ಗೃಹಬಳಕೆಯ ಸಿಲಿಂಡರ್ ದರ ಮತ್ತೆ ಏರಿಕೆ: ಶ್ರೀನಿವಾಸಪುರದಲ್ಲಿ ₹955ಕ್ಕೆ ತಲುಪಿದ ಬೆಲೆ; ಜನಸಾಮಾನ್ಯರಲ್ಲಿ ಆತಂಕ

Date:

ದೇಶದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಬೆಲೆ ಏರಿಕೆಯ ನಡುವೆಯೇ ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರ ಮತ್ತೊಮ್ಮೆ ಹೆಚ್ಚಳಗೊಂಡಿದೆ. ಇದರ ಪರಿಣಾಮವಾಗಿ ಶ್ರೀನಿವಾಸಪುರ ಪಟ್ಟಣದಲ್ಲಿ 14.2 ಕೆ.ಜಿ. ಗೃಹಬಳಕೆಯ ಸಿಲಿಂಡರ್ ದರ ₹955ಕ್ಕೆ ತಲುಪಿದ್ದು, ಸಾಮಾನ್ಯ ಜನರು, ಮಧ್ಯಮ ವರ್ಗ ಹಾಗೂ ಕಡಿಮೆ ಆದಾಯದ ಕುಟುಂಬಗಳಲ್ಲಿ ಆತಂಕ ಉಂಟಾಗಿದೆ.

- Advertisement -

ಕಳೆದ ಕೆಲ ವರ್ಷಗಳಿಂದ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಆಹಾರ ಪದಾರ್ಥಗಳಂತಹ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವುದರಿಂದ ಕುಟುಂಬಗಳ ಮಾಸಿಕ ಖರ್ಚು ಗಣನೀಯವಾಗಿ ಹೆಚ್ಚಾಗಿದೆ. ಜೀವನ ನಿರ್ವಹಣೆ ದಿನದಿಂದ ದಿನಕ್ಕೆ ಕಷ್ಟಕರವಾಗುತ್ತಿದ್ದು, ಜನಸಾಮಾನ್ಯರು ಆರ್ಥಿಕ ಒತ್ತಡವನ್ನು ಎದುರಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಈ ಕುರಿತು ಪ್ರತಿಕ್ರಿಯಿಸಿದ ಶ್ರೀನಿವಾಸಪುರ ಕಸಬಾ ರೇಷ್ಮೆ ಬೆಳೆಗಾರರ ಹಾಗೂ ರೈತ ಸೇವಾ ಸಹಕಾರ ಸಂಘದ ಉಪಾಧ್ಯಕ್ಷ ಹಾಗೂ ಅಲ್ಪಸಂಖ್ಯಾತರ ಮುಖಂಡ ಶಬ್ಬೀರ್ ಅಹ್ಮದ್, ಗೃಹಬಳಕೆಯ ಅನಿಲ ಸಿಲಿಂಡರ್ ದರದಲ್ಲಿ ಆಗಿರುವ ಈ ಹೊಸ ಏರಿಕೆ ಸಾಮಾನ್ಯ ಜನರು, ಕಾರ್ಮಿಕರು, ರೈತರು ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಹೆಚ್ಚುವರಿ ಭಾರ ಉಂಟುಮಾಡಲಿದೆ ಎಂದು ಹೇಳಿದ್ದಾರೆ.

ಅವರು ಮುಂದುವರಿದು, ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನತೆ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ರಾಸಾಯನಿಕ ಗೊಬ್ಬರ, ಬೀಜ ಹಾಗೂ ಕೃಷಿ ಪರಿಕರಗಳ ಬೆಲೆ ಏರಿಕೆಯಿಂದ ರೈತರ ಪರಿಸ್ಥಿತಿಯೂ ಸಂಕಷ್ಟಕರವಾಗಿದೆ ಎಂದು ತಿಳಿಸಿದರು.

ಬೆಲೆ ಏರಿಕೆಯನ್ನು ನಿಯಂತ್ರಿಸಿ ಜನಸಾಮಾನ್ಯರಿಗೆ ನೆರವು ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತಕ್ಷಣ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಬ್ಬೀರ್ ಅಹ್ಮದ್ ಆಗ್ರಹಿಸಿದರು.

WhatsApp Image 2026 06 08 at 20.12.39

ಕೃಷಿ ಕ್ಷೇತ್ರವೂ ಈ ಬೆಲೆ ಏರಿಕೆಯಿಂದ ತೀವ್ರವಾಗಿ ಬಾಧಿತವಾಗಿದೆ. ಉತ್ಪಾದನಾ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಸೂಕ್ತ ಲಾಭ ದೊರೆಯದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಕೃಷಿ ಆರ್ಥಿಕತೆ ಮತ್ತಷ್ಟು ಕುಸಿಯುವ ಆತಂಕ ವ್ಯಕ್ತವಾಗಿದೆ ಎಂದು ಅವರು ಹೇಳಿದರು.

ಇದನ್ನು ಓದಿದ್ದೀರಾ..?ಕೋಲಾರ | ಎಸ್ಐಆರ್ ನೋಂದಣಿಗೆ ಸಮಯಾವಕಾಶ ನೀಡುವಂತೆ ಡಿಸಿಗೆ ಜನಪರ ಸಂಘಟನೆಗಳ ಒತ್ತಾಯ

ಇದರಿಂದ ಸಾರ್ವಜನಿಕ ವಲಯದಲ್ಲಿಯೂ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದ್ದು, ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕುಟುಂಬಗಳ ಆರ್ಥಿಕ ವ್ಯವಸ್ಥೆ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಬೆಲೆ ಸ್ಥಿರತೆಗಾಗಿ ಸರ್ಕಾರ ಸ್ಪಷ್ಟ ಹಾಗೂ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಒತ್ತಾಯ ಸಾರ್ವಜನಿಕರಿಂದ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ...

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...