ಬಾಗೇಪಲ್ಲಿ | ಅಕ್ಷರ ಕ್ರಾಂತಿ ಬಿತ್ತನೆ ನಿಲ್ಲದಿರಲಿ : ವೆಂಕಟೇಶಪ್ಪ ಕರೆ

Date:

Advertisements

ಸಮಾಜದ ಒಳಿತನ್ನು ಬಯಸುವ ಶಿಕ್ಷಕರಿಗೆ ಹಲವಾರು ಸವಾಲು, ಸಮಸ್ಯೆಗಳು ಎದುರಾದರೂ ದೇಶದ ಉತ್ತಮ ಭವಿಷ್ಯಕ್ಕಾಗಿ ಶಿಕ್ಷಕರು ಅಕ್ಷರ ಕ್ರಾಂತಿ ಬಿತ್ತುವ ಕೆಲಸವನ್ನು ನಿಲ್ಲಿಸಬಾರದು. ಡಾ.ಎಸ್.ರಾಧಕೃಷ್ಣನ್‌ರವರ ಧ್ಯೇಯವನ್ನು ನಾವೆಲ್ಲರೂ ಪಾಲಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ ಕರೆ ನೀಡಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಸಂತೇ ಮೈದಾನದಲ್ಲಿರುವ ರಾಮಕೃಷ್ಣ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ತಾಲೂಕು ಆಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕು ಸರ್ಕಾರಿ ನೌಕರರ ಸಂಘದ ಸಂಯಕ್ತಾಶ್ರಯದಲ್ಲಿ ಅಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಉತ್ತಮ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಲಿರುವ ಶಿಕ್ಷಕರು ಎಂದಿಗೂ ತಮ್ಮ ಕರ್ತವ್ಯವನ್ನು ಮರೆಯಬಾರದು. ಮಕ್ಕಳ ಮೆದುಳಿನಲ್ಲಿ ಶಿಕ್ಷಣ ಎಂಬ ಬೀಜವನ್ನು ಬಿತ್ತುವಾಗ ತಮ್ಮ ಕರ್ತವ್ಯದ ಸಮಯದಲ್ಲಿ ಶಿಕ್ಷಕರಿಗೆ ಹಲವು ಸಮಸ್ಯೆಗಳು ಎದುರಾದರು ಪ್ರಯತ್ನವನ್ನು ನಿಲ್ಲಿಸದೆ ಮುನ್ನಡೆಯುತ್ತಾರೆ. ಮಕ್ಕಳ ಉಜ್ವಲ ಭವಿಷ್ಯಕ್ಕೆ ಶಿಕ್ಷಣ ಎಷ್ಟು ಮುಖ್ಯವೂ ಸಂಸ್ಕಾರವೂ ಅಷ್ಟೇ ಮುಖ್ಯವಾಗಿದ್ದು, ಶಿಕ್ಷಣದ ಜೊತೆಗೆ ಗುರು, ಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಕಲಿಸಿ ಎಂದರು.

Advertisements

ದೇಶಾದ್ಯಂತ ದೊಡ್ಡ ದೊಡ್ಡ ಹುದ್ದೆಯಲ್ಲಿರುವ ಸಾಧಕರ ಸಾಧನೆ ಹಾಗೂ ದೇಶದ ಭವಿಷ್ಯ ತರಗತಿಯ ಕೊಠಡಿಯಲ್ಲಿ ನಿರ್ಮಾಣಗೊಳ್ಳಲಿದೆ ಎಂಬುದನ್ನು ಮರೆಯಬಾರದು. ಆದ್ದರಿಂದ ಮಕ್ಕಳ ಭವಿಷ್ಯವನ್ನು ನಿರ್ಮಿಸುವ ಶಿಕ್ಷಕರು ಪಠ್ಯದ ಜೊತೆಯಲ್ಲಿ ದೇಶದ ಪರಂಪರೆಯನ್ನು ಸಾರುವ ಸಂಸ್ಕಾರವನ್ನು ಕಲಿಸಿಕೊಡಿ ಎಂದು ಶಿಕ್ಷಕರಿಗೆ ಸಲಹೆ ನೀಡದರು.

ಇದೇ ವೇಳೆ ವಯೋನಿವೃತ್ತಿ ಹೊಂದಿದ ನಿವೃತ್ತ ಶಿಕ್ಷಕರನ್ನು ಹಾಗೂ ತಾಲೂಕು ಮಟ್ಟದ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ಶಿಕ್ಷಕರನ್ನು ಸನ್ಮಾನಿಸಿ ಬಹುಮಾನಗಳನ್ನು ವಿತರಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಮ್ಮು-ಕಾಶ್ಮೀರದಲ್ಲಿ ಮೋದಿ-ಶಾ ವಿರುದ್ಧ ಪ್ರತಿಪಕ್ಷಗಳು ಒಂದಾಗುವವೇ?

ಕಾರ್ಯಕ್ರಮದಲ್ಲಿ ತಾಲೂಕು ನೌಕರರ ಸಂಘದ ಅಧ್ಯಕ್ಷ ಡಾ.ಸಿ.ಎನ್.ಸತ್ಯನಾರಾಯಣರೆಡ್ಡಿ, ಪೊಲೀಸ್ ವೃತ್ತ ನಿರೀಕ್ಷಕ ಪ್ರಶಾಂತ್ ವರ್ಣಿ, ನಿವೃತ್ತ ಪ್ರಾಂಶುಪಾಲ ನಂಜುಂಡಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ವೆಂಕಟರವಣಪ್ಪ, ಕಾರ್ಯದರ್ಶಿ ವೆಂಕಟರಾಯಪ್ಪ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ನಟರಾಜ್, ಶಿಕ್ಷಕರಾದ ಆರ್.ಹನುಮಂತರೆಡ್ಡಿ, ರಂಗಾರೆಡ್ಡಿ, ಫಯಾಜ್, ವರುಣ್, ಕದಿರಪ್ಪ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X