ಗೃಹ ಸಚಿವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿ ಖಾತೆಯನ್ನು ಮರಿ ಖರ್ಗೆಗೆ ವಹಿಸಿದ್ದಾರೆಯೇ: ನಳಿನ್‌ ಕುಮಾರ್‌ ಪ್ರಶ್ನೆ

Date:

  • ‘ಪೊಲೀಸ್ ಅಧಿಕಾರಿಗಳಿಗೆ ಮರಿ ಖರ್ಗೆ ಕ್ಲಾಸ್ ತಗೊತಿದ್ದಾರೆʼ
  • ‘ಗೃಹಖಾತೆ ಕೆಲಸ ಪ್ರಿಯಾಂಕ್‌ ಖರ್ಗೆ ಅವರಿಗೆ ಕೊಟ್ಟಿದ್ದಾರಾ?’

ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆಯೋ, ತಮ್ಮ ಖಾತೆಯ ಮೇಲೆ ಬೇಸರವೋ ತಿಳಿಯುತ್ತಿಲ್ಲ. ಅಥವಾ ತಮ್ಮ ಗೃಹಖಾತೆಯ ಕೆಲಸಗಳನ್ನು ಪ್ರಿಯಾಂಕ್‌ ಖರ್ಗೆ ಅವರಿಗೆ ಕೊಟ್ಟಿದ್ದಾರೋ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವಾಗ್ದಾಳಿ ನಡೆಸಿದ್ದಾರೆ.

- Advertisement -

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಸಚಿವ ಪ್ರಿಯಾಂಕ್‌ ಖರ್ಗೆ ಅವರು ಕಲಬುರಗಿ ಜಿಲ್ಲೆ​ಯಲ್ಲಿ ನಡೆ​ಯು​ತ್ತಿ​ರುವ ಅಕ್ರಮ ಮರಳುಗಾರಿಕೆ, ರೌಡಿಸಂ ಚಟುವಟಿಕೆ ನಿಯಂತ್ರಣದ ಬಗ್ಗೆ ಪೊಲೀಸ್‌, ಕಂದಾಯ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ಜತೆ ಇತ್ತೀಚೆಗೆ ಸಭೆ ನಡೆಸಿರುವ ವಿಡಿಯೋ ಹಂಚಿಕೊಂಡು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಪೊಲೀಸ್ ಅಧಿಕಾರಗಳಿಗೆ ಮರಿ ಖರ್ಗೆಯವರು ಕ್ಲಾಸ್ ತಗೊತಿದ್ದಾರೆ ಎಂದರೆ ನನ್ನ ಊಹೆ ನಿಜ ಅಲ್ಲವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ” ಎಂದು ಪ್ರಶ್ನಿಸಿದ್ದಾರೆ.

“ಡಾ. ಜಿ ಪರಮೇಶ್ವರ್‌ ಮತ್ತು ಪ್ರಿಯಾಂಕ್‌ ಖರ್ಗೆ ಅವರೇ, ಪೊಲೀಸ್ ಅಧಿಕಾರಿಗಳನ್ನು ಕಂಟ್ರೋಲ್ ಮಾಡುವ ಕೆಲಸ ಬಿಟ್ಟು, ದನಗಳ್ಳರ ಮೇಲೆ ಕಠಿಣ ಕ್ರಮ ಕೈಗೊಳ್ಳಿ, ಅಕ್ರಮ ಕಸಾಯಿಖಾನೆಗಳ ಮೇಲೆ ಕ್ರಮ ಕೈಗೊಳ್ಳಿ, ಲವ್ ಜಿಹಾದ್ ಮಾಡುವವರ ಮೇಲೆ ಕ್ರಮ ಕೈಗೊಳ್ಳಿ, ಅಶಾಂತಿದೂತರ ಮೇಲೆ ಕ್ರಮ ಕೈಗೊಳ್ಳಿ, ಹಿಂದೂಪರ ಕಾರ್ಯಕರ್ತರ ಮೇಲೆ ಟಾರ್ಗೆಟ್ ಮಾಡೋದು ಬೇಡ” ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...