ಡೆಂಘೀ ಪ್ರಕರಣ ನಿಯಂತ್ರಿಸಲು ಮನೆ-ಮನೆ ಸಮೀಕ್ಷೆ: ತುಷಾರ್ ಗಿರಿ ನಾಥ್

Date:

Advertisements

“ಬೆಂಗಳೂರಿನಲ್ಲಿ ಡೆಂಘೀ ಹರಡುವಿಕೆಯನ್ನು ತಡೆಯುವ ಸಲುವಾಗಿ ಮನೆ-ಮನೆ ಸಮೀಕ್ಷೆ ನಡೆಸಿ ನಾಗರಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ” ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ರವರು ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ಪ್ರಕರಣ ನಿಯಂತ್ರಿಸುವ ಸಂಬಂಧ ಜೂನ್ 26ರಂದು ಪಾಲಿಕೆ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆಯಾ ವಲಯ ವ್ಯಾಪ್ತಿಯಲ್ಲಿ ಆರೋಗ್ಯ ಪರಿವೀಕ್ಷರು, ಆಶಾ ಕಾರ್ಯಕರ್ತೆಯರು, ಎಎನ್‌ಎಂಗಳು ಹಾಗೂ ಲಿಂಕ್ ವರ್ಕರ್ಸ್‌ಗಳು ಸೇರಿದಂತೆ 1,000 ಮನೆಗಳಿಗೊಂದು ಬ್ಲಾಕ್ ಅನ್ನು ರಚಿಸಿಕೊಳ್ಳಬೇಕು. ನಂತರ ಲಾರ್ವಾ ಇರುವ ತಾಣಗಳನ್ನು ಗುರುತಿಸುವುದು, ನಾಗರಿಕರಲ್ಲಿ ಅರಿವು ಮೂಡಿಸುವುದು ಹಾಗೂ ಯಾರಿಗಾದರು ಜ್ವರ ಬಂದಿದ್ದಲ್ಲಿ ಅಂತಹವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಮಾಡಿಸಕೊಳ್ಳಲು ತಿಳಿಸುವುದು ಸೇರಿದಂತೆ ಸಮಗ್ರವಾಗಿ ಮನೆ-ಮನೆ ಸಮೀಕ್ಷೆ ನಡೆಸಿ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.

“ಈಡೀಸ್, ಈಜಿಪ್ಟೈ ಎಂಬ ಸೊಳ್ಳೆಗಳಿಂದ ಡೆಂಘೀ ರೋಗ ಹರಡುತ್ತದೆ. ಈ ನಿಟ್ಟಿನಲ್ಲಿ ಸೊಳ್ಳೆ ನಿಯಂತ್ರಣ ಮಾಡಲು ಲಾರ್ವಾ ಉತ್ಪತ್ತಿಯಾಗುವ ತಾಣಗಳನ್ನು ಗುರಿತಿಸಿ ನಾಶಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜತೆಗೆ ಮನೆಯಲ್ಲಿರುವ ಸಲಕರಣೆಗಳಲ್ಲಿ ಹೆಚ್ಚು ದಿನಗಳ ಕಾಲ ನೀರಿದ್ದರೆ ಲಾರ್ವಾ ಉತ್ಪತ್ತಿಯಾಗಿ ಸೊಳ್ಳೆಗಳ ಸಂಖ್ಯೆ ಹೆಚ್ಚಾಗುತ್ತದೆ. ಅದನ್ನು ತಡೆಯುವ ನಿಟ್ಟಿನಲ್ಲಿ ಪಾಲಿಕೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ನಗರದಲ್ಲಿ 2024ರ ಜನವರಿಯಿಂದ ಜೂನ್ ವರೆಗೆ 1,230 ಪ್ರಕರಣಗಳು ಕಂಡುಬಂದಿದ್ದು, ವಲಯವಾರು ಮೈಕ್ರೋ ಪ್ಲಾನ್ ಮಾಡಿಕೊಂಡು ಡೆಂಘೀ ಹರಡುವಿಕೆಯನ್ನು ನಿಯಂತ್ರಿಸಲು ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.

Advertisements

“ನಗರದಲ್ಲಿ ಮಳೆ ಬಿಟ್ಟು ಬಿಟ್ಟು ಬರುತ್ತಿರುವ ಹಿನ್ನೆಲೆ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಜಾಗೃತಿ(ಐಇಸಿ) ಚಟುವಟಿಕೆಗಳನ್ನು ಹೆಚ್ಚಾಗಿ ನಡೆಸಲಾಗುತ್ತಿದೆ. ಇದನ್ನು ಸರ್ಕಾರದ ಮಟ್ಟದಲ್ಲೂ ಮಾಡಲಾಗುತ್ತಿದ್ದು, ಪಾಲಿಕೆಯಿಂದಲೂ ಆಯಾ ವಲಯಗಳಲ್ಲಿ ಹಲವಾರು ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ” ಎಂದು ಹೇಳಿದರು.

“ನಗರದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜ್ವರ ಪ್ರಕರಣಗಳು ಕಂಡುಬಂದರೆ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎನ್ ಎಸ್ 1 ಟೆಸ್ಟ್ ಕಿಟ್ ಮೂಲಕ ಪರೀಕ್ಷೆ ಮಾಡಿ ಖಚಿತವಾದ ಬಳಿಕ ರಕ್ತದ ಮಾದರಿ ಸಂಗ್ರಹಿಸಿಕೊಂಡು ಪ್ರಯೋಗಾಲಯಗಳಿಗೆ ಕಳುಹಿಸಿಕೊಡಲಾಗುವುದು” ಎಂದು ಹೇಳಿದರು.

“ಪಾಲಿಕೆ ವ್ಯಾಪ್ತಿಯಲ್ಲಿ ಬರುವ 28 ಲಕ್ಷ ಮನೆಗಳ ಪೈಕಿ, 14 ಲಕ್ಷ ಮನೆಗಳು ಬಡ ವರ್ಗವಿರುವ ಪ್ರದೇಶ, ಜನ ಸಂಖ್ಯೆ ಹೆಚ್ಚಿರುವ ಪ್ರದೇಶ ಹಾಗೂ ತಗ್ಗು ಪ್ರದೇಶಗಳಲ್ಲಿರುವ 14 ಲಕ್ಷ ಮನೆಗಳಿಗೆ 15 ದಿನಕ್ಕೊಮ್ಮೆ ಭೇಟಿ ನೀಡಿ ಲಾರ್ವಾ ಉತ್ಪತ್ತಿ ತಾಣಗಳು ಹಾಗೂ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ನಿರಂತರವಾಗಿ ಮಾಡಲಾಗುವುದು. ಮನೆ-ಮನೆ ಸಮೀಕ್ಷೆ ಮಾಡುವ ಸಲುವಾಗಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಎನ್‌ಎಸ್‌ಎಸ್ ಸ್ವಯಂ ಸೇವಕರನ್ನು ನಿಯೋಜಿಸಿಕೊಳ್ಳಲು ಕ್ರಮವಹಿಸಲಾಗುತ್ತಿದೆ” ಎಂದರು.

“ಡೆಂಘೀ ಪ್ರಕರಣಗಳನ್ನು ನಿಯಂತ್ರಿಸಲು ಮನೆ-ಮನೆಗಳಿಗೆ ಭೇಟಿ ನೀಡುವ ಜೊತೆಗೆ ತೋಟಗಾರಿಕಾ ಇಲಾಖೆ, ಅರಣ್ಯ ಇಲಾಖೆ, ಘನತ್ಯಾಜ್ಯ, ಬೃಹತ್ ನೀರುಗಾಲುವೆ, ರಸ್ತೆ ಮೂಲಭೂತ ಸೌಕರ್ಯ ವಿಭಾಗ ಸೇರಿದಂತೆ ಇನ್ನಿತರ ಇಲಾಖೆಗಳ ಜೊತೆ ವಲಯವಾರು ಸಮನ್ವಯ ಸಾಧಿಸಿ ನೀರು ನಿಲ್ಲುವ ಪ್ರದೇಶಗಳನ್ನು ಗುರುತಿಸಿ ನೀರು ನಿಲ್ಲದಂತೆ ಕ್ರಮವಹಿಸಲಾಗುವುದು” ಎಂದು ಹೇಳಿದರು.

“ಮಹದೇವಪುರ, ದಕ್ಷಿಣ ವಲಯ ಹಾಗೂ ಪೂರ್ವ ವಲಯಗಳಲ್ಲಿ ಹೆಚ್ಚು ಪ್ರಕರಣಗಳು ಕಂಡುಬಂದಿದ್ದು, ಎಲ್ಲೆಲ್ಲಿ ಹೆಚ್ಚು ಪ್ರಕರಣಗಳು ಕಂಡುಬಂದಿದೆಯೋ ಅಲ್ಲೆಲ್ಲಾ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದರು.

2024 ಜನವರಿ ರಿಂದ ಇದುವರೆಗೆ ಬೊಮ್ಮನಹಳ್ಳಿ ವಲಯದಲ್ಲಿ 122, ಪೂರ್ವ ವಲಯದಲ್ಲಿ 218, ಮಹದೇವಪುರ 386, ಆರ್.ಆರ್ ನಗರ 75, ದಕ್ಷಿಣ ವಲಯದಲ್ಲಿ 190, ಪಶ್ಚಿಮ ವಲಯ 141, ಯಲಹಂಕ 90, ದಾಸರಹಳ್ಳಿ 8 ಸೇರಿದಂತೆ 1,230 ಡೆಂಘೀ ಪ್ರಕರಣಗಳು ಕಂಡುಬಂದಿವೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 7ನೇ ತರಗತಿ ವಿದ್ಯಾರ್ಥಿಗಳಿಗೆ ನಟಿ ತಮನ್ನಾ ಭಾಟಿಯಾ ಕುರಿತ ಪಾಠ; ಪಾಲಕರ ವಿರೋಧ

ಇನ್ನು ವರ್ಷವಾರು ಡೆಂಘೀ ಪ್ರಕರಣಗಳ ನೋಡುವುದಾದರೇ, 2019ರಲ್ಲಿ 9,434, 2020ರಲ್ಲಿ 1,127, 2021ರಲ್ಲಿ 1,629, 2022ರಲ್ಲಿ 2,335, 2023ರಲ್ಲಿ 11,136 (2023 ಜನವರಿಯಿಂದ ಜೂನ್ ವರೆಗೆ – 732 ಪ್ರಕರಣ), 2024ರಲ್ಲಿ 1,230 (2024 ಜನವರಿಯಿಂದ ಜೂನ್ ವರೆಗೆ) ಡೆಂಘೀ ಪ್ರಕರಣಗಳು ಕಂಡುಬಂದಿವೆ.

ಈ ವೇಳೆ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್, ಯೋಜನಾ ವಿಭಾಗದ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ಮುಖ್ಯ ಆರೋಗ್ಯಾಧಿಕಾರಿ, ಎಲ್ಲ ವಲಯ ಆರೋಗ್ಯಾಧಿಕಾರಿಗಳು, ಆರೋಗ್ಯ ವೈದ್ಯಾಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X