ಕಲಬುರಗಿ | ಡಾ. ಬಿ.ಆರ್.‌ ಅಂಬೇಡ್ಕರರು ಶೋಷಿತರಿಗೆ ನ್ಯಾಯ ಒದಗಿಸಲು ಶ್ರಮಿಸಿದರು : ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

Date:

ಡಾ.ಬಿ.ಆರ್.ಅಂಬೇಡ್ಕರ್ ಅವರು ಕೇವಲ ಸಂವಿಧಾನ ಅಷ್ಟೇ ರಚನೆ ಮಾಡಲಿಲ್ಲ, ಬದಲಾಗಿ ಈ ದೇಶದ ಬಡ, ಶೋಷಿತರು ಸೇರಿದಂತೆ ತುಳಿತಕ್ಕೊಳಗಾದ ಸಮುದಾಯಗಳಿಗೆ ಹೆಣ್ಣು-ಗಂಡು ಭೇದವಿಲ್ಲದೆ ಸರ್ವರನ್ನು ಸಮನಾಗಿ ಕಾಣಲು ಹೋರಾಡಿದ ಸಾಮಾಜಿಕ ಕ್ರಾಂತಿಯ ಅಪ್ರತಿಮ ಹೋರಾಟಗಾರಾಗಿದ್ದರು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು.

- Advertisement -

ಕರ್ನಾಟಕ ರಾಜ್ಯ ಸರ್ಕಾರಿ, ಅರೆ ಸರಕಾರಿ, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ನೌಕರರ ಸಂಘ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಡಾ.ಬಿ.ಅಂಬೇಡ್ಕರ್‌ ಅವರ 67ನೇ ಮಹಾ ಪರಿನಿರ್ವಾಣ ದಿನ ಅಂಗವಾಗಿ ಕಲಬುರಗಿ ನಗರದ ಜಗತ್ ವೃತ್ತದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಭಾರತ ಕೇವಲ ಸ್ವಾತಂತ್ರ್ಯ ದೇಶ ಅಷ್ಟೇ ಅಲ್ಲದೆ ಗಣರಾಜ್ಯವಾಗಿದೆ. ಅಂಬೇಡ್ಕರವರು ಸಂವಿಧಾನ ರಚಿಸಿ ಅದನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಿದರು. ಶಿಕ್ಷಣ ಮತ್ತು ಸಮಾನತೆಗೆ ಹೆಚ್ಚಿನ ಒತ್ತು ನೀಡಿದ ಬಾಬಾ ಸಾಹೇಬರು ಶಿಕ್ಷಣ ಮತ್ತು ಆರ್ಥಿಕ ತಜ್ಞರಾಗಿದ್ದರು. ನಾವೆಲ್ಲರು ಅಂಬೇಡ್ಕರ್ ಅವರ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತು ಪ್ರತಿಯೊಬ್ಬರು ಶಿಕ್ಷಣ ಪಡೆದು ಸುಭದ್ರ ದೇಶ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು” ಕರೆ ನೀಡಿದರು.

ಕಲಬುರಗಿ ಪದವಿ ಮಹಾವಿದ್ಯಾಲಯದ ಇತಿಹಾಸ ಪ್ರಾಧ್ಯಾಪಕ ಡಾ.ವಿಜಯಕುಮಾರ ಸಾಲಿಮನಿ ವಿಶೇಷ ಉಪನ್ಯಾಸ ನೀಡಿ, “ಭಾರತದಲ್ಲಿ ಜಾತಿ ಪದ್ಧತಿ ನಿರ್ಮೂಲನೆಗೆ ಅಂಬೇಡ್ಕರರು ಜೀವನದುದ್ದಕ್ಕೂ ಹೋರಾಡಿದರು. ಅಧುನಿಕ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿಯಾಗಿ ಇಡೀ ವಿಶ್ವವೇ ಮೆಚ್ಚುವಂತಹ ಶ್ರೇಷ್ಠ ಸಂವಿಧಾನ ಅವರು ನೀಡಿದ್ದಾರೆ” ಎಂದರು.

ಕಾರ್ಯಕ್ರಮಕ್ಕೂ ಮುನ್ನ ಸಿದ್ದಾರ್ಥ ವಿಹಾರ ಟ್ರಸ್ಟ್‌ ನ ಬೌದ್ಧ ಬಿಕ್ಕು ಸಂಘಾನಂದ ಭಂತೇಜಿ ನೇತೃತ್ವದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಬುದ್ಧ ವಂದನೆ ಸಲ್ಲಿಸಲಾಯಿತು.

ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ, ನಗರ ಪೊಲೀಸ್ ಆಯುಕ್ತ ಚೇತನಕುಮಾರ ಆರ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ.ಶುಭ ಸೇರಿದಂತೆ ಇತರರು ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? Fact check | ಯತ್ನಾಳ್‌ ಹೇಳಿದ ಭಾರೀ ಸುಳ್ಳು: ಸಿಎಂ ವಿರುದ್ಧ ಆರೋಪ ಸುಳ್ಳೆಂಬುದಕ್ಕೆ ಇಲ್ಲಿದೆ ಸಾಕ್ಷಿ

ಕಾರ್ಯಕ್ರಮದಲ್ಲಿ ಡಿ.ಹೆಚ್.ಓ. ಡಾ.ರಾಜಶೇಖರ ಮಾಲಿ, ಜಿಮ್ಸ್ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಅಂಬಾರಾಯ ರುದ್ರವಾಡಿ, ಕರ್ನಾಟಕ ರಾಜ್ಯ ಸರ್ಕಾರಿ, ಅರೆಸರಕಾರಿ, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ನೌಕರರ ಸಂಘದ ರಾಜ್ಯಾಧ್ಯಕ್ಷ ಮಹೇಶ ಹುಬಳಿ, ಪದಾಧಿಕಾರಿಗಳಾದ ಸೋಮಶೇಖರ ಎಸ್. ಮದನಕರ್, ನಂದಿನಿ ಸನ್ಬಾಳ, ಜೈ ಭೀಮ್, ಜಮುನಾ ಟಿಳೆ, ಸುಮಂಗಲಾ ಸಂಗಾವಿ ಸೇರಿದಂತೆ ವಿವಿಧ ಸಮಾಜದ ಮುಖಂಡರು. ನೌಕರರು, ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....