ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಸಚಿವ ಸ್ಥಾನ ನೀಡಬೇಡಿ; ರೈತ ಸಂಘ ಆಗ್ರಹ

Date:

  • ಕಬ್ಬಿಗೆ ಬೆಂಬಲ ಬೆಲೆ ನೀಡಿ, ರಸಗೊಬ್ಬರ ಬೆಲೆ ಇಳಿಸಿ
  • ಎಪಿಎಂಸಿ, ಭೂ ಸುಧಾರಣ ಕಾಯ್ದೆ ರದ್ದು ಮಾಡಿ

ಸಕ್ಕರೆ ಕಾರ್ಖಾನೆ ಮಾಲೀಕರು ಸಚಿವ ಸಂಪುಟಕ್ಕೆ ಸೇರುವುದನ್ನು ತಪ್ಪಿಸಿ, ರಾಜ್ಯದ 30 ಲಕ್ಷ ರೈತರ ಬದುಕು ಸಂರಕ್ಷಿಸಿ ಎಂದು ಹೊಸ ಸರ್ಕಾರಕ್ಕೆ ಸೂಚನೆ ಕೊಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ರೈತ ಮುಖಂಡರು ಮನವಿ ಸಲ್ಲಿಸಿದರು.

ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತ ಮುಖಂಡರು ಮಂಗಳವಾರ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು. ಜತೆಗೆ ರೈತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆಯೂ ಮನವಿ ಮಾಡಿದರು.

“ಸಕ್ಕರೆ ಕಾರ್ಖಾನೆ ಮಾಲೀಕರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವುದು ಬೇಡ. ಕಬ್ಬಿಗೆ ಬೆಂಬಲ ಬೆಲೆ ನೀಡಬೇಕು. ರಸಗೊಬ್ಬರಗಳ ಬೆಲೆ ಇಳಿಕೆ ಮಾಡಬೇಕು. ರೈತರ ಕೃಷಿ ಸಾಲಕ್ಕೆ ಸಿಬಿಲ್ ಸ್ಕೊರ್ ಕೇಳುವುದು ಬೇಡ. ಹಾಗೆಯೇ ಎಪಿಎಂಸಿ ಕಾಯ್ದೆಯನ್ನು ರದ್ದು ಮಾಡಬೇಕು. ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ರದ್ದು ಮಾಡಬೇಕು” ಎಂಬುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸಲು ಸೂಚಿಸುವಂತೆ ರಾಜ್ಯಪಾಲರಿಗೆ ರೈತ ಮುಖಂಡರು ಒತ್ತಾಯಿಸಿದರು.

ಇದೇ ವೇಳೆ ಕೃಷಿ ಚಟುವಟಿಕೆ ಬಗ್ಗೆ ರಾಜ್ಯಪಾಲರು ತಿಳಿದುಕೊಂಡರು. ನಂತರ ರೈತ ಮುಖಂಡರ ಎಲ್ಲ ಒತ್ತಾಯಗಳ ಬಗ್ಗೆ ಕಾನೂನು ರೀತಿಯ ಕ್ರಮ ಕೈಗೊಳ್ಳುವುದಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭರವಸೆ ನೀಡಿದರು.

ಮನವಿ ಪತ್ರ ನೀಡಿ ವಿವರವಾಗಿ ಸಮಸ್ಯೆ ತಿಳಿಸಿದ ಕುರುಬೂರು ಶಾಂತಕುಮಾರ್, “ರಾಜ್ಯದಲ್ಲಿರುವ 78 ಸಕ್ಕರೆ ಕಾರ್ಖಾನೆಗಳಲ್ಲಿ ಎಲ್ಲ ರಾಜಕೀಯ ಪಕ್ಷಗಳ ಶಾಸಕರು ಮಾಲೀಕರು ಇರುವ ಕಾರಣ ಯಾವುದೇ ಸರ್ಕಾರ ಬಂದರೂ ಸಚಿವ ಸಂಪುಟದಲ್ಲಿ ಸೇರುವುದರಿಂದ 30 ಲಕ್ಷ ಕಬ್ಬು ಬೆಳೆಗಾರರ ರೈತರಿಗೆ ಸಂಕಷ್ಟ ಅನುಭವಿಸುವಂತಾಗಿದೆ” ಎಂದು ಆರೋಪಿಸಿದರು.

“ಹಿಂದಿನ ಸರ್ಕಾರ ಕಬ್ಬಿನ ಎಫ್ ಆರ್ ಪಿ ದರವನ್ನು 150 ರೂಪಾಯಿ ಏರಿಕೆ ಮಾಡಿ ಆದೇಶ ಹೊರಡಿಸಲಾಗಿತ್ತು. ಇದಕ್ಕೆ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ತಂದು ಹೆಚ್ಚುವರಿ ಹಣ ಪಾವತಿಸದೆ ರೈತರನ್ನು ಸಂಕಷ್ಟಕ್ಕೆ ತಳಿದ್ದಾರೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಓದಿದ್ದು ಪಿಯುಸಿ, ವೃತ್ತಿ ಮೆಡಿಕಲ್ ಮೇಷ್ಟ್ರು; ‘ದೈತ್ಯ ಸಂಹಾರಿ’ ಪ್ರದೀಪ್ ಈಶ್ವರ್ ನಿಜಕ್ಕೂ ಎಂಥವರು?

“ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಕಬ್ಬಿನ ದರವನ್ನು 3,800 ರಿಂದ 4,500 ತನಕ ನೀಡುತ್ತಿದ್ದಾರೆ. ರಾಜ್ಯ ಸರ್ಕಾರ ಹೆಚ್ಚುವರಿ ಬೆಲೆ ನಿಗದಿ ಮಾಡಿದೆ. ಹಿಂದಿನ ಎಲ್ಲ ವರ್ಷಗಳಲ್ಲೂ ಇದೇ ರೀತಿ ಚಟುವಟಿಕೆ ನಡೆಸುತ್ತಿದ್ದಾರೆ. ಬಹಳಷ್ಟು ಸಾರಿ ಸಕ್ಕರೆ  ಕಾರ್ಖಾನೆ ಮಾಲೀಕರು ಸಚಿವರಾಗಿರುವ ಕಾರಣ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷಿಸುತ್ತಿದ್ದಾರೆ. ಸಕ್ಕರೆ ಅಭಿವೃದ್ಧಿ ಆಯುಕ್ತರು ಕೂಡ ಪದೇಪದೆ ಬದಲಾಗುತ್ತಿರುವುದರಿಂದ ಯಾವುದೇ ಕಾನೂನು ಆದೇಶಗಳನ್ನು ಸಮರ್ಪಕ ಜಾರಿ ಮಾಡುವಲ್ಲಿ ಸಾಧ್ಯವಾಗುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಬೇಕು. ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಬೇಕು. ಈ ಬಗ್ಗೆ ನೂತನ ಸರ್ಕಾರಕ್ಕೆ ನಿರ್ದೇಶನ ನೀಡಬೇಕು” ಎಂದು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ಉಮಾಕಾಂತ ನಾಗಮಾರಪಳ್ಳಿ

ಚುನಾವಣೆ ಘೋಷಣೆಯಾದಾಗಿನಿಂದ ಒಂದಿಲ್ಲೊಂದು ರೀತಿಯಲ್ಲಿ ಕಿರುಕುಳ ನೀಡಲಾಗುತ್ತಿದೆ ಎಂದು ಗಂಭೀರ ಆರೋಪ ಡಿಸಿಸಿ...

ಗದಗ | ಸೆ.30ರಂದು ಜಿಲ್ಲಾ ಉಸ್ತುವಾರಿ ಸಚಿವರ ಜನತಾ ದರ್ಶನ; ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ

ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಜನತಾ...

ಪಾಕಿಸ್ತಾನ | ಮಸೀದಿ ಬಳಿ ಆತ್ಮಹತ್ಯಾ ಬಾಂಬ್ ದಾಳಿ; 52 ಮಂದಿ ಬಲಿ, 130ಕ್ಕೂ ಹೆಚ್ಚು ಜನ ಗಂಭೀರ

ಪಾಕಿಸ್ತಾನದ ಪ್ರಕ್ಷುಬ್ಧ ಪ್ರದೇಶವಾದ ಬಲೂಚಿಸ್ತಾನ್ ಪ್ರಾಂತ್ಯದ ಮಸೀದಿಯೊಂದರ ಬಳಿ ಶುಕ್ರವಾರ ಪ್ರವಾದಿ...

ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ...