ಬೀದರ್‌ | ನಾಲಿಗೆ ಹರಿಬಿಟ್ಟವರಿಗೆ ರಸ್ತೆಯಲ್ಲಿ ಓಡಾಡಲು ಬಿಡಬೇಡಿ : ಬಿ.ವೈ.ವಿಜಯೇಂದ್ರ

Date:

ಬಿಜೆಪಿ‌ ಶಾಸಕ ವಿರುದ್ದ ಹಗುರವಾಗಿ ಮಾತನಾಡಿರುವ ವಿಧಾನ ಪರಿಷತ್ ಸದಸ್ಯರನ್ನು ರಸ್ತೆ ಮೇಲೆ ಓಡಾಡಲು ಅವಕಾಶ ಕೊಡಬೇಡಿ ಎಂದು ಬಿಜೆಪಿ‌ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪರೋಕ್ಷವಾಗಿ ಎಂಎಲ್ಸಿ ಚಂದ್ರಶೇಖರ್‌ ಪಾಟೀಲ್‌ ವಿರುದ್ಧ ಹೆಸರು ಪ್ರಸ್ತಾಪಿಸದೇ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

- Advertisement -

ಬೀದರ್‌ ಜಿಲ್ಲೆಯ ಹುಮನಾಬಾದ್ ತಾಲೂಕಿನ ಹುಡಗಿ ಗ್ರಾಮದಲ್ಲಿ ನಡೆದ ಬಿಜೆಪಿ ಸದಸ್ಯತ್ವ ಪರಿಶೀಲನಾ ಅಭಿಯಾನದಲ್ಲಿ ಮಾತನಾಡಿ, ʼಬಿಜೆಪಿ ಕಾರ್ಯಕರ್ತರು ಅಧಿಕಾರ ಇಲ್ಲದಿರುವಾಗಲೇ ಹೆದರಿಲ್ಲ. ಆದರೆ ಬಿಜೆಪಿ ಅಧಿಕಾರಕ್ಕೆ ಬರುವ ಈ ಹೊತ್ತಿನಲ್ಲಿ ಇಂತಹ ಪುಡಾರಿಗಳಿಗೆಲ್ಲ ನಾವು ಹೆದರಲ್ಲ. ನಿಮ್ಮ ಜೊತೆ ನಾನು ಹಾಗೂ ಪಕ್ಷ ಇದೆ, ನೀವು ಧೈರ್ಯದಿಂದ ಇರಬೇಕುʼ ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ʼಅಧಿಕಾರ ಶಾಶ್ವತ ಎನ್ನುವ ದುರಹಂಕಾರದಲ್ಲಿ ಮಾತನಾಡಿದ್ದಾರೆ. ಅಧಿಕಾರ ಶಾಶ್ವತ ಎನ್ನುವ ಭ್ರಮೆಯಲ್ಲಿದ್ದಂತೆ ಕಾಣಿಸುತ್ತದೆ. ಈ ಬಗ್ಗೆ ಕಾನೂನು ಕ್ರಮಕೈಗೊಳ್ಳುವ ಬಗ್ಗೆ ಚರ್ಚಿಸುತ್ತೇನೆ. ನಮ್ಮ ಕಾರ್ಯಕರ್ತರೇನು ಬಳೆ ತೊಟ್ಟುಕೊಂಡು ನಿಂತಿಲ್ಲ. ಅಧಿಕಾರ ಶಾಶ್ವತ ಅಲ್ಲ ಎನ್ನುವುದನ್ನು ನೆನಪು ಮಾಡಿಕೊಡಬೇಕು. ದುರಹಂಕಾರದಲ್ಲಿ‌ ಮಾತನಾಡಿದವರಿಗೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ಕೊಡೋಣʼ ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಹೃದಯಘಾತದಿಂದ ಕರ್ತವ್ಯ ನಿರತ ಎಸ್‌ಡಿಎ ಸಾವು

ಸೆ‌.7ರಂದು ನೂತನ ಬೀದರ್ ಸಂಸದರ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ಹುಮನಾಬಾದ್‌ ಬಿಜೆಪಿ ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ್ ವಿರುದ್ಧ ಸಹೋದರ ಸಂಬಂಧಿ ಕಾಂಗ್ರೆಸ್ಸಿನ ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ ಪಾಟೀಲ್ ಅವರು ‘ಅವನು ಏನಾದರೂ ಮಾತಾಡಿದರೆ ನಾಲಿಗೆ ಕತ್ತರಿಸುತ್ತೇನೆ, ಸ್ವಲ್ಪ ಸಮಯ ಕೊಡ್ರಿ. ಅವನಿಗೆ ಗಣೇಶನ ಸೊಂಡಿಲಿನಿಂದ ಬೀಸಾಕುತ್ತೇನೆʼ ಎಂದು ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ಕಾಂಗ್ರೆಸ್ ಎಂಎಲ್‌ಸಿ ಚಂದ್ರಶೇಖರ್ ಪಾಟೀಲ್ ವಿರುದ್ಧ ವಿಜಯೇಂದ್ರ‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಸಿಜೆಪಿ ಹೋರಾಟಕ್ಕೆ ಬೆಂಬಲ: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎಡ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

ದೆಹಲಿಯಲ್ಲಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಬೀದರ್‌ | ಬರದಲ್ಲೂ ಪಪ್ಪಾಯಿ ಬೆಳೆದು ₹25 ಲಕ್ಷ ಗಳಿಕೆ: ರೈತ ವೆಂಕಟರೆಡ್ಡಿ ತೋಟಕ್ಕೆ ಶಾಸಕರ ಭೇಟಿ

ಬರ ಪರಿಸ್ಥಿತಿಯ ನಡುವೆಯೂ ಆಧುನಿಕ ಕೃಷಿ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿ...