ಚಾಮರಾಜನಗರ | ಡಾ ಬಾಬು ಜಗಜೀವನ್ ರಾಮ್ ರ ಚಿಂತನೆಗಳು ದೇಶದ ಜನರ ಪರವಾಗಿದ್ದವು: ಸಚಿವ ಕೆ ವೆಂಕಟೇಶ್

Date:

ಚಾಮರಾಜನಗರದ ಪೇಟೆ ಸರ್ಕಾರಿ ಪ್ರೈಮರಿ ಶಾಲೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ಆಯೊಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್‍ರವರ 119ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್, ‘ಡಾ. ಬಾಬು ಜಗಜೀವನ್ ರಾಮ್ ರ ಚಿಂತನೆಗಳು ದೇಶದ ಜನರ ಪರವಾಗಿದ್ದವು’ ಎಂದು ಹೇಳಿದರು.

- Advertisement -

ಜನರಿಗೆ ಸಮಾನತೆಯನ್ನು ದೊರಕಿಸಿಕೊಡುವುದೇ ಅವರ ಚಿಂತನೆಗಳ ಮೂಲ ಉದ್ದೇಶವಾಗಿತ್ತು. ಬಹಳ ಸುದೀರ್ಘ ಅವಧಿಯಲ್ಲಿ ರಾಷ್ಟ್ರದ ಸೇವೆಯಲ್ಲಿದ್ದ ಬಾಬೂಜೀ ಜೀವನದುದ್ದಕ್ಕೂ ಸಾಮಾಜಿಕ ಅಭಿವೃದ್ಧಿ ಹಾಗೂ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. 1908ರಲ್ಲಿ ಬಿಹಾರ ರಾಜ್ಯದ ಸಾಮಾನ್ಯ ಬಡಕುಟುಂಬದಲ್ಲಿ ಜನಿಸಿ, ಚಿಕ್ಕವಯಸ್ಸಿನಲ್ಲಿಯೇ ದೇಶದ ಸ್ಥಿತಿಗತಿ, ಸಮಾಜದ ಏರು-ಪೇರುಗಳನ್ನು ಅವಲೋಕಿಸುತ್ತಿದ್ದರು. ಸ್ವಾತಂತ್ರ್ಯನಂತರ ದೇಶದ ಜನರನ್ನು ಒಗ್ಗೂಡಿಸಿ ಸಾಮಾಜಿಕ ಸುಧಾರಣೆಗೆ ನಾಂದಿ ಹಾಡಿದರು. ಅವರ ಆದರ್ಶಗಳು, ಮಾರ್ಗದರ್ಶನಗಳನ್ನು ನಾವು ಅನುಸರಿಸಬೇಕು. ಅವರನ್ನು ಸ್ಮರಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಬ್ರಿಟಿಷರ ಆಡಳಿತದಲ್ಲಿ ದೇಶದ ಜನಜೀವನ, ಕಾರ್ಮಿಕರ ಸ್ಥಿತಿ ಶೋಚನೀಯವಾಗಿತ್ತು. ಇದನ್ನು ಮನಗಂಡಿದ್ದ ಬಾಬೂಜೀ ಕಾರ್ಮಿಕರ ಕಲ್ಯಾಣಕ್ಕಾಗಿ ಸಮಾನವೇತನ ಕಾಯ್ದೆ ಜಾರಿಗೊಳಿಸಿದರು. 45 ರಿಂದ 50 ವರ್ಷಗಳ ಕಾಲ ರಾಜಕಾರಣಿಯಾಗಿದ್ದ ಬಾಬೂಜೀ ಕೃಷಿ, ರಕ್ಷಣೆ, ರೈಲ್ವೆ, ಕಾರ್ಮಿಕ, ಆಹಾರ ಸೇರಿದಂತೆ ವಿವಿಧ ಖಾತೆಗಳ ಮಂತ್ರಿಗಳಾಗಿ ದೇಶವನ್ನು ಮುನ್ನೆಡೆಸಿದರು. ದೇಶದಲ್ಲಿ ಬರಗಾಲ ಎದುರಾದ ಸಂದರ್ಭದಲ್ಲಿ ಕೃಷಿ ಸಚಿವರಾಗಿದ್ದ ಬಾಬೂಜೀ ಹಸಿರುಕ್ರಾಂತಿಯ ಮೂಲಕ ಮಾದರಿ ಬೆಳೆ ಬೆಳೆದು ದೇಶ ಆಹಾರಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಲು ನೆರವಾದರು ಎಂದು ತಿಳಿಸಿದರು.

ಮೈಸೂರು ವಿಶ್ವವಿದ್ಯಾನಿಲಯ ಮಾನಸ ಗಂಗೋತ್ರಿಯ ಡಾ. ಬಾಬು ಜಗಜೀವನರಾಮ್ ಅಧ್ಯಯನ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಸಂದರ್ಶಕ ಪ್ರಾಧ್ಯಾಪಕರಾದ ಹೆಚ್.ಆರ್. ಭೀಮಾಶಂಕರ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಅಪಾರ ಪ್ರತಿಭಾವಂತರಾಗಿದ್ದ ಬಾಬೂಜೀಯವರು ಬಡವರು, ದಲಿತರು, ಶೋಷಿತರು, ತುಳಿತಕ್ಕೊಳಗಾದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ಬಡವರು, ಶೋಷಿತರ ಸಂಘಟಿಸಿ ಸಮಾನತೆಗಾಗಿ ಹೋರಾಡಿದರು. 37ನೇ ವಯಸ್ಸಿಗೆ ಸಂವಿಧಾನ ರಚನೆ ಸಮಿತಿ ಸದಸ್ಯರಾಗಿದ್ದ ಬಾಬೂಜೀಯವರು ಸಂಸತ್‍ನಲ್ಲಿ ಹತ್ತು-ಹಲವು ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿ ದೇಶ ಪ್ರಗತಿ ಸಾಧಿಸಲು ಶ್ರಮಿಸಿದರು ಎಂದರು.

ಜಿಲ್ಲಾಧಿಕಾರಿ ಶ್ರೀರೂಪ ಮಾತನಾಡಿ, ಭಾರತೀಯ ಇತಿಹಾಸದ ಪ್ರಮುಖವಾದ ದಿನವಾದ ಇಂದು ಬಾಬೂಜೀಯವರ ಜನ್ಮದಿನವನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ. ಬಾಬೂಜೀ ಕೇವಲ ರಾಜಕಾರಣಿಯಲ್ಲ, ಅವರು ನವಭಾರತದ ನಿರ್ಮಾತೃ ಆಗಿದ್ದಾರೆ. ಸಾಮಾಜಿಕ ಅಸಮಾನತೆ, ಅಸ್ಪೃಶ್ಯತೆ ವಿರುದ್ಧ ಹೋರಾಡಿದ ಮಹಾನ್ ಚೇತನ ಎಂದರೇ ತಪ್ಪಾಗಲಾರದು. ಬಾಬೂ ಜಗಜೀವನ್‍ರಾಮ್ ಅವರು ಉಪಪ್ರಧಾನಿಯಾಗಿ ದೇಶದ ಆಡಳಿತದ ದೊಡ್ಡ ಶಕ್ತಿಯಾಗಿ ನಾಡಿಗೆ ಸ್ಪೂರ್ತಿದಾಯಕ ಕೊಡುಗೆ ನೀಡಿದ್ದಾರೆ ಎಂದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಬಾಲಕಾರ್ಮಿಕರಿಂದ ದುಡಿಸಿಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಿ: ಶ್ರೀರೂಪ

ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಹಮದ್ ಅಸ್ಗರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಂ. ಮುತ್ತುರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮುನಿರಾಜು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವೆಂಕಟೇಶ್, ನಗರಸಭೆ ಪೌರಾಯುಕ್ತ ಪರಶುರಾಮ್ ಛಲವಾದಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಿಂದ್ಯಾ, ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹ: ಅ.9ರಂದು ಮತ ಕಾವಲು ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್...