ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ವಿಧಾನ ಪರಿಷತ್‌ನ ನಾಲ್ಕು ಖಾಲಿ ಸ್ಥಾನಗಳಿಗೆ ಹೆಸರುಗಳನ್ನ ಅಂತಿಮಗೊಳಿಸಲಾಗಿದೆ.
ಹಿರಿಯ ಪತ್ರಕರ್ತ ಕೆ.ಶಿವಕುಮಾರ್ ಮತ್ತು ದಲಿತ ಮುಖಂಡ ಎಫ್.ಎಚ್.ಜಕ್ಕಪ್ಪನವರ್ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಕರ್ನಾಟಕದ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವರೂ ಆಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಬೇಗಾನೆ ರಾಮಯ್ಯ ಅವರ ಪುತ್ರಿಯಾಗಿರುವ ಡಾ.ಆರತಿ ಅವರು ಕಾಂಗ್ರೆಸ್ ಪಕ್ಷದೊಂದಿಗೆ ದೀರ್ಘಕಾಲದ ಸಂಬಂಧ ಹೊಂದಿದ್ದಾರೆ. ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಎನ್‌ಆರ್‌ಐ ಸೆಲ್‌ನ ಮೊದಲ ಅಧ್ಯಕ್ಷರಾಗಿದ್ದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಚಾರ್ಮಾಡಿ ಘಾಟ್: ಹೊಸ ನಿಯಮ ಜಾರಿ
ಆರತಿಯವರು ಸಾಮಾಜಿಕ ಆರ್ಥಿಕ ಅಗತ್ಯಗಳನ್ನು ಪೂರೈಸಲು ಮತ್ತು ಕರ್ನಾಟಕದ ದೂರದ ಹಳ್ಳಿಗಳಲ್ಲಿ ಉತ್ತಮ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲು ‘ಕೃಷ್ಣ ಫೌಂಡೇಶನ್ ಎಂಬ NGO ಅನ್ನು ಪ್ರಾರಂಭಿಸಿ, ಕೆಲಸ ಮಾಡಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದಿಂದ ‘ರಾಜಕೀಯ ವಿಜ್ಞಾನ’ ಮತ್ತು ವಾಷಿಂಗ್ಟನ್ ಜಾರ್ಜ್ ಮೇಸನ್ ವಿಶ್ವವಿದ್ಯಾಲಯದಿಂದ ‘ಅಂತರರಾಷ್ಟ್ರೀಯ ವಾಣಿಜ್ಯ ಮತ್ತು ಸಾರ್ವಜನಿಕ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದು, ಕುವೆಂಪು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಲಭಿಸಿದೆ.