ಉಡುಪಿ | ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಅಗತ್ಯ ಕ್ರಮ ವಹಿಸಿ : ಡಾ. ತಿಪ್ಪೇಸ್ವಾಮಿ

Date:

ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯನ್ನು ಗಂಭೀರವಾಗಿ ಪರಿಗಣಿಸಿ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಟಾಸ್ಕ್ ಫೋರ್ಸ್ ಸಮಿತಿ ಸಭೆಗಳನ್ನು ನಡೆಸಬೇಕು. ಸಭೆಗಳ ವರದಿಯನ್ನು ಒಂದು ವಾರದೊಳಗೆ ಸಂಬಂಧಪಟ್ಟ ಇಲಾಖೆಗಳಿಗೆ ನೀಡಬೇಕು. ತಿಂಗಳಲ್ಲಿ ಒಂದು ದಿನ ಮಕ್ಕಳಿಗಾಗಿ ಮೀಸಲಿಡಬೇಕು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ತೆಗೆದುಕೊಂಡ ಕ್ರಮಗಳನ್ನು ನಿಯಮಿತವಾಗಿ ಆಯೋಗಕ್ಕೆ ಸಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಹೇಳಿದರು.

- Advertisement -

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಮಕ್ಕಳು ಮತ್ತು ಹದಿಹರೆಯದವರ ಕಾರ್ಮಿಕ ಪದ್ಧತಿ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಜಿಲ್ಲೆಯಲ್ಲಿ 2025 ಏಪ್ರಿಲ್ ವರೆಗೆ ಒಟ್ಟು 660 ಕಡೆಗಳಲ್ಲಿ ತಪಾಸಣೆ ನಡೆಸಿ 1 ಬಾಲ ಕಾರ್ಮಿಕ 3 ಕಿಶೋರ ಕಾರ್ಮಿಕ ಒಟ್ಟು 4 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. ನ್ಯಾಯಾಲಯದಲ್ಲಿ ಒಟ್ಟು 5 ಮೊಕದ್ದಮೆಗಳನ್ನು ಹೂಡಲಾಗಿದೆ. 3 ಪ್ರಕರಣಗಳಲ್ಲಿ ದಂಡ ವಿಧಿಸಿ 32,000 ರೂ ಮೊತ್ತದ ದಂಡ ಮತ್ತು 20,000 ಕಾರ್ಪಸ್ ನಿಧಿ ವಸೂಲು ಮಾಡಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಒಟ್ಟು 9 ಪ್ರಕರಣಗಳಲ್ಲಿ ಶಿಕ್ಷೆ ಆಗಿದೆ ಎಂದರು.

ಬಾಲ ಹಾಗೂ ಕಿಶೋರ ಕಾರ್ಮಿಕರ ನಿಷೇಧ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಮಕ್ಕಳು ಬಾಲ ಕಾರ್ಮಿಕರಾಗುವುದನ್ನು ತಪ್ಪಿಸಬೇಕು. ಇದಕ್ಕಾಗಿ ತಪಾಸಣೆಗಳನ್ನು ಹೆಚ್ಚಿಸಬೇಕು. ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಿ ಸರಿಯಾದ ದತ್ತಾಂಶಗಳನ್ನು ಸಂಗ್ರಹಿಸಬೇಕು. ಕಾಯ್ದೆ ಅನುಷ್ಠಾನದಲ್ಲಿ ಸಮಸ್ಯೆಗಳಿದ್ದರೆ ಅದನ್ನು ಜಿಲ್ಲಾಡಳಿತದ ಗಮನಕ್ಕೆ ತಂದ ಲ್ಲಿ ಸಮಸ್ಯೆ ಬಗೆಹರಿಸಲಾಗುವುದು ಎಂದರು.

ಅಧಿಕಾರಿಗಳು ಕೇವಲ ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡುವುದನ್ನು ಗುರಿಯಾಗಿಸದೆ ಬಾಲ ಕಾರ್ಮಿಕರ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿ ಆ ಕುಟುಂಬದ ಸಮಗ್ರ ಪುನರ್ವಸತಿಗೆ ಆದ್ಯತೆ ನೀಡಿ ಅವರ ಸಬಲೀಕರಣಕ್ಕೆ ಒತ್ತು ನೀಡಬೇಕು. ಸದೃಢ ಕುಟುಂಬದಲ್ಲಿ ಮಕ್ಕಳ ರಕ್ಷಣೆ ಮತ್ತು ಪೋಷಣೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಂಡು ಎಲ್ಲ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಉಡುಪಿ ಜಿಲ್ಲೆಯು ಇತರರಿಗೆ ಮಾದರಿಯಾಗಬೇಕು ಎಂದರು.

WhatsApp Image 2025 12 23 at 9.59.02 PM

ರಕ್ಷಿಸಲಾದ ಬಾಲ ಹಾಗೂ ಕಿಶೋರ ಕಾರ್ಮಿಕ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸಬೇಕು. ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಅಧಿಕಾರಿಗಳ ಮೇಲಿದ್ದು ಮಕ್ಕಳ ನಾಪತ್ತೆ ಪ್ರಕರಣಗಳನ್ನು ಶಿಕ್ಷಣ ಮತ್ತು ಕಾರ್ಮಿಕ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಮಕ್ಕಳಿಗೆ ನ್ಯಾಯ ಒದಗಿಸಬೇಕು ಎಂದರು.

ಜಿಲ್ಲೆಯ 155 ಗ್ರಾಮ ಪಂಚಾಯಿತಿಗಳಲ್ಲಿ ಬಾಲ ಕಾರ್ಮಿಕ ಪದ್ಧತಿ ಮುಕ್ತ ಗ್ರಾಮಗಳನ್ನು ಗುರುತಿಸಿ ಅಂತಹ ಗ್ರಾಮಗಳಿಗೆ ಪ್ರಮಾಣ ಪತ್ರ ನೀಡಬೇಕು. ಶಾಲೆ-ಕಾಲೇಜುಗಳಲ್ಲಿ ಚರ್ಚಾ ಕೂಟ, ಸ್ಪರ್ಧೆಗಳನ್ನು ಏರ್ಪಡಿಸಿ ಜಾಗೃತಿ ಮೂಡಿಸಬೇಕು. ಮನೋರಂಜನಾ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ಮಕ್ಕಳ ಮಾಹಿತಿ ಕಲೆ ಹಾಕಿ ಮಕ್ಕಳು ಕಾನೂನು ರೀತ್ಯಾ ನಟಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಕೆಲಸ ಮಾಡುತ್ತಿರುವ ವಲಸೆ ಕಾರ್ಮಿಕರ ಮಕ್ಕಳಿಗೆ ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಮಕ್ಕಳ ಹಕ್ಕುಗಳ ಮಾಸಾಚರಣೆ ಅಭಿಯಾನಗಳನ್ನು ಕೈಗೊಳ್ಳಬೇಕು. ವಿವಿಧ ಇಲಾಖೆಗಳ ಜೊತೆ ಸೇರಿ ಬಾಲ ಕಾರ್ಮಿಕ ನಿಷೇಧ ಕಾಯ್ದೆ ಕುರಿತು ಅರಿವು ಕಾರ್ಯಕ್ರಮಗಳನ್ನು
ನಡೆಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ಪ್ರದರ್ಶನ ಮಾಡಬೇಕು ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ನಿರ್ದೇಶಕಿ ಅಮೃತ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ತಾಲೂಕು ಮಟ್ಟದ ಕಾರ್ಮಿಕ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿರಂತರತೆಯೇ ರಂಗಭೂಮಿಯ ನಿಜವಾದ ಶಕ್ತಿ: ಕೋಟಿಗಾನಹಳ್ಳಿ ರಾಮಯ್ಯ

ರಂಗಭೂಮಿ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಲು ಇಚ್ಛಾಶಕ್ತಿ, ಬದ್ಧತೆ ಹಾಗೂ ಸಾಂಸ್ಕೃತಿಕ ಹೊಣೆಗಾರಿಕೆ...

ಉಡುಪಿ | ಸೌಹಾರ್ದ ಸಮಾಜ ಕಟ್ಟುವ ಹೊಣೆ ಮುಸ್ಲಿಮ್ ಒಕ್ಕೂಟ ವಹಿಸಲಿ: ಯು.ಟಿ.ಖಾದರ್

ಸಾಮರಸ್ಯದ ಬದುಕು ಮತ್ತು ಒಗ್ಗಟ್ಟಿನ ಸಮಾಜವೇ ನಮ್ಮ ದೊಡ್ಡ ಶಕ್ತಿ ಹಾಗೂ...

ಹಾಸನ | ಗೊರೂರು ಪಂಕಜ: ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026ಕ್ಕೆ ಹಾಸನದ...

ಜಮಖಂಡಿ | ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ: 4 ಸಾವಿರ ಅರ್ಜಿಗಳ ಪೈಕಿ 3 ಸಾವಿರಕ್ಕೂ ಹೆಚ್ಚು ವಿಲೇವಾರಿ

ಸರ್ಕಾರದ ವಿವಿಧ ಸೇವೆ ಹಾಗೂ ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡುವ ಬದಲು...