ಯಾರಿಗೆ ಎಷ್ಟು ಗೌರವ ಕೊಡಬೇಕು ಎಂಬುದನ್ನು ಬಿಜೆಪಿಯಿಂದ ಕಲಿಯಬೇಕಿಲ್ಲ: ಡಿಕೆ ಶಿವಕುಮಾರ್

Date:

  • ಪ್ರಧಾನಿ ಮೋದಿ ಬೆಂಗಳೂರು ಭೇಟಿ, ಶಿಷ್ಟಾಚಾರ ಪಾಲನೆ ವಿಚಾರ ವಾಗ್ವಾದ
  • ಬಿಜೆಪಿ ನಾಯಕರ ಮಾತಿಗೆ ಡಿಸಿಎಂ ಡಿಕೆ ಶಿವಕುಮಾರ್ ತೀಕ್ಷ್ಣ ತಿರುಗೇಟು

ಯಾರಿಗೆ ಎಷ್ಟು ಗೌರವ ಕೋಡಬೇಕು ಎಂಬುದನ್ನು ಬಿಜೆಪಿಯಿಂದ ಕಲಿಯಬೇಕಿಲ್ಲ. ನಮಗೂ ಗೊತ್ತಿದೆ. ರಾಜಕೀಯ ಪ್ರಜ್ಞೆ, ಸಮಯ ಪ್ರಜ್ಞೆ ಎಲ್ಲವೂ ಇದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತೀಕ್ಷ್ಣವಾಗಿ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ವೇಳೆ ಸರ್ಕಾರ ಶಿಷ್ಟಾಚಾರ ಪಾಲನೆ ಮಾಡಿಲ್ಲ ಎಂಬ ಬಿಜೆಪಿ ನಾಯಕರ ಮಾತಿಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, “ಪ್ರಧಾನಮಂತ್ರಿ ಕಚೇರಿಯಿಂದ ನಮಗೆ ಕರೆ ಬಂದಿತ್ತು. ಪ್ರಧಾನಿಯವರ ಸ್ವಾಗತಕ್ಕೆ ಬರುವುದು ಬೇಡ ಎಂದು ಕೇಂದ್ರ ಸರ್ಕಾರವೇ ನಮಗೆ ಹೇಳಿತ್ತು. ಹಾಗಾಗಿ ಸರ್ಕಾರದ ವತಿಯಿಂದ ಪ್ರಧಾನಿ ಮೋದಿ ಅವರ ಸ್ವಾಗತ ಮಾಡಿಸಿದ್ದೇವೆ” ಎಂದರು.

“ಅಶೋಕ್ ಅವರಿಗೆ ಸ್ವಲ್ಪ ಸಮಸ್ಯೆ ಇದ್ದಂತಿದೆ. ಬೇಕಾಬಿಟ್ಟಿ ಮಾತನಾಡುತ್ತಾರೆ. ಬೇರೆ ರಾಜ್ಯಗಳ ರೀತಿ ಅಲ್ಲ ನಮ್ಮ ಸಂಸ್ಕೃತಿ. ರಾಜಕೀಯ ಭಿನ್ನಾಭಿಪ್ರಾಯ ಇದ್ದರೂ ಪ್ರಧಾನಿ ಅವರಿಗೆ ಗೌರವ ಕೊಡುತ್ತೇವೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ರಾಜ್ಯ ಬಿಜೆಪಿ ನಾಯಕರನ್ನು ಬೀದಿಯಲ್ಲಿ ನಿಲ್ಲಿಸಿದ ಪ್ರಧಾನಿ ಮೋದಿ : ಟ್ವೀಟ್ ಮೂಲಕ ಕಾಲೆಳೆದ ಕಾಂಗ್ರೆಸ್

ಅಥೆನ್ಸ್​ನಿಂದ ಮೋದಿ ಬರುವ ಕಾರಣ ನಿಖರವಾಗಿ ಇಂತಿಷ್ಟೇ ಹೊತ್ತಿಗೆ ಬೆಂಗಳೂರಿಗೆ ತಲುಪಬಹುದು ಎಂಬ ಖಚಿತತೆ ಇರಲಿಲ್ಲ. ತಮ್ಮ ಸ್ವಾಗತಕ್ಕೆ ಮುಖ್ಯಮಂತ್ರಿ, ರಾಜ್ಯಪಾಲರು ಬಂದು ತಾಸುಗಟ್ಟಲೆ ಕಾಯುವುದು ಬೇಡ ಎಂಬ ಕಾರಣಕ್ಕೆ ಅಧಿಕಾರಿಗಳನ್ನಷ್ಟೇ ಕಳುಹಿಸಿದರೆ ಸಾಕು ಎಂದು ಮೋದಿ ಹೇಳಿದ್ದರು ಎನ್ನಲಾಗಿದೆ.

ಅತ್ತ ಮೋದಿ ಕೂಡ ಹೆಚ್​ಎಎಲ್​ ಏರ್​ಪೋರ್ಟ್​ ಹೊರಭಾಗದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ವೇಳೆ, “ಪ್ರೋಟೋಕಾಲ್ ಪ್ರಕಾರ (ಶಿಷ್ಟಾಚಾರ) ಇಷ್ಟೊಂದು ಕಡಿಮೆ ಅವಧಿಯಲ್ಲಿ ವ್ಯವಸ್ಥೆ ಮಾಡಿದ ಕರ್ನಾಟಕದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಿಗೆ ಧನ್ಯವಾದಗಳು” ಎಂದು ಹೇಳಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಪೆನ್‌ಡ್ರೈವ್‌ | ಬ್ಲಾಕ್‌ಮೇಲ್‌ಗಾಗಿ ವಿಡಿಯೋ ಮಾಡಿಕೊಂಡಿದ್ರಾ?; ನ್ಯಾಯಾಂಗ ತನಿಖೆಗೆ ಆಗ್ರಹ

ಹಾಸನ ಪೆನ್‌ಡ್ರೈವ್ ವಿಚಾರದಲ್ಲಿ ಸುಮೊಟೊ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಂಗ ತನಿಖೆ ನಡೆಸಬೇಕು....

ಶಿವಮೊಗ್ಗ | ಮುಂದಿನ ದಿನದಲ್ಲಿ ಕ್ಷೇತ್ರದ ರಕ್ಷಣೆ ನನ್ನದು: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ರಾಜಕಾರಣಿಗಳ ಬಳಿ ಅಧಿಕಾರವಿದ್ದು, ಪರಿಹರಿಸಬಹುದಾದ ಸಮಸ್ಯೆಗಳು ಸಾಕಷ್ಟಿವೆ. ಆದರೂ,...

ʼಈ ದಿನʼ ಸಮೀಕ್ಷೆ | ಬಿಗಡಾಯಿಸಿದ ನಿರುದ್ಯೋಗ ; ಮೋದಿ ಆಡಳಿತಕ್ಕೆ ಬೇಸರಗೊಂಡ ಮತದಾರ

“ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸಲಾಗುವುದು” ಎಂಬ ಘೋಷಣೆಯನ್ನು ನರೇಂದ್ರ ಮೋದಿಯವರು...

ನೇಹಾ ಕನ್ನಡ ನಾಡಿನ ಮಗಳು, ಸಾವಿನ ಮನೆಯಲ್ಲಿ ಬಿಜೆಪಿ ರಾಜಕಾರಣ ಬೇಡ: ಸುರ್ಜೇವಾಲ್

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ್ ಅವರು ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ನೇಹಾ...