ಲಂಚ ಕೊಡಬೇಡಿ, ನೀವೂ ಸ್ವೀಕರಿಸಬೇಡಿ; ಅಧಿಕಾರಿಗಳಿಗೆ ಶಾಸಕ ಶಿವಗಂಗಾ ತಾಕೀತು

Date:

  • ಕೆಲಸ ಮಾಡಲು ಕಷ್ಟವಾದರೆ ವರ್ಗಾವಣೆ ಮಾಡಿಸಿಕೊಂಡು ಹೋಗಬಹುದು
  • ತಾಲೂಕಿನ ಪ್ರತಿಯೊಂದು ಕಚೇರಿಯಲ್ಲೂ ಲಂಚ ತೆಗೆದುಕೊಳ್ಳುವ ಪ್ರವೃತ್ತಿ ಇದೆ

ಚನ್ನಗಿರಿ ಕ್ಷೇತ್ರದಲ್ಲಿ ಇನ್ನು ಮುಂದೆ ಪಾರದರ್ಶಕ ಜನಸ್ನೇಹಿ ಆಡಳಿತ ನೀಡಬೇಕೆಂಬುದು ನನ್ನ ಗುರಿಯಾಗಿದೆ. ನನಗೆ ಯಾವ ಅಧಿಕಾರಿಗಳೂ ಲಂಚ ಕೊಡಬೇಡಿ, ನೀವು ತೆಗೆದುಕೊಳ್ಳದೇ ಜನರ ಕಷ್ಟಗಳಿಗೆ ನೆರವಾಗಿ ಎಂದು ನೂತನ ಶಾಸಕ ಬಸವರಾಜು ವಿ. ಶಿವಗಂಗಾ ಸೂಚನೆ ನೀಡಿದರು.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಕಚೇರಿ ಸಭಾಂಗಣದಲ್ಲಿ ಪ್ರಥಮ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, “ನಾನು ಶಾಸಕನಾಗಿದ್ದೇನೆ ಎಂಬ ಅಹಂಕಾರ ನನಗೆ ಇಲ್ಲ. ಹಿಂದೆ ನೀವು ಹೇಗೆ ಕೆಲಸ ನಿರ್ವಹಿಸಿದ್ದೀರಿ ಎಂಬ ಬಗ್ಗೆ ಕೇಳಲು ಹೋಗುವುದಿಲ್ಲ. ಆದರೆ, ಇನ್ನು ಮುಂದೆ ಕ್ಷೇತ್ರದಲ್ಲಿ ಲಂಚ ಮುಕ್ತ ಕಚೇರಿಗಳಾಗಬೇಕು” ಎಂದರು.

“ಕಚೇರಿಗಳು ದೇವಾಲಯಗಳಿದ್ದಂತೆ. ನಾನಾ ಇಲಾಖೆಗಳಲ್ಲಿನ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದರೆ ಕ್ಷೇತ್ರದ ಪ್ರಗತಿಗೆ ಸಹಕಾರಿಯಾಗುತ್ತದೆ. ನೌಕರರು ಕೇಂದ್ರ ಸ್ಥಳದಲ್ಲಿದ್ದು, ಕರ್ತವ್ಯ ನಿರ್ವಹಿಸಬೇಕು. ಇದರಲ್ಲಿ ಲೋಪಗಳಾದರೆ ನಾನು ಸಹಿಸುವುದಿಲ್ಲ” ಎಂದು ಎಚ್ಚರಿಕೆ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮೊದಲು ಜನರನ್ನು ಕಚೇರಿಗಳಿಗೆ ಪದೇಪದೆ ಅಲೆದಾಡಿಸುವುದು ಸಾಮಾನ್ಯವಾಗಿತ್ತು. ಇನ್ನು ಮುಂದೆ ಜನರನ್ನು ಕಚೇರಿಗಳಿಗೆ ಅಲೆದಾಡಿಸಬೇಡಿ. ಇಲ್ಲಿ ಕೆಲಸ ಮಾಡಲು ಕಷ್ಟವಾದರೆ ಬೇರೆಡೆ ವರ್ಗಾವಣೆ ಮಾಡಿಸಿಕೊಂಡು ಹೋಗಬಹುದು” ಎಂದು ಸಲಹೆ ನೀಡಿದರು.

“ತಾಲೂಕಿನ ಪ್ರತಿಯೊಂದು ಇಲಾಖೆಯ ಕಚೇರಿಯಲ್ಲೂ ಲಂಚ ತೆಗೆದುಕೊಳ್ಳುವ ಪ್ರವೃತ್ತಿ ಇದೆ ಎಂದು ಜನರು ದೂರುತ್ತಿದ್ದಾರೆ. ಹೀಗಾಗಿ ಮೊದಲು ಇದನ್ನು ಸರಿಪಡಿಸಿಕೊಳ್ಳಿ. ಆಹಾರ ಪದಾರ್ಥಗಳ ವಿತರಣೆಯಲ್ಲಿ
ಕಡಿಮೆ ಕೊಡುವುದು, ಗ್ರಾಹಕರಿಂದ ಹಣ ವಸೂಲಿ ಮಾಡುವುದನ್ನು ಕೂಡಲೇ ನಿಲ್ಲಿಸಬೇಕು” ಎಂದು ನಿರ್ದೇಶಿಸಿದರು.

ಈ ಸುದ್ದಿ ಓದಿದ್ದೀರಾ? ಈಗ ಬಿತ್ತರವಾದ ಪಟ್ಟಿ ನಿಜ; ಖಾತೆ ಹಂಚಿಕೆ ಬಗ್ಗೆ ಸ್ಪಷ್ಟನೆ ನೀಡಿದ ಸತೀಶ್ ಜಾರಕಿಹೊಳಿ

ತಹಶೀಲ್ದಾರ್ ಪಿ ಎಸ್ ಎರ್ರಿಸ್ವಾಮಿ ಮಾತನಾಡಿ, “ಪ್ರಕೃತಿ ವಿಕೋಪದಿಂದ ಆಗುವ ಅನಾಹುತಗಳ ಬಗ್ಗೆ ಈಗಾಗಲೇ ನೇಮಕ ಮಾಡಿರುವ ಕಂದಾಯ ಅಧಿಕಾರಿಗಳು ಕಾಲ ಕಾಲಕ್ಕೆ ಮಾಹಿತಿ ನೀಡುತ್ತಿರಬೇಕು. ಈಗಾಗಲೇ ಪ್ರಕೃತಿ ವಿಕೋಪಕ್ಕೆ ಈಡಾಗಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದ್ದೇವೆ” ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಬಿಇಒ ಕೆ ಮಂಜುನಾಥ್, ಗ್ರೇಡ್-2 ತಹಶೀಲ್ದಾರ್ ರುಕ್ಕಿಣಿಬಾಯಿ, ಸಿಪಿಐ ಮಧು, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರೋಹಿತ್‌, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಚ್‌ ಎಸ್ ಅರುಣ್ ಕುಮಾರ್ ಮತ್ತು ಶಿಕ್ಷಣ ಇಲಾಖೆ, ಕಂದಾಯ ಇಲಾಖೆ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಂಗನಾ ರಣಾವತ್ ಬಗ್ಗೆ ವಿವಾದಾತ್ಮಕ ಹೇಳಿಕೆ; ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ

ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಖ್ಯಾತ ನಟಿ ಕಂಗನಾ ರಣಾವತ್...

ಬೀದರ್‌ | ಕೇಂದ್ರ ಸಚಿವ ಭಗವಂತ ಖೂಬಾಗೆ ಇದು ಕೊನೆ ಚುನಾವಣೆ: ಸಚಿವ ಈಶ್ವರ ಖಂಡ್ರೆ

ಕೇಂದ್ರ ಸಚಿವ ಭಗವಂತ ಖೂಬಾ ಅವರ ದುರಂಕಾರ, ಅಧಿಕಾರದ ದರ್ಪ ಹಾಗೂ...

ಲೋಕಸಭೆ ಕದನ | ಸಂಘರ್ಷ ಪೀಡಿತ ಮಣಿಪುರದಲ್ಲಿ ಬಿಜೆಪಿ ಸ್ಥಿತಿ ಏನಾಗಿದೆ?

ಮಣಿಪುರದಲ್ಲಿ ಬಿಜೆಪಿ ಕಳೆದೆರಡು ಚುನಾವಣೆಯಲ್ಲೂ ಮತಪ್ರಮಾಣದಲ್ಲಿ ಏರಿಕೆ ಕಂಡಿದ್ದರೂ ಈ ಬಾರಿ...

‘ಈಸ್ಟರ್ ಭಾನುವಾರ’ ಕೆಲಸದ ದಿನವೆಂದು ಘೋಷಣೆ; ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

ಕ್ರೈಸ್ತರ ಪ್ರಮುಖ ಹಬ್ಬವಾದ 'ಈಸ್ಟರ್ ಭಾನುವಾರ'ವನ್ನು (ಮಾರ್ಚ್‌ 31) ಕೆಲಸದ ದಿನವಾಗಿ...