಯ ಪ್ರಗತಿಯಲ್ಲಿದ್ದು, ಇದೇ ತಿಂಗಳ ಅಂತ್ಯ ಅಥವಾ ಜೂನ್ ತಿಂಗಳಲ್ಲಿ ವಿತರಣೆ ಮಾಡುವ ಉದ್ದೇಶ ಹೊಂದಿದ್ದೇವೆ.

ರಾಜ್ಯ ಸರ್ಕಾರವು ಅನ್ನಭಾಗ್ಯ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜನಜೀವನದಲ್ಲಿ ಮಹತ್ವದ ಬದಲಾವಣೆ ತರುವ ಕೆಲಸ ಮಾಡುತ್ತಿದೆ. ಹಸಿವಿನಿಂದ ಯಾರೂ ಮಲಗಬಾರದು ಎಂಬ ಉದ್ದೇಶದಿಂದ ಪಡಿತರ ಅಕ್ಕಿ ವಿತರಣೆ ಸಮರ್ಪಕವಾಗಿ ನಡೆಯುತ್ತಿದೆ.

ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ನೀಡಿ ಅಧಿಕಾರಕ್ಕೆ ತರಲಿದ್ದಾರೆ ಎಂಬ ವಿಶ್ವಾಸವಿದೆ.

ಶಿರವಾರ ಗ್ರಾಮದಲ್ಲಿನ ರಸ್ತೆ, ಚರಂಡಿ, ನಿವೇಶನ ಹಕ್ಕುಪತ್ರ, ಕನಕ ಭವನ ನಿರ್ಮಾಣ ಸೇರಿದಂತೆ ವಿವಿಧ ಸಾರ್ವಜನಿಕ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲಾಗುವುದು. ಜೊತೆಗೆ ಗ್ರಾಮಸ್ಥರಿಗೆ ಸ್ಥಳೀಯ ಮಟ್ಟದಲ್ಲೇ ಪಡಿತರ ಅಕ್ಕಿ ವಿತರಣೆ ವ್ಯವಸ್ಥೆ ಕಲ್ಪಿಸಲಾಗುವುದು.

ಜಿಲ್ಲಾ ಪ್ರವಾಸದ ವೇಳೆ ಎಲ್ಲಾ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದಿಸಿ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನು ಓದಿದ್ದೀರಾ..? ಚಿಂತಾಮಣಿ | ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ

ಈ ಕಾರ್ಯಕ್ರಮದಲ್ಲಿ ಬಯಪ ಸದಸ್ಯರಾದ ಪ್ರಸನ್ನಕುಮಾರ್, ಕೆಪಿಸಿಸಿ ಸದಸ್ಯರಾದ ಮುನಿರಾಜು, ತೂಬಗೇರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಸಿದ್ಧಪ್ಪ, ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಘಾಟಿ ಸುಬ್ರಮಣ್ಯ ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ಸದಸ್ಯರು, ದೊಡ್ಡಬಳ್ಳಾಪುರ ತಹಶೀಲ್ದಾರ್ ಮಲ್ಲಪ್ಪ, ಹಣಬೆ ಗ್ರಾಪಂ ಪಿಡಿಒ ಸೌಮ್ಯ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...