ಉಡುಪಿ | ಜನಸಾಮಾನ್ಯರ ಆರೋಗ್ಯ ಕಾಪಾಡುತ್ತಿರುವ ಔಷಧ ತಜ್ಞರ ಸೇವೆ ಶ್ಲಾಘನೀಯ : ಪಿ.ವಿ ಭಂಡಾರಿ

Date:

ಜನಸಾಮಾನ್ಯರ ದೃಷ್ಟಿಯಲ್ಲಿ ವೈದ್ಯರಾಗಿ, ನಿರಂತರ ಸೇವೆ ಸಲ್ಲಿಸುತ್ತಾ ಜನರ ಅರೋಗ್ಯ ಹಾಗೂ ಸಮಾಜದ ಸ್ವಾಸ್ಥö್ಯ ಕಾಪಾಡುತ್ತಿರುವ ಔಷಧ ತಜ್ಞರ ಸೇವೆ ಶ್ಲಾಘನೀಯವಾದುದು ಎಂದು ಡಾ.ಎ.ವಿ ಬಾಳಿಗಾ ಆಸ್ಪತ್ರೆಯ ವೈದ್ಯಕೀಯ
ನಿರ್ದೇಶಕ ಡಾ. ಪಿ. ವಿ ಭಂಡಾರಿ ಹೇಳಿದರು.

- Advertisement -

ಅವರು ಇಂದು ನಗರದ ದೊಡ್ಡಣಗುಡ್ಡೆ ಡಾ.ಎ.ವಿ ಬಾಳಿಗಾ ಸ್ಮಾರಕ ಆಸ್ಪತ್ರೆಯ ಕಮಲ್ ಎ ಬಾಳಿಗಾ ಸಭಾಂಗಣದಲ್ಲಿ, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ, ಸಹಾಯಕ ಔಷಧ ನಿಯಂತ್ರಕರ ಕಚೇರಿ, ಉಡುಪಿ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘ (ರಿ) ಹಾಗೂ ಡಾ.ಎ.ವಿ ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಔಷಧ ತಜ್ಞರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಔಷಧಿ ತಜ್ಞರಿಗೆ ತಾಳ್ಮೆ, ಸಹನೆ, ಮಾನವೀಯ ಗುಣ ಹಾಗೂ ಸಹಕಾರ ಭಾವನೆ ಇರಬೇಕು. ವೈದ್ಯರು ನೀಡಿದ ಔಷಧಿ ಚೀಟಿಗಳನ್ನು ಸರಿಯಾಗಿ ಗಮನಿಸಿದ ಬಳಿಕ ಔಷಧಿಗಳನ್ನು ನೀಡಿ ಅವುಗಳನ್ನು ಕ್ಲಪ್ತ ಸಮಯದಲ್ಲಿ ತೆಗೆದುಕೊಳ್ಳುವ ಕುರಿತು ರೋಗಿಗಳಿಗೆ ಮಾಹಿತಿಯನ್ನು ನೀಡಬೇಕು ಎಂದ ಅವರು, ರೋಗಿಗಳ ಆರೋಗ್ಯ ಕಾಪಾಡುವಲ್ಲಿ ಹಾಗೂ ಆರೋಗ್ಯಕರ ಸಮುದಾಯ ನಿರ್ಮಾಣ ಮಾಡುವಲ್ಲಿ ಔಷಧಿ ತಜ್ಞರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದರು.

ಔಷಧಿ ತಜ್ಞರು ತಮಗೆ ನೀಡಿದ ಔಷಧಿಗಳನ್ನು ರೋಗಿಗಳು ವೈದ್ಯರ ಬಳಿ ತೋರಿಸಿದ ಮೇಲೆಯೇ ಅವುಗಳನ್ನು ತೆಗೆದುಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಆರೋಗ್ಯ ರಕ್ಷಣಾ ವ್ಯವಸ್ಥೆಯ ಮೇಲೆ ಹೆಚ್ಚಿನ ಒತ್ತಡವಿದ್ದು, ವೈದ್ಯರುಗಳು ಹಾಗೂ ಔಷಧಿ ಪೂರೈಕೆದಾರರು ಇದನ್ನು ಸಮರ್ಥವಾಗಿ ಎದುರಿಸಬೇಕು ಎಂದ ಅವರು, ಔಷಧಿ ಪೂರೈಕೆದಾರರು ತಮ್ಮಲ್ಲಿರುವ ಔಷಧಿಗಳ ಪೂರ್ವಾಪರಗಳ ಕುರಿತು ಹೆಚ್ಚಿನ ಮಾಹಿತಿಯನ್ನು ಹೊಂದಿರಬೇಕು ಎಂದರು.
ಇಂದಿನ ಆಧುನಿಕ ಜೀವನಶೈಲಿ ಹಾಗೂ ಆಹಾರ ಪದ್ಧತಿಗಳು ದೈನಂದಿನ ಚಟುವಟಿಕೆಗಳ ಮೇಲೆ ಹೆಚ್ಚಿನ ಪ್ರಭಾವ ಬೀರುತ್ತಿದ್ದು, ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳಬೇಕು. ದಿನನಿತ್ಯ ವ್ಯಾಯಾಮ, ಕ್ರೀಡೆಯಲ್ಲಿ ಪಾಲ್ಗೊಳ್ಳುವಿಕೆ ಸೇರಿದಂತೆ ಮತ್ತಿತರ ದೈಹಿಕ ಚಟುವಟಿಕೆಗಳನ್ನು ರೂಢಿಸಿಕೊಳ್ಳಬೇಕು. ದೇಹ ಸ್ವಸ್ಥವಾಗಿದ್ದಾಗ ಮನಸ್ಸೂ ಸ್ವಸ್ಥವಾಗಿದ್ದು, ಇದರಿಂದ ರೋಗ-ರುಜಿನ ಮುಕ್ತರಾಗಿ ಆರೋಗ್ಯಕರ ಜೀವನ ನಡೆಸಬಹುದು ಎಂದರು.

ಇದೇ ಸಂದರ್ಭದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ಔಷಧ ತಜ್ಞರಾದ ಬಿ ಗಣಪತಿ ಕಾಮತ್, ಪಿ.ರಮೇಶ್ ನಾಯಕ್, ಭೋಜರಾಜ ಶೆಟ್ಟಿ, ಮೋಹನ್ ಆಚಾರ್ಯ, ದಯಾನಂದ ಪ್ರಭು, ಟಿ.ಪ್ರೇಮಚಂದ್ರ ಪೈ, ದಿನಕರ ಪ್ರಭು, ಜಯಪ್ರಕಾಶ್ ಶೆಟ್ಟಿ ಹಾಗೂ ತ್ರಿವಿಕ್ರಮ್ ಶೆಣೈ ಅವರುಗಳನ್ನು ಸನ್ಮಾನಿಸಿ, ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ, ಸಹಾಯಕ ಔಷಧಿ ನಿಯಂತ್ರಕ ಶಂಕರ್ ನಾಯ್ಕ್, ಉಡುಪಿ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ರಮೇಶ್ ನಾಯಕ್, ಸಾಯಿರಾಧ ಗ್ರೂಫ್ ಆಫ್ ಕರ್ನ್ಸ್ನ್ನ ಮನೋಹರ್ ಶೆಟ್ಟಿ, ಸಂಘದ ಮಾಜಿ ಅಧ್ಯಕ್ಷ ವಿ.ಜಿ.ಶೆಟ್ಟಿ, ಔಷಧ ವ್ಯಾಪಾರಸ್ಥರು, ಬಾಳಿಗಾ ಆಸ್ಪತ್ರೆಯ ವೈದ್ಯಾಧಿಕಾರಿ, ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ರವೀಂದ್ರ ಶೆಟ್ಟಿ ಸ್ವಾಗತಿಸಿ, ಸತೀಶ್ ಚಂದ್ರ ನಾಯಕ್ ನಿರೂಪಿಸಿ, ಸಂಘದ ಕಾರ್ಯದರ್ಶಿ ಸುಬ್ರಹ್ಮಣ್ಯ ರಾವ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...