ಚಿತ್ರದುರ್ಗ | ಉತ್ತಮ ರಸ್ತೆಗಾಗಿ ಆಗ್ರಹ: ಸಿಎಂ ಭೇಟಿ ಮಾಡಲು ‘ಡಾಗ್ ಸರ್ಕಲ್’ ನಿವಾಸಿಗಳ ನಿರ್ಧಾರ

Date:

Advertisements

ಎರಡು ವರ್ಷಗಳಿಂದಲೂ ಉತ್ತಮ ರಸ್ತೆಗಾಗಿ ಆಗ್ರಹಿಸುತ್ತಿರುವ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಚಂದ್ರ ಲೇಔಟ್‌ನಲ್ಲಿರುವ ಡಾಗ್ ಸರ್ಕಲ್ ನಿವಾಸಿಗಳು ಮತ್ತೆ ಹೋರಾಟಕ್ಕಿಳಿದಿದ್ದು, ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ತೀರ್ಮಾನಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ಟೌನ್ 3 ನೇ ವಾರ್ಡ್ ಚಂದ್ರಾ ಲೇ ಔಟ್ ನಲ್ಲಿ ದಾರಿ ಸಮಸ್ಯೆ ಕುರಿತು ತುರ್ತು ಸಭೆ ನಡೆಸಿದ ಡಾಗ್ ಸರ್ಕಲ್ ನಿವಾಸಿಗಳು, ನಗರಸಭೆ ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ಚಂದ್ರ ಲೇಔಟ್ ನಾಗರೀಕ ಹಿತರಕ್ಷಣಾ ಸಮಿತಿ ಗೌರವಾಧ್ಯಕ್ಷ ಎಸ್ ವಿ ರಂಗನಾಥ್ ಮಾತನಾಡಿ, “ಚಂದ್ರ ಲೇಔಟ್ ಮತ್ತು ಡಾಗ್ ಸರ್ಕಲ್ ನಿವಾಸಿಗಳು ಹಲವಾರು ವರ್ಷಗಳಿಂದ ಸಮರ್ಪಕ ರಸ್ತೆ ಸೌಲಭ್ಯಕ್ಕೆ ಒತ್ತಾಯಿಸುತ್ತಿದ್ದು, ಪ್ರತಿಭಟನೆ ನಡೆಸಿದ್ದೇವೆ. ಈ ಹಿನ್ನೆಲೆಯಲ್ಲಿ ಸಭೆ ಸೇರಿದ ನಿವಾಸಿಗಳು ಬೆಳಗಾವಿ ಅಧಿವೇಶನದ ಬಳಿಕ ಡಾಗ್ ಸರ್ಕಲ್ ದಾರಿ ಸಮಸ್ಯೆ ಇತ್ಯರ್ಥಕ್ಕೆ ಮುಖ್ಯಮಂತ್ರಿ ಭೇಟಿ ಮಾಡಲು ತೀರ್ಮಾನಿಸಿದೆವು” ಎಂದು ತಿಳಿಸಿದರು.

Advertisements

“ಜಿಲ್ಲಾಧಿಕಾರಿ ಆದೇಶ, ಜಿಲ್ಲಾ ಉಸ್ತುವಾರಿ ಸಚಿವರ ಪತ್ರ, ಲೋಕೋಪಯೋಗಿ ಸಚಿವರ ಪತ್ರ, ಮುಖ್ಯಮಂತ್ರಿಗಳ ಪತ್ರಕ್ಕೂ ಜಗ್ಗದ ಅಧಿಕಾರಿಗಳು ಐ ಪಿ ಜಿ ಆರ್ ಎಸ್ ನಲ್ಲಿ ಸಲ್ಲಿಸಿದ ದೂರುಗಳನ್ನು ಪದೇ ಪದೇ ಅದೇ ಸುಳ್ಳು ವರದಿ ಅಪ್ಲೋಡ್ ಮಾಡಿ ಕಂಪ್ಲೆಂಟ್ ಮುಕ್ತಾಯ ಮಾಡಿರುತ್ತಾರೆ. ಬಬ್ಬೂರ್ ಸರ್ವೇ ನಂಬರ್ 39 ಮತ್ತು 40 ರ ಮದ್ಯದಲ್ಲಿರುವ ದಾರಿಗೆ ಹೊಂದಿಕೊಂಡ 7 ನಗರ ಯೋಜನೆ ಅನುಮೋದಿತ ಬಡಾವಣೆ ನಕ್ಷೆಗಳಿದ್ದು. ನಿಖರವಾದ ಅಳತೆ ಮಾಡಿ ಒತ್ತುವರಿ ತೆರವು ಮಾಡಿಸಿ ರಸ್ತೆ ಮಾಡಿಕೊಡಲು ನಗರಸಭೆ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ” ಎಂದು ಡಾಗ್ ಸರ್ಕಲ್ ನ ನಿವಾಸಿಗಳು ಗಂಭೀರ ಆರೋಪ ಮಾಡಿದ್ದಾರೆ.

“ಈ ಭಾಗದಲ್ಲಿ ಅಹಿಂದ ಕುಟುಂಬದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಮಳೆಗಾಲಕ್ಕೆ ಈ ರಸ್ತೆ ಕೆಸರುಗದ್ದೆಯಂತಾಗುತ್ತದೆ. ಬೇಸಿಗೆಯಲ್ಲಿ ತಗ್ಗು ಗುಂಡಿ ರಸ್ತೆ,ಕಲ್ಲು ಮುಳ್ಳು ಹಾವು ಚೇಳು ವಿಷ ಜಂತುಗಳ ನಡುವೆ ಜೀವದ ಹಂಗು ತೊರೆದು ಓಡಾಡಬೇಕಾಗಿದೆ. ಮೂಲಭೂತ ಸೌಕರ್ಯ ವಂಚಿತ ನಮ್ಮ ರಸ್ತೆಗಾಗಿನ ಹೋರಾಟ ಇಲ್ಲಿನ ಯಾವುದೇ ಬಡಾವಣೆ ಮಾಲೀಕರ ಪರವೂ ಅಲ್ಲ, ವಿರುದ್ಧವೂ ಅಲ್ಲ, ಮಾನವೀಯ ನೆಲೆಗಟ್ಟಿನಲ್ಲಿ ಗೌರವಯುತವಾಗಿ ಬದುಕುವ ಕಾನೂನುಬದ್ದ ರಸ್ತೆ ಹಕ್ಕಿಗಾಗಿ ಹೋರಾಟ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಉಡುಪಿ | ಪಂಚರ್ ಹಾಕುವ ವೇಳೆ ಟೈರ್ ಸ್ಫೋಟ: ಗಾಳಿಯಲ್ಲಿ ಹಾರಿಬಿದ್ದ ಯುವಕ; ವಿಡಿಯೋ ವೈರಲ್

“ಒಂದು ಬಡಾವಣೆ ರಸ್ತೆಗಾಗಿ ರಾಜ್ಯದ ಮುಖ್ಯಮಂತ್ರಿಗಳು ಪತ್ರ ಬರೆದಿದ್ದರೂ ಅವರ ಪತ್ರಕ್ಕೆ ಬೆಲೆ ಕೊಡದೆ ಸತಾಯಿಸುತ್ತಿರುವ ಹಿರಿಯೂರು ನಗರಸಭೆ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮತ್ತೊಮ್ಮೆ ದೂರು ಸಲ್ಲಿಸಲು ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು” ಎಂದು ಎಸ್ ವಿ ರಂಗನಾಥ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಸಿ ಜಿ ಗೌಡ,ಉಪಾಧ್ಯಕ್ಷ ಸ್ವಾಮಿ, ನಿರ್ದೇಶಕರಾದ ಷಫೀವುಲ್ಲಾ, ಶಶಿಕುಮಾರ್, ಅಶ್ವತ್ಥ ನಾರಾಯಣ, ಫಕೃದ್ಧೀನ್, ಪರಮೇಶ್ವರಪ್ಪ, ಗೋವರ್ದನ್, ಶ್ರೀನಿವಾಸ್, ಜಾಫರ್ ಷರೀಫ್, ಸನಾವುಲ್ಲ, ರಂಗಸ್ವಾಮಿ, ತಿಪ್ಪೇಸ್ವಾಮಿ, ಜಗದೀಶ್ ಅರಸ್, ನಾಗರಾಜ, ಆರ್ ಕೆ ಮಂಜು ಹಾಗೂ ಮಹಿಳೆಯರು ಮಕ್ಕಳು ಸೇರಿದಂತೆ ಮತ್ತಿತರರ ನಾಗರೀಕರು ಉಪಸ್ಥಿತರಿದ್ಧರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X