ಗೌರಿಬಿದನೂರು | ಜೋಡಿ ಶತಮಾನೋತ್ಸವಕ್ಕೆ ಸಜ್ಜಾದ ಹೊಸೂರು ಗ್ರಾಮ

Date:

Advertisements

ಫೆ.2ರಂದು ಡಾ.ಎಚ್.ಎನ್‌ ಜನ್ಮಶತಮಾನೋತ್ಸವ ಮತ್ತು ಶಾಲೆ ಶತಮಾನೋತ್ಸವ | ಸಿಎಂ ಸಿದ್ದರಾಮಯ್ಯ ಉದ್ಘಾಟನೆ

ಪದ್ಮಭೂಷಣ ಡಾ.ಎಚ್.‌ನರಸಿಂಹಯ್ಯ ಅವರ ಹುಟ್ಟೂರಾದ ಹೊಸೂರು ಗ್ರಾಮ, ಇದೀಗ ಜೋಡಿ ಶತಮಾನೋತ್ಸವಗಳ ಸಂಭ್ರಮಾಚರಣೆಗೆ ಸಜ್ಜಾಗಿದೆ.

ಹೌದು, 1920ರಲ್ಲಿ ಜನಸಿದ ಡಾ.ಎಚ್.ನರಸಿಂಹಯ್ಯ ಅವರ ಜನ್ಮಶತಮಾನೋತ್ಸವ ಮತ್ತು ಡಾ.ಎಚ್‌.ಎನ್‌ ಓದಿದ ಸರಕಾರಿ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಎರಡೂ ಒಂದೇ ವೇದಿಕೆಯಲ್ಲಿ ನಡೆಯುತ್ತಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹೊಸೂರು ಗ್ರಾಮಕ್ಕೆ ಇದೀಗ ಸಂಭ್ರಮ ಮನೆ ಮಾಡಿದೆ.

ಆಶ್ಚರ್ಯವೆಂಬಂತೆ 1920ರಲ್ಲೇ ಆರಂಭವಾಗಿರುವ ಸರಕಾರಿ ಮಾ.ಹಿ.ಪ್ರಾಥಮಿಕ ಶಾಲೆಗೆ 2020ಕ್ಕೆ ನೂರು ವರ್ಷಗಳು ಪೂರೈಕೆಯಾಗಿದ್ದು, ಅದೇ ವರ್ಷದಲ್ಲಿ ಜನಿಸಿರುವ ಡಾ.ಎಚ್.ನರಸಿಂಹಯ್ಯ ಅವರಿಗೂ ನೂರು ವರ್ಷಗಳು ತುಂಬುತ್ತದೆ. ಆದ್ದರಿಂದಲೇ, ಜೋಡಿ ಶತಮಾನೋತ್ಸವ ಸಮಾರಂಭ ಒಂದೇ ವೇದಿಕೆಯಲ್ಲಿ ನಡೆಯುತ್ತಿದೆ.

Advertisements

ಪ್ರಸ್ತುತ ಈ ಶಾಲೆಯಲ್ಲಿ 200ಕ್ಕೂ ಅಧಿಕ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇಲ್ಲಿ ಓದಿದ ನೂರಾರು ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಉನ್ನತ ಹುದ್ದೆಗಳಲ್ಲಿದ್ದಾರೆ. ಹಿರಿಯ ವಿದ್ಯಾರ್ಥಿಗಳೆಲ್ಲರೂ ಒಗ್ಗೂಡಿ ಸಂಘ ಕಟ್ಟಿಕೊಂಡು ಶಾಲೆಯ ಅಭಿವೃದ್ಧಿಗೆ ಮುಂದಾಗಿರುವುದು ಮಾದರಿಯುತ ನಡೆಯಾಗಿದೆ.

ಹೊಸೂರಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮುಗಿಸಿದ ಡಾ.ಎಚ್.ನರಸಿಂಹಯ್ಯ ಅವರು ಪ್ರಾಂಶುಪಾಲರಾಗಿ, ಬೆಂಗಳೂರು ವಿವಿಯ ಉಪಕುಲಪತಿಗಳಾಗಿಯೂ ಶಿಕ್ಷಣ ಕ್ಷೇತ್ರದಲ್ಲಿ ಅಗಣ್ಯ ಸೇವೆ ಸಲ್ಲಿಸಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಭಾರತ ಸರಕಾರ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಜಾತಿ ದೌರ್ಜನ್ಯ ಪ್ರಕರಣ: ಶಿಕ್ಷೆಯ ಪ್ರಮಾಣ ಕುಸಿತ; ದಲಿತ ಕಳಕಳಿಯ ವಕೀಲರ ನೇಮಕವಾಗಲಿ  

ಕೋವಿಡ್‌ ಕಾರಣಕ್ಕೆ ಮುಂದೂಡಿದ್ದ ಸಮಾರಂಭ :

2020ರಲ್ಲೇ ನಡೆಯಬೇಕಿದ್ದ ಶತಮಾನೋತ್ಸವ ಸಮಾರಂಭವು ಕೋವಿಡ್‌ ಕಾರಣದಿಂದ ಮುಂದೂಡಲ್ಪಟ್ಟಿತ್ತು. ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದ ಆಶಯದಂತೆ ಇದೀಗ ಮತ್ತೆ ಶುಭ ಮುಹೂರ್ತ ಕೂಡಿ ಬಂದಿದ್ದು, ಜೋಡಿ ಶತಮಾನೋತ್ಸವಕ್ಕೆ ಸಕಲ ತಯಾರಿಗಳು ನಡೆಯುತ್ತಿವೆ.

ಸಿಎಂ ಸಿದ್ದರಾಮಯ್ಯ ಚಾಲನೆ :

ಪೆ.2ರಂದು ಡಾ.ಎಚ್.ಎನ್‌ ಅವರು ಓದಿದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಗೌರಿಬಿದನೂರು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ನಾಡೋಜ ಡಾ.ಹಂಪ ನಾಗರಾಜಯ್ಯ ಮುಖ್ಯ ಭಾಷಣ ಮಾಡಲಿದ್ದಾರೆ. ಶತಮಾನೋತ್ಸವ ಸಮಾರಂಭದಲ್ಲಿ 10 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌, ಸಚಿವ ಮಧು ಬಂಗಾರಪ್ಪ ಸೇರಿದಂತೆ ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X