ಬೀದರ್‌ | ಡಿ.22 ರಂದು ಭಾಲ್ಕಿಯಲ್ಲಿ ಡಾ.ಚನ್ನಬಸವ ಪಟ್ಟದ್ದೇವರ 134ನೇ ಜಯಂತೋತ್ಸವ

Date:

Advertisements

ಭಾಲ್ಕಿ ಚನ್ನಬಸವಾಶ್ರಮದಲ್ಲಿ ಡಿ.22 ರಂದು ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ 134ನೇ ಜಯಂತೋತ್ಸವ ಮತ್ತು ಮೂರ್ತಿ ಅನಾವರಣ ಸಮಾರಂಭ ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ನ ಅಧ್ಯಕ್ಷ ಡಾ.ಬಸವಲಿಂಗಪಟ್ಟದ್ದೇವರು ಹೇಳಿದರು.

ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಭಾಲ್ಕಿಯ ಹಿರೇಮಠ ಸಂಸ್ಥಾನದಲ್ಲಿ ಉಭಯ ಶ್ರೀಗಳು ಮಾತನಾಡಿದರು.

ಡಾ. ಚನ್ನಬಸವ ಪಟ್ಟದ್ದೇವರ ಜಯಂತೋತ್ಸವ ಅಂಗವಾಗಿ ಈಗಾಗಲೇ ಅವರ ಜನ್ಮಸ್ಥಳ ಕಮಲನಗರದಿಂದ ಭಾಲ್ಕಿಗೆ ಪಾದಯಾತ್ರೆ ಮೂಲಕ ಬಸವ ಜ್ಯೋತಿ ತರಲಾಗಿದೆ. ಶರಣತತ್ವ ದರ್ಶನ ಪ್ರವಚನ ಆರಂಭಗೊಂಡಿದೆ. ವಿವಿಧ ಸ್ಪರ್ಧೆಗಳು ಏರ್ಪಡಿಸುವ ಮೂಲಕ ಪಟ್ಟದ್ದೇವರ ಜಯಂತಿ ಸಂಭ್ರಮದಿಂದ ಆಚರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

Advertisements

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸಮಾರಂಭ ಉದ್ಘಾಟಿಸಲಿದ್ದಾರೆ. ನಿಡಸೋಸಿ ಜಗದ್ಗುರು ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಜಗದ್ಗುರು ಪಂಚಮಶಿವಲಿಂಗೇಶ್ವರ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ವಿ.ಸಿದ್ಧರಾಮಣ್ಣ ಶರಣರು ಸಮ್ಮುಖ ವಹಿಸುವರು.

ಅಂದು ಬೆಳಿಗ್ಗೆ 6ಕ್ಕೆ ಹಿರೇಮಠ ಸಂಸ್ಥಾನದಿಂದ ಚನ್ನಬಸವಾಶ್ರಮದ ವರೆಗೆ ಬಸವಪ್ರಭಾತ ಫೇರಿ ನಡೆಯಲಿದೆ. 7ಕ್ಕೆ ಷಟ್‌ಸ್ಥಲ ಧ್ವಜಾರೋಹಣ ನೆರವೇರುವುದು. 7.30ಕ್ಕೆ ವಚನಾಭಿಷೇಕ ಜರುಗಲಿದೆ. 10ಕ್ಕೆ ಪಟ್ಟದ್ದೇವರ ಮೂರ್ತಿ ಅನಾವರಣ, 10.30 ಗಂಟೆಗೆ ತೊಟ್ಟಿಲು ಕಾರ್ಯಕ್ರಮ, 11ಕ್ಕೆ ವೇದಿಕೆ ಕಾರ್ಯಕ್ರಮ, ವಿವಿಧ ಸ್ಪರ್ಧೆಯ ವಿಜೇತರಿಗೆ ಬಹುಮಾನ, ಸಾಧಕರಿಗೆ ಸನ್ಮಾನ, ಸಂಜೆ 4ಕ್ಕೆ ಸಮಾರೋಪ ಸಮಾರಂಭ ಜರುಗಲಿದೆ ಎಂದು ಮಾಹಿತಿ ನೀಡಿದರು.

ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, “ಡಾ.ಚನ್ನಬಸವ ಪಟ್ಟದ್ದೇವರು 109 ವರ್ಷಗಳ ಕಾಲ ಗಂಧದಂತೆ ಬದುಕು ಸವೆದು ಈ ಭಾಗದ ಬೆಳವಣಿಗೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಅಂತಹ ಪೂಜ್ಯರ ಜಯಂತೋತ್ಸವ ಡಾ.ಬಸವಲಿಂಗ ಪಟ್ಟದ್ದೇವರ ದಿವ್ಯ ಸಾನ್ನಿಧ್ಯದಲ್ಲಿ ವೈಭವದಿಂದ ನೆರವೇರಿಸಲು ಸಿದ್ಧತೆ ಪೂರ್ಣಗೊಂಡಿವೆ” ಎಂದರು.

ಡಾ.ಚನ್ನಬಸವ ಪಟ್ಟದ್ದೇವರ ಕಾಯಕ ಪ್ರಶಸ್ತಿ ಪ್ರದಾನ :

ಪಟ್ಟದ್ದೇವರ ಧ್ಯಾನ ಮಂದಿರದಲ್ಲಿ ಸ್ಥಾಪನೆ ಮಾಡಿರುವ ಡಾ.ಚನ್ನಬಸವ ಪಟ್ಟದ್ದೇವರ ಮೂರ್ತಿ ನಿಡಸೋಸಿ ಪೂಜ್ಯರು ಅನಾವರಣಗೊಳಿಸಲಿದ್ದಾರೆ. 2023ನೇ ಸಾಲಿನ ಡಾ.ಚನ್ನಬಸವ ಪಟ್ಟದ್ದೇವರ ಕಾಯಕ ಪ್ರಶಸ್ತಿಯನ್ನು ಬೀದರ್ ಅಕ್ಕಮಹಾದೇವಿ ಮಹಿಳಾ ಕಾಲೇಜಿನ ಉಪನ್ಯಾಸಕ ಶಿವಶರಣಪ್ಪ ಹುಗ್ಗೆ ಪಾಟೀಲ್ ಅವರಿಗೆ ನೀಡಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.

‌ಪೌರಾಡಳಿತ ಸಚಿವ ರಹೀಂ ಖಾನ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಎಂಎಲ್ಸಿ ರಘುನಾಥ ಮಲ್ಕಾಪೂರೆ ಬಸವ ಗುರುವಿನ ಪೂಜೆ ನೆರವೇರಿಸುವರು. ನಿವೃತ್ತ ಐಪಿಎಸ್ ಅಧಿಕಾರಿ ಡಾ.ಡಿ.ವಿ.ಗುರುಪ್ರಸಾದ ಅನುಭಾವ ನೀಡಲಿದ್ದಾರೆ. ಮಾಜಿ ಶಾಸಕ ಪ್ರಕಾಶ ಖಂಡ್ರೆ ಅಧ್ಯಕ್ಷತೆ ವಹಿಸುವರು.ನಾರಂಜಾ ಸಹಕಾರ ಸಕ್ಕರೆ ಕಾರಖಾನೆ ಅಧ್ಯಕ್ಷ ಡಿ.ಕೆ.ಸಿದ್ರಾಮ, ಪ್ರಸನ್ನಕುಮಾರ ಚೌಕಿಮಠ, ರಾಜೇಂದ್ರಕುಮಾರ ಗಂದಗೆ, ಬಾಬು ವಾಲಿ, ಶಕುಂತಲಾ ಬೆಲ್ದಾಳೆ, ನೀಲಮ್ಮ ವಿಕೆ ಪಾಟೀಲ್, ಚನ್ನಬಸವಣ್ಣ ಬಳತೆ ಸೇರಿದಂತೆ ಪೂಜ್ಯರು, ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್ | ವಿದ್ಯಾರ್ಥಿಗಳನ್ನು ಬೆತ್ತಲೆಗೊಳಿಸಿ ಹಲ್ಲೆ; ಶಿಕ್ಷಕನ ಬಂಧನ

ಸಮಾರಂಭದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಸಮಾರೋಪದ ನಂತರ ಮಹಾಕ್ರಾಂತಿ ನಾಟಕ ಪ್ರದರ್ಶನಗೊಳ್ಳಲಿದೆಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾರಂಭ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X