ಬೆ. ಗ್ರಾಮಾಂತರ | ವರದಕ್ಷಿಣೆ ದೌರ್ಜನ್ಯ; ಯುವತಿಯ ಮರ್ಮಾಂಗಕ್ಕೆ ಆಸಿಡ್ ಎರಚಿದ ವಿಕೃತ ಪತಿ

Date:

Advertisements

ತಂದೆ ಮನೆಯಿಂದ ವರದಕ್ಷಿಣೆ ಹಣ ತಂದಿಲ್ಲವೆಂದು ವಿಕೃತನೊಬ್ಬ ತನ್ನ ಪತ್ನಿಯ ಮರ್ಮಾಂಗಕ್ಕೆ ಆಸಿಡ್ ಎರಚಿರುವ ಆಘಾತಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಬಾಗಲಗುಂಟೆ ನಿವಾಸಿ ಕಾವ್ಯ ವರದಕ್ಷಿಣೆ ದೌರ್ಜನ್ಯಕ್ಕೆ ತುತ್ತಾಗಿರುವ ಯುವತಿ. ಕಾವ್ಯ ಅವರು ಕಳೆದ ಮೇ ತಿಂಗಳಿನಲ್ಲಿ ಮಂಡ್ಯ ಮೂಲಕ ಸಂತೋಷ್ ಎಂಬಾತನನ್ನು ಮದುವೆಯಾಗಿದ್ದರು. ಮದ್ಯದ ವ್ಯಸನಿಯಾಗಿದ್ದ ಸಂತೋಷ್ ಆಕೆಗೆ ದಿನನಿತ್ಯ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಆರೋಪಿ ಸಂತೋಷ್ ಮತ್ತು ಆತನ ತಾಯಿಯ ವಿರುದ್ಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಉದ್ಯೋಗ ಮಾಡದ ಸಂತೋಷ್ ಪ್ರತಿದಿನ ಮದ್ಯಪಾನ ಮಾಡುತ್ತಿದ್ದ. ಮದುವೆಯಾದ ಹೊಸದರಲ್ಲಿ ದಂಪತಿಗಳು ಬೆಂಗಳೂರಿನ ಕುರುಬನಹಳ್ಳಿಯಲ್ಲಿ ವಾಸವಾಗಿದ್ದರು. ಆದರೆ, ಬಾಡಿಗೆ ಕಟ್ಟದ ಕಾರಣ ಮನೆ ಖಾಲಿ ಮಾಡಿದ್ದರು. ಆ ಬಳಿಕ, ಬಾಗಲಗುಂಟೆ ಬಳಿ ವಾಸವಾಗಿದ್ದರು ಎಂದು ಹೇಳಲಾಗಿದೆ.

Advertisements

ಕಾವ್ಯ ಅವರನ್ನು ಮದುವೆಯಾಗುವ ಸಮಯದಲ್ಲಿ ಆಕೆಯ ಪೋಷಕರಿಂದ ಸಂತೋಷ್ 20ಗ್ರಾಂ ಚಿನ್ನಾಭರಣವನ್ನು ವರದಕ್ಷಿಣೆಯಾಗಿ ಪಡೆದಿದ್ದ. ಮಾತ್ರವಲ್ಲದೆ, ಹಣಕ್ಕೂ ಬೇಡಿಕೆ ಇಟ್ಟಿದ್ದ ಎಂದು ಆರೋಪಿಸಲಾಗಿದೆ.

ಮದ್ಯಪಾನ ಮಾಡಿ ವರದಕ್ಷಿಣೆ ಹಣದ ವಿಚಾರಕ್ಕೆ ಕಾವ್ಯ ಜೊತೆ ಜಗಳ ಮಾಡಿ, ಹಲ್ಲೆ ನಡೆಸುತ್ತಿದ್ದ. ಇತ್ತೀಚೆಗೆ ಗಲಾಟೆ ಮಾಡಿದ್ದ ಸಂತೋಷ್, ಶೌಚಾಲಯ ಸ್ವಚ್ಛತೆಗಾಗಿ ತಂದಿಟ್ಟಿದ್ದ ಆಸಿಡ್‌ಅನ್ನು ಕಾವ್ಯಾಳ ಬೆನ್ನು, ಸೊಂಟ ಹಾಗೂ ಮರ್ಮಾಂಗಕ್ಕೆ ಎರಚಿ ವಿಕೃತಿ ಮರೆದಿದ್ದಾನೆ ಎಂದು ತಿಳಿದುಬಂದಿದೆ.

ವಿಕೃತ ಪತಿ ಮತ್ತು ಆತನ ತಾಯಿ ಪುಟ್ಟಮ್ಮ ವಿರುದ್ಧ ಸಂತ್ರಸ್ತೆ ಕಾವ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅವರ ದೂರಿನ ಆಧಾರದ ಮೇಲೆ ಪೊಲೀಸರು ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X