ಸಂವಿಧಾನ ವಿರೋಧಿಗಳ ಕೈಗೆ ಅಧಿಕಾರ ಕೊಡಬೇಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು

Date:

  • ಸಂವಿಧಾನ ವಿರೋಧಿಗಳು ಯಾರು ಎನ್ನುವುದನ್ನು ಅರ್ಥ ಮಾಡಿಕೊಳ್ಳಿ
  • ವಿರೋಧಿಗಳನ್ನು ಅರ್ಥಮಾಡಿಕೊಳ್ಳದಿದ್ದರೆ ದಲಿತ-ಶೂದ್ರರ ಉದ್ಧಾರ ಸಾಧ್ಯವಿಲ್ಲ

ಸಂವಿಧಾನದ ವಿರೋಧಿಗಳ ಕೈಗೆ ಅಧಿಕಾರ ನೀಡಿ ನಿಮ್ಮ ಮತ್ತು ನಿಮ್ಮ ಮಕ್ಕಳ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ. ಸಂವಿಧಾನ ವಿರೋಧಿಗಳ ಒಡೆದು ಆಳುವ ನೀತಿಯನ್ನು ಸರಿಯಾಗಿ ಅರ್ಥಮಾಡಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದರು.

ರಾಜ್ಯ ದಲಿತ ಸಂಘರ್ಷ ಸಮಿತಿ ಟೌನ್ ಹಾಲ್ ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಡಿ.ದೇವರಾಜ ಅರಸು ಜಯಂತ್ಯುತ್ಸವ ಮತ್ತು ರಾಜ್ಯ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಸಂವಿಧಾನ ರಚನಾ ಸಮಿತಿಗೆ ಅಂಬೇಡ್ಕರ್ ಅವರು ಅಧ್ಯಕ್ಷರಾಗದೇ ಹೋಗಿದ್ದರೆ ನಮ್ಮ ದೇಶಕ್ಕೆ ಇಷ್ಟೊಂದು ಅರ್ಥಪೂರ್ಣವಾದ ಸಂವಿಧಾನ ದೊರೆಯುತ್ತಿರಲಿಲ್ಲ. ಅಂಬೇಡ್ಕರ್ ಮತ್ತು ಸಂವಿಧಾನದ ಆಶಯಗಳನ್ನು ತಮ್ಮ ಮುಖ್ಯಮಂತ್ರಿ ಸ್ಥಾನದ ಮೂಲಕ ಸಮರ್ಥವಾಗಿ ಜಾರಿ ಮಾಡಲು ದೇವರಾಜ ಅರಸು ಅವರು ಶ್ರಮಿಸಿದರು. ಹೀಗಾಗಿ ಅವರಿಗಿಂತ ಮುಂಚಿನ ಯಾವ ಮುಖ್ಯಮಂತ್ರಿಗಳೂ ಜಾರಿ ಮಾಡದ ಸಾಮಾಜಿಕ ನ್ಯಾಯದ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿಯಾಗಿ ಅರಸು ಜಾರಿ ಮಾಡಿದರು” ಎಂದು ವಿವರಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸಂವಿಧಾನ ವಿರೋಧಿಗಳಿಗೆ, ಬಡವ-ಮಧ್ಯಮ ವರ್ಗದ ವಿರೋಧಿಗಳ ಕೈಗೆ ಅಧಿಕಾರ ಕೊಟ್ಟರೆ ಸಾಮಾಜಿಕ ನ್ಯಾಯ ನೆಗೆದು ಬೀಳುತ್ತದೆ. ದೇವರಾಜ ಅರಸರು‌ ಹಾವನೂರು ವರದಿ ಜಾರಿ ಮಾಡುವವರೆಗೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸಿಕ್ಕಿರಲಿಲ್ಲ. ಎಷ್ಟೇ ವಿರೋಧ ಬಂದರೂ ಎದೆಗುಂದದೆ ಎದೆಗಾರಿಕೆಯಿಂದ ಹಾವನೂರು ವರದಿ ಜಾರಿ ಮಾಡಿದ್ದು ಅರಸು ಅವರು” ಎಂದು ಮೆಚ್ಚುಗೆ ಸೂಚಿಸಿದರು.

ಸಿದ್ದರಾಮಯ್ಯ

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಗೆ 9 ವರ್ಷಗಳಿಂದ ಕಾಣದ ಅಕ್ಕತಂಗಿಯರ ಸಂಕಟ ಈಗ ಕಂಡಿದ್ದು ಹೇಗೆ?

ಸ್ಪಷ್ಟ ತಿಳಿವಳಿಕೆ ಅಗತ್ಯ

“ಅಧಿಕಾರ ಯಾರ ಕೈಗೆ ಕೊಡಬೇಕು ಎನ್ನುವ ಸ್ಪಷ್ಟ ತಿಳಿವಳಿಕೆ ದಲಿತ-ಶೂದ್ರ ಸಮುದಾಯ ಪಡೆದುಕೊಳ್ಳಬೇಕು. ದಲಿತ-ಶೂದ್ರ-ಬಡವ ಮತ್ತು ಮಧ್ಯಮ ವರ್ಗಗಳಿಗೆ ಬದುಕಿನ ಅವಕಾಶ ದೊರಕಿದ್ದು ಸಂವಿಧಾನದಿಂದ. ಈ ಸಂವಿಧಾನವನ್ನು ದ್ವೇಷಿಸುವವರ ಕೈಗೆ ಅಧಿಕಾರ ಕೊಟ್ಟರೆ ಬಡವ-ಮಧ್ಯಮ ವರ್ಗದವರ ಉದ್ದಾರ ಆಗಲು ಹೇಗೆ ಸಾಧ್ಯ” ಎಂದು ಪ್ರಶ್ನಿಸಿದರು.

scp/tsp ಬಗ್ಗೆ ಬಿಜೆಪಿ ಸುಳ್ಳು ಹೇಳುತ್ತಿದೆ

“ಬಡವರ ಮತ್ತು ಮಧ್ಯಮ ವರ್ಗದವರ ಬದುಕಿಗೆ ಶಕ್ತಿ ತುಂಬುವ ಐದು ಗ್ಯಾರಂಟಿಗಳಿಗೆ scp/tsp ಹಣ ಬಳಕೆ ಎಂದು ಬಿಜೆಪಿ ಭಯಾನಕ ಸುಳ್ಳು ಹೇಳುತ್ತಿದೆ. ಇದನ್ನು ನಂಬಬೇಡಿ. ದಾಖಲೆಗಳನ್ನು ನೋಡಿ ಬಿಜೆಪಿಯವರಿಗೆ ಪಾಠ ಕಲಿಸಿ” ಎಂದರು.

ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ದಸಂಸ ಮುಖಂಡ ಡಿ.ಜಿ.ಸಾಗರ್ ಸೇರಿ ಸಂಘಟನೆಯ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ 20 ಕ್ಷೇತ್ರ ಗೆಲ್ಲುತ್ತೇವೆ; ಯಾವ ಅನುಮಾನವೂ ಇಲ್ಲ: ಡಿ ಕೆ ಶಿವಕುಮಾರ್‌ ವಿಶ್ವಾಸ

ಹಾಸನ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೋಲಾರ ಈ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್...

ಪ್ರಧಾನಿ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಅವರ ರಾಜ್ಯ ಪ್ರವಾಸ ನಿಗದಿ

ಪ್ರಧಾನಿ ಮೋದಿಯವರ ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರ...

ಮತದಾನದ ದಿನ ಐಟಿ–ಬಿಟಿ ಸಿಬ್ಬಂದಿಗೆ ರಜೆ ನೀಡಲು ಸೂಚನೆ : ತುಷಾರ್ ಗಿರಿನಾಥ್

ಬೆಂಗಳೂರು ವ್ಯಾಪ್ತಿಯಲ್ಲಿರುವ ಎಲ್ಲ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮತದಾನದ ದಿನ...

‘ಮೋದಿ, ಯೋಗಿಗಿಂತ ದೊಡ್ಡವರಿದ್ದಾರೆ ಎನ್ನುವವರು ದೇಶದ್ರೋಹಿ; ಬಿಜೆಪಿ ಅಭ್ಯರ್ಥಿ ಮಹೇಶ್‌ ಶರ್ಮಾ ವಿವಾದಾತ್ಮಕ ಹೇಳಿಕೆ

"ಪ್ರಧಾನಿ ಮೋದಿ-ಸಿಎಂ ಯೋಗಿಯನ್ನು ತಮ್ಮವರು ಎಂದು ಯಾರು ಪರಿಗಣಿಸುವುದಿಲ್ಲವೋ ಅವರು ತಮ್ಮ...