ಮೈಸೂರು | ಗೃಹಲಕ್ಷ್ಮೀ ಯೋಜನೆ ಕಡಿತಗೊಳಿಸುವ ಹುನ್ನಾರ: ಡಾ. ಹೇಮಾನಂದೀಶ್ ಆರೋಪ

Date:

ಚುನಾವಣೆ ಪೂರ್ವದಲ್ಲಿ ಬಿಪಿಎಲ್ ಹಾಗೂ ಎಪಿಎಲ್ ಎಂಬ ಭೇದಭಾವವಿಲ್ಲದೆ ಎಲ್ಲ ಅರ್ಹ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯಡಿ ಹಣ ಜಮೆ ಮಾಡುವುದಾಗಿ ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದರು. ಆದರೆ ಇದೀಗ ಲಕ್ಷಾಂತರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯನ್ನು ಬಿಪಿಎಲ್ ನೆಪ ಒಡ್ಡಿ ಸ್ಥಗಿತಗೊಳಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ದ್ರೋಹ ಮಾಡಿದೆ ಎಂದು ಬಿಜೆಪಿ ಮುಖಂಡೆ ಡಾ. ಹೇಮಾನಂದೀಶ್ ಆರೋಪಿಸಿದ್ದಾರೆ.

- Advertisement -

ಈ ಕುರಿತು ಮೈಸೂರಿನಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಗೃಹಲಕ್ಷ್ಮೀ ಯೋಜನೆಯಡಿ ರಾಜ್ಯದ 1.26 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ. ನೀಡುವುದಾಗಿ ಕಾಂಗ್ರೆಸ್ ಸರ್ಕಾರ ಭರವಸೆ ನೀಡಿತ್ತು. ಆದರೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಎರಡು ಕಂತುಗಳ ಹಣವನ್ನು ಪಾವತಿಸದೆ ಲಕ್ಷಾಂತರ ಫಲಾನುಭವಿಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಎರಡು ತಿಂಗಳ ಕಂತುಗಳ ಒಟ್ಟು ಮೊತ್ತ ಸುಮಾರು 5,000 ಕೋಟಿ ರೂ. ಆಗುತ್ತದೆ. ಈ ಹಣವನ್ನು ಸರ್ಕಾರ ಇನ್ನೂ ಬಿಡುಗಡೆ ಮಾಡದೇ ಇರುವುದರಿಂದ ಫಲಾನುಭವಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ಹೇಳಿದರು.

ಸರ್ಕಾರ ಈಗ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನೆ ಹಾಗೂ ತನಿಖೆ ಎಂಬ ನೆಪದಲ್ಲಿ ಯೋಜನೆಯ ಫಲಾನುಭವಿಗಳ ಸಂಖ್ಯೆಯನ್ನು ಕಡಿತಗೊಳಿಸಲು ಮುಂದಾಗಿದೆ. 1.48 ಲಕ್ಷ ಮೃತ ಫಲಾನುಭವಿಗಳ ಖಾತೆಗಳಿಗೆ ಹಣ ಜಮೆಯಾಗಿರುವುದನ್ನು ಕಾರಣವನ್ನಾಗಿ ಮಾಡಿಕೊಂಡು ನೈಜ ಫಲಾನುಭವಿಗಳನ್ನೇ ಯೋಜನೆಯಿಂದ ಹೊರಗಿಡುವ ಪ್ರಯತ್ನ ನಡೆಯುತ್ತಿದೆ ಎಂದು ಡಾ. ಹೇಮಾನಂದೀಶ್ ಆರೋಪಿಸಿದರು.

ಗೃಹಲಕ್ಷ್ಮೀ ಯೋಜನೆ ಕುರಿತು ನಿಕಟಪೂರ್ವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರಂಭದಲ್ಲಿ ಆಗಸ್ಟ್‌ವರೆಗೆ ಎಲ್ಲಾ ಕಂತುಗಳ ಪಾವತಿ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದ್ದರು. ಬಳಿಕ ಎರಡು ಕಂತುಗಳು ಬಾಕಿ ಇರುವುದನ್ನು ಒಪ್ಪಿಕೊಂಡಿದ್ದರು. ಈ ಬೆಳವಣಿಗೆ ಸರ್ಕಾರದ ಹೇಳಿಕೆಗಳಲ್ಲಿನ ವೈರುಧ್ಯವನ್ನು ಬಯಲಿಗೆಳೆದಿದೆ ಎಂದು ಅವರು ಟೀಕಿಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ಎಸ್‌ಐಆರ್ ಪ್ರಕ್ರಿಯೆ ಪ್ರಜಾಪ್ರಭುತ್ವಕ್ಕೆ ಸವಾಲು: ಲಕ್ಷಾಂತರ ಮತದಾರರ ಹಕ್ಕು ಕಸಿಯುವ ಹುನ್ನಾರ

1.26 ಕೋಟಿ ಮಹಿಳೆಯರಿಗೆ ತಿಂಗಳಿಗೆ 2,000 ರೂ. ನೀಡಬೇಕಾದರೆ ಎರಡು ತಿಂಗಳಿಗೆ ಸುಮಾರು 5,000 ಕೋಟಿ ರೂ. ವೆಚ್ಚವಾಗುತ್ತದೆ. ಈ ಹಣ ಎಲ್ಲಿಗೆ ಹೋಗಿದೆ ಎಂಬುದರ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಹಾಗೂ ಬಾಕಿ ಉಳಿದಿರುವ ಕಂತುಗಳನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...