ಚಾಮರಾಜನಗರ | ಡಾ. ಬಿ.ಆರ್. ಅಂಬೇಡ್ಕರ್ ಮಾನವೀಯ ಮೌಲ್ಯವುಳ್ಳ ವ್ಯಕ್ತಿ: ಸಚಿವ ಕೆ. ವೆಂಕಟೇಶ್

Date:

ಚಾಮರಾಜನಗರದ ಸರ್ಕಾರಿ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ, ಡಾ. ಬಿ.ಆರ್. ಅಂಬೇಡ್ಕರ್‍ರವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್, ‘ದೇಶದ ಎಲ್ಲಾ ವರ್ಗಗಳ ಜನರ ಹಿತ ಬಯಸಿ ಎಲ್ಲರನ್ನೊಳಗೊಂಡ ಕಾನೂನು ಚೌಕಟ್ಟಿನಡಿ ಸಂವಿಧಾನ ರಚಿಸಿದ ಡಾ. ಬಿ.ಆರ್. ಅಂಬೇಡ್ಕರ್ ಮಾನವೀಯ ಮೌಲ್ಯವುಳ್ಳ ಮಹಾನ್ ವ್ಯಕ್ತಿಯಾಗಿದ್ದಾರೆ’ ಎಂದರು.

- Advertisement -

“ಅಂಬೇಡ್ಕರ್ ಬಾಲ್ಯದಲ್ಲಿ ಸಾಕಷ್ಟು ಅಪಮಾನ, ನೋವು, ಸಂಕಷ್ಟ ಅನುಭವಿಸಿದ್ದರೂ ಮಾನವೀಯ ಹೃದಯವಂತಿಕೆ ಅವರಲ್ಲಿತ್ತು. ಅದಕ್ಕಾಗಿಯೇ, ದೇಶದಲ್ಲಿದ್ದ ಜಾತಿಪದ್ದತಿ, ಸಾಮಾಜಿಕ ತಾರತಮ್ಯ, ಸಾಮಾಜಿಕ, ಅರ್ಥಿಕ, ಕಾನೂನು ಸ್ಥಿತಿಗತಿಗಳನ್ನು ಆಳವಾಗಿ ಅಧ್ಯಯನ ಮಾಡಲು ಸಾಧ್ಯವಾಯಿತು. ಬಹಳ ವೈವಿಧ್ಯಮಯ ಧರ್ಮ, ಸಂಸ್ಕೃತಿ, ಭಾಷೆಗಳಿರುವ ಭಾರತದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳ ಮೂಲಕ ಸಾಮಾಜಿಕ ಸುಧಾರಣೆಗೆ ಒತ್ತು ನೀಡಿದರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ದೇಶದ ಸ್ಥಿತಿ ಬಹಳ ಚಿಂತಾಜನಕವಾಗಿತ್ತು. ಅಂತಹ ಸಮಯದಲ್ಲಿ ಸಾಕಷ್ಟು ತಜ್ಞರೊಂದಿಗೆ ಚರ್ಚಿಸಿ, ಚಿಂತನೆ ನಡೆಸಿ ಅದ್ಭುತ ಸಂವಿಧಾನವನ್ನು ಕೊಡುಗೆ ನೀಡಿದರು. ಎಲ್ಲಾ ಸಮಾಜ, ಸಮುದಾಯಗಳ ಜನರು ಸಂವಿಧಾನದ ಭಾಗವಾಗಲು ಅನುವು ಮಾಡಿಕೊಟ್ಟರು. ಅಂಬೇಡ್ಕರ್ ಅವರ ಮೌಲ್ಯಯುತ ಆದರ್ಶ ವಿಚಾರಧಾರೆಗಳನ್ನು ಸ್ಮರಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕಾಗಿದೆ” ಎಂದು ತಿಳಿಸಿದರು.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ. ರಹಮತ್ ತರೀಕೆರೆಯವರು ಮುಖ್ಯ ಭಾಷಣ ಮಾಡಿ, “ಎಲ್ಲರ ಒಳಿತನ್ನು ಬಯಸಿದ್ದ ಅಂಬೇಡ್ಕರ್ ಸಂವಿಧಾನವನ್ನು ಕೇವಲ ದಲಿತರು, ಶೋಷಿತರಿಗಾಗಿ ಸಂವಿಧಾನ ರಚಿಸಿಲ್ಲ. ಎಲ್ಲಾ ಭಾರತೀಯರಿಗಾಗಿ, ಎಲ್ಲಾ ಸಮಾಜ, ಸಮುದಾಯ, ವರ್ಗಗಳ ಏಳಿಗೆಗಾಗಿ ರಚಿಸಿದ್ದಾರೆ. ಸಂವಿಧಾನದ ಸೌಲಭ್ಯ ಪಡೆಯುತ್ತಿರುವ ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಂಬೇಡ್ಕರ್ ಜನ್ಮದಿನವನ್ನು ಊರಹಬ್ಬ, ನಾಡಹಬ್ಬವಾಗಿ ಆಚರಿಸುವಂತಾಗಬೇಕು. ಇಡೀ ಜೀವನಪರ್ಯಂತ ಕಷ್ಟ, ನೋವುಗಳನ್ನು ಅನುಭವಿಸಿದ್ದರು ಭಾರತವನ್ನು ಎಲ್ಲಾ ಸಮಾಜಗಳು ಸೇರಿ ಕಟ್ಟಬೇಕು, ಸಮುದಾಯಗಳನ್ನು ಬೆಸೆಯುವ ಭಾರತವಾಗಬೇಕು ಎಂಬುದೇ ಅಂಬೇಡ್ಕರ್ ಅವರ ಆಶಯವಾಗಿತ್ತು. ವೈಯಕ್ತಿಕವಾಗಿ ಸುಖ, ಸಂತೋಷ ಕಾಣದ ವ್ಯಕ್ತಿ ಇಡೀ ದೇಶದ ಜನರ ಸುಖ, ಶಾಂತಿ, ನೆಮ್ಮದಿಗಾಗಿ ಜೀವನವನ್ನೆ ಮುಡಿಪಾಗಿಟ್ಟರು. ಅಪಾರ ಪುಸ್ತಕ ಪ್ರೇಮಿಯಾಗಿದ್ದ ಅಂಬೇಡ್ಕರ್ ಜೀವನದುದ್ದಕ್ಕೂ ಓದುವುದರಲ್ಲೆ ಇಡೀ ರಾತ್ರಿ ಕಳೆಯುತ್ತಿದ್ದರು. ದೇಶದ ಸಾಮಾಜಿಕ ರೋಗಗಳ ಬಿಡುಗಡೆಗಾಗಿ ಜ್ಞಾನದ ಯುದ್ಧ ಆರಂಭಿಸಿದ್ದ ಅಂಬೇಡ್ಕರ್ ಜ್ಞಾನದ ಸಂಗಮವಾಗಿದ್ದಾರೆ” ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಶ್ರೀರೂಪ ಮಾತನಾಡಿ, “ಇತಿಹಾಸದ ಪುಟವಾಗಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರು ಈ ಕಾಲಘಟ್ಟದಲ್ಲಿಯೂ ಪ್ರಸ್ತುತವಾಗಿದ್ದಾರೆ. ಸಮಾಜ ಸುಧಾರಕರು, ರಾಜಕೀಯ ಚಿಂತಕರು, ಕಾನೂನು ತಜ್ಞರು, ಅರ್ಥಶಾಸ್ತ್ರಜ್ಞರು ಆಗಿದ್ದ ಅಂಬೇಡ್ಕರ್ ಆರ್.ಬಿ.ಐ ಸ್ಥಾಪನೆಗೆ ಅಪಾರ ಕೊಡುಗೆ ನೀಡಿದ್ದಾರೆ. ನದಿಗಳ ಜೋಡಣೆ, ರೈತರ ಬೆಳೆಗಳಿಗೆ ಬೆಂಬಲ ಬೆಲೆ, ಸಣ್ಣ ಹಿಡುವಳಿದಾರರ ಹಿತ, ಕೃಷಿ, ಕೈಗಾರಿಕೆ, ಕಾರ್ಮಿಕರ ವಿಮಾ ಯೋಜನೆ, ಕನಿಷ್ಠ ವೇತನ ಸೇರಿದಂತೆ ದೇಶದ ಅನೇಕ ಯೋಜನೆ ಸುಧಾರಣೆಗಳಿಗೆ ಮುನ್ನುಡಿ ಬರೆದರು. ಮಹಿಳೆಯರು ಸೇರಿದಂತೆ ಎಲ್ಲರಿಗೂ ಸಮಾನತೆ, ಮತದಾನದ ಹಕ್ಕು ನೀಡಿದರು’ ಎಂದರು.

ಮೈಸೂರಿನ ವಿಶ್ವಮೈತ್ರಿ ಬುದ್ದವಿಹಾರದ ಡಾ. ಕಲ್ಯಾಣ ಸಿರಿ ಭಂತೇಜಿ ಅವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ, ಅಂಬೇಡ್ಕರ್ ಜಗತ್ತಿನ ಶ್ರೇಷ್ಠ ಸಂವಿದಾನವನ್ನು ಬಾರತಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಸಂವಿಧಾನದ ಮೂಲ ತತ್ವಗಳಾದ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಅಶಯಗಳಡಿ ಸಮಸಮಾಜ ಕಟ್ಟಲು ಎಲ್ಲರೂ ಮುಂದಾಗಬೇಕು ಪ್ರಜ್ಞಾಪೂರ್ವಕ ಚಿಂತನೆಯಡಿ ಪ್ರಬುದ್ಧ ಬದುಕು ಕಟ್ಟಿಕೊಳ್ಳಬೇಕು. ನಮ್ಮ ನಡೆ ಬುದ್ಧನ ಕಡೆಗಿ ಇರಬೇಕು ಎಂದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಶಿಕ್ಷಣದಿಂದ ಮಾತ್ರ ದೇಶದಲ್ಲಿ ಸಮಸಮಾಜ ನಿರ್ಮಾಣ ಮಾಡಲು ಸಾಧ್ಯ: ಎನ್ ಚಲುವರಾಯಸ್ವಾಮಿ

ಕಾರ್ಯಕ್ರಮದಲ್ಲಿ ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ. ಚಂದ್ರು, ಚೂಡಾ ಅಧ್ಯಕ್ಷ ಮಹಮದ್ ಅಸ್ಗರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶೃತಿ, ಡಿವೈಎಸ್ಪಿ. ಸ್ನೇಹರಾಜ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮುನಿರಾಜು, ನಗರಸಭೆ ಪೌರಾಯುಕ್ತ ಪರಶುರಾಮ್ ಛಲವಾದಿ, ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...