ಕಾಮಗಾರಿ ಮುಗಿದರೂ ಬಾಗಿಲು ತೆರೆಯದ ವಸತಿ ನಿಲಯ; ಉದ್ಘಾಟನೆ ನಿರೀಕ್ಷೆಯಲ್ಲಿ ವಿದ್ಯಾರ್ಥಿನಿಯರು

Date:

ರಾಯಚೂರಿನ ಸಿಂಧನೂರು ನಗರದಲ್ಲಿ ನಿರ್ಮಾಣಗೊಂಡಿರುವ ಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಕಟ್ಟಡ ಕಾಮಗಾರಿ ಮುಕ್ತಾಯವಾಗಿ ಮೂರು ತಿಂಗಳಾದರೂ ಇನ್ನು ಉದ್ಘಾಟನೆಯಾಗಿಲ್ಲ. ₹5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ವಸತಿ ನಿಲಯ ವಿದ್ಯಾರ್ಥಿಗಳ ಸದ್ಬಳಕೆಗೆ ಲಭ್ಯವಾಗದೆ, ಅನುಪಯುಕ್ತವಾಗಿದ್ದು, ಉದ್ಘಾಟನೆಯ ನಿರೀಕ್ಷೆಯಲ್ಲಿ ವಿದ್ಯಾರ್ಥಿನಿಯರು ಕಾದುಕುಳಿತಿದ್ದಾರೆ.

- Advertisement -

2021ರಲ್ಲಿ ಕಟ್ಟಡ ಕಾಮಗಾರಿಗಾಗಿ ನಿವೇಶನ ಹಸ್ತಾಂತರಿಸಲಾಗಿತ್ತು. ಇದೀಗ ಕಾಮಗಾರಿ ಸಂಪೂರ್ಣವಾಗಿ ಮುಕ್ತಾಯಗೊಂಡು ಸುಣ್ಣ ಬಣ್ಣದಿಂದ ಕಂಗೊಳಿಸುತ್ತಿದೆ. ಸುವ್ಯವಸ್ಥಿತ ಕಟ್ಟಡವೊಂದು ಬಳಕೆಗೆ ಸಿಗದೇ ಪೋಷಕರು ಹಾಗೂ ವಿದ್ಯಾರ್ಥಿಗಳಲ್ಲಿ ತೀವ್ರ ಅಸಹನೆ ಉಂಟು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆಗೊಳಿಸಿದ ಸರ್ಕಾರ ಮರಳಿ ಕಾಮಗಾರಿ ಎಲ್ಲಿಗೆ ಬಂದಿದೆ ಎಂದೂ ಕಣ್ಣಾಯಿಸುವುದಿಲ್ಲ. ಕೋಟ್ಯಂತರ ಹಣ ಸುರಿಯುವುದಷ್ಟೇ ಗೊತ್ತು. ಆ ಕಾಮಗಾರಿಯ ಭವಿಷ್ಯದ ಕಾರ್ಯಾಚರಣೆ ಬಗ್ಗೆ ಸ್ಥಳೀಯ ಆಡಳಿತವೂ ತಲೆಕೆಡಿಸಿಕೊಳ್ಳುವುದಿಲ್ಲ. ಇದರಿಂದ ದೇಶದ ಆಸ್ತಿಯಾಗಿರುವ ಮಕ್ಕಳ ಭವಿಷ್ಯ ಅತಂತ್ರವಾಗುತ್ತದೆ. ಈಗಲಾದರೂ ಸರ್ಕಾರ ಆದಷ್ಟು ಬೇಗ ವಸತಿ ನಿಲಯ ಪ್ರಾರಂಭ ಮಾಡಿ ವಿದ್ಯಾರ್ಥಿಗಳ ಸಮಗ್ರ ಶಿಕ್ಷಣಕ್ಕೆ ಅನುವು ಮಾಡಿಕೊಡಬೇಕು ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಒತ್ತಾಯಿಸಿದ್ದಾರೆ.

WhatsApp Image 2025 08 06 at 12.12.33 af326d67

ಈ ಬಗ್ಗೆ ಸ್ಥಳೀಯ ನಿವಾಸಿ ಸಫಾಯಿ ಕರ್ಮಚಾರಿಯೂ ಆಗಿರುವ ಜಾಗೃತಿ ಸಮಿತಿ ಸದಸ್ಯ ಮಂಜುನಾಥ ಮಾತನಾಡಿ, “ಹಾಸ್ಟೆಲ್ ಉದ್ಘಾಟನೆಯಿಲ್ಲದೆ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ಉಂಟಾಗಿದೆ. ದೂರದ ಹಳ್ಳಿಗಳಿಂದ ನಗರಕ್ಕೆ ಬರುತ್ತಿರುವ ಮಕ್ಕಳು ದಿನವೂ ಕಿಲೋಮೀಟರ್‌ಗಟ್ಟಲೆ ಪ್ರಯಾಣಿಸುತ್ತಿದ್ದಾರೆ. ಮಕ್ಕಳಿಗೆ ಸುಲಭವಾಗಿ ಶಿಕ್ಷಣವೇನೋ ಸಿಗುತ್ತಿದೆ. ಆದರೆ ಅದನ್ನು ಪಡೆಯುವ ಅವಕಾಶ ಕೊಲವೊಮ್ಮೆ ಸಿಗುವುದಿಲ್ಲ. ಬಡ ವಿದ್ಯಾರ್ಥಿಗಳು ದೂರದ ಊರುಗಳಿಂದ ಬಂದು ನಗರಗಳಲ್ಲಿ ಮನೆ ಬಾಡಿಗೆ ತೆಗೆದುಕೊಂಡು ಓದುವುದು ಅಸಾಧ್ಯ. ಈ ನಿಟ್ಟಿನಲ್ಲಿ ವಸತಿ ನಿಲಯಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ಕೂಡಲೇ ಸಂಬಂಧಪಟ್ಟವರು ಕಾರ್ಯೋನ್ಮುಖರಾಗಿ, ವಸತಿ ನಿಲಯವನ್ನು ಉದ್ಘಾಟಿಸಿ ಬಳಕೆಗೆ ನೀಡಬೇಕು. ಆ ಮೂಲಕ ಮಕ್ಕಳು ಶಿಕ್ಷಣದ ಕಾರಣಕ್ಕೆ ಅರ್ಧ ದಿನ ಪ್ರಯಾಣದಲ್ಲೇ ಕಳೆಯುತ್ತಿರುವುದನ್ನು ತಪ್ಪಿಸಬೇಕು” ಎಂದರು.

ಕೆಲವವರು ವಸತಿ ಸಿಗದ ಕಾರಣ ಶಾಲಾ ಕಲಿಕೆಯನ್ನು ನಿಲ್ಲಿಸಿದ್ದಾರೆ. ಶಿಕ್ಷಣದ ಹಕ್ಕನ್ನೂ ದಕ್ಕಿಸಿಕೊಳ್ಳಲಾಗದೆ ಬದುಕಿನ ಪೈಪೋಟಿಗೆ ತಳ್ಳಲ್ಪಡುತ್ತಿದ್ದಾರೆ. ಇಲಾಖೆ ನಿರ್ಲಕ್ಷ್ಯ ತೋರಿಸುತ್ತಿರುವುದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಕಂಟಕವಾಗುತ್ತಿದೆ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ. ಹಾಸ್ಟೆಲ್ ಆರಂಭವಾದರೆ ಮಕ್ಕಳು ನಿರಾಳವಾಗಿ ಓದುವ ಸಾಧ್ಯತೆ ಹೆಚ್ಚು. ವಿದ್ಯಾರ್ಥಿಗಳ ಒತ್ತಾಯವನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಸರ್ಕಾರ ತ್ವರಿತ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ.

ಸ್ಥಳೀಯ ನಿವಾಸಿ ಕರ್ನಾಟಕ ಜನಶಕ್ತಿ ಮುಖಂಡ ಬಸವರಾಜ್ ಬಾದರ್ಲಿ ಮಾತನಾಡಿ, “ಜಿಲ್ಲೆಯಲ್ಲಿ ಶಿಕ್ಷಣದ ಮಟ್ಟವನ್ನು ಮತ್ತಷ್ಟು ಏರಿಸಲು ವಸತಿ ನಿಲಯಗಳು ನೆರವಾಗಲಿವೆ. ಅನೇಕ ವರ್ಷಗಳಿಂದ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದಿದ್ದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲಾಗದೆ, ಸಾಕಷ್ಟು ಅವಕಾಶಗಳಿಂದ ವಂಚಿತರಾಗಿದ್ದಾರೆ. ಈ ಹಿನ್ನೆಲೆ, ಅವರ ವಿದ್ಯಾಭ್ಯಾಸಕ್ಕೆ ಭದ್ರತೆ ನೀಡುವ ಉದ್ದೇಶದಿಂದ ಹೊಸ ವಸತಿ ವ್ಯವಸ್ಥೆ ಉದ್ಘಾಟನೆಗೊಂಡು ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕು. ವಸತಿಯಲ್ಲಿರುವ ಸೌಲಭ್ಯಗಳ ವ್ಯವಸ್ಥೆಗಳ ಮೂಲಕ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಸಾಧನೆ ಮಾಡುತ್ತಾರೆ” ಎಂದರು.

ಹಿಂದೆ ಸಮಾಜ ಕಲ್ಯಾಣ ಜಿಲ್ಲಾಧಿಕಾರಿ ಚಿದಾನಂದ ಕುರಿ ಅವರು ಅಧಿಕಾರಿದಲ್ಲಿದ್ದಾಗ ಹಾಸ್ಟೆಲ್ ಬಗ್ಗೆ ಗಮನಕ್ಕೆ ತರಲಾಗಿತ್ತು. ಅವರು ಸಚಿವರ ಸಮಯ ನಿಗದಿಯಾಗುತ್ತಿಲ್ಲ. ಆದಾಗ ಉದ್ಘಾಟನೆ ಮಾಡಲಾಗುವುದು ಎಂದು ಭರವಸೆ ನೀಡಿದ್ದರು. ಇದಾಗಿ ಸುಮಾರು 6 ತಿಂಗಳುಗಳು ಕಳೆದಿವೆ. ಇನ್ನೂ ವಸತಿ ನಿಲಯಕ್ಕೆ ಉದ್ಘಾಟನೆ ಭಾಗ್ಯ ಇಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಮಾಜ ಕಲ್ಯಾಣ ಇಲಾಖೆ ಸಿಂಧನೂರು ತಾಲೂಕು ಅಧಿಕಾರಿ ವಿಜಯಲಕ್ಷ್ಮಿ ಮಾತನಾಡಿ, “ವಸತಿ ನಿಲಯದ ಕಟ್ಟಡದ ಒಳಭಾಗದಲ್ಲಿ ಕೆಲವು ಸಣ್ಣ ಪುಟ್ಟ ಕೆಲಸಗಳು ಬಾಕಿಯಿವೆ. ಕಾರ್ಯ ಚಟುವಟಿಕೆಗಳು ನಡೆಯುತ್ತಿವೆ. ಮುಗಿದ ತಕ್ಷಣ ಸ್ಥಳೀಯ ಶಾಸಕರ ಸಮಯಕ್ಕೆ ಅನುಗುಣವಾಗಿ ಉದ್ಘಾಟನೆ ಮಾಡಲಾಗುವುದು” ಎಂದು ಹೇಳಿದರು.

ಇದನ್ನೂ ಓದಿ: ರಾಯಚೂರು | ಏಮ್ಸ್ ಮಂಜೂರು – ಕೇಂದ್ರದ ನಿರ್ಲಕ್ಷ್ಯ ಧೋರಣೆ ಖಂಡನೀಯ : ರಝಾಕ್ ಉಸ್ತಾದ್

ನೂತನವಾಗಿ ಅಧಿಕಾರ ವಹಿಸಿಕೊಳ್ಳಲಾಗಿದ್ದು, ವಸತಿನಿಲಯದ ಕುರಿತು ಮಾಹಿತಿ ಇಲ್ಲ. ಕೂಡಲೇ ಮಾಹಿತಿ ಸಂಗ್ರಹಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಿಂಧು ಹೇಳಿದರು.

ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಕುರಿತಾದ ವಿಷಯದಲ್ಲಿ ಇಂತಹ ವಿಳಂಬ ಸರ್ಕಾರದ ಕಾರ್ಯಕ್ಷಮತೆ ಬಗ್ಗೆ ಪ್ರಶ್ನೆ ಎಬ್ಬಿಸುತ್ತಿದೆ. ಕಟ್ಟಡ ಸಿದ್ಧವಾಗಿದ್ದರೂ ಅಧಿಕೃತ ಉದ್ಘಾಟನೆಯಿಲ್ಲದ ಕಾರಣದಿಂದಾಗಿ ಅದು ಅನುಪಯುಕ್ತವಾಗಿದ್ದು, ಶಿಕ್ಷಣದ ಹಕ್ಕಿನಿಂದ ಹಲವಾರು ವಿದ್ಯಾರ್ಥಿನಿಯರು ವಂಚಿತರಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ, ಅಧಿಕಾರಿಗಳು ಮತ್ತು ಸ್ಥಳೀಯ ಆಡಳಿತ ಶೀಘ್ರದಲ್ಲೇ ಉದ್ಘಾಟನೆ ಕಾರ್ಯ ಪೂರ್ಣಗೊಳಿಸಿ, ವಿದ್ಯಾರ್ಥಿಗಳಿಗೆ ವಾಸೋಪಯೋಗಿ ಸೌಲಭ್ಯಗಳು ಲಭ್ಯವಾಗುವಂತೆ ಮಾಡುವುದರ ಮೂಲಕ ಶಿಕ್ಷಣ ವ್ಯವಸ್ಥೆಯ ಬುನಾದಿಯನ್ನು ಬಲಪಡಿಸಬೇಕಾಗಿದೆ.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....