ಮಡಿಕೇರಿ | ಮೂರು ದಿನಗಳ ಮಾವು-ಹಲಸು ಮೇಳಕ್ಕೆ ಶಾಸಕ ಪೊನ್ನಣ್ಣ ಚಾಲನೆ

Date:

  • ಪುತ್ತೂರಿನ ತೋಟಗಾರಿಕಾ ಇಲಾಖೆಯಿಂದ ಮಾವಿನ ಸಸಿಗಳ ಮಾರಾಟ
  • ಮೇಳದಲ್ಲಿ ಗಮನ ಸೆಳೆದ ಹಲಸು, ಬಾಳೆ ಹಣ್ಣಿನ ತಿಂಡಿ ತಿನಿಸುಗಳು

ಮಾವು ಮತ್ತು ಹಲಸು ಬೆಳಯುವಂತೆ ರೈತರನ್ನು ರೈತರನ್ನು ಪ್ರೋತ್ಸಾಹಿಸಲು ಮತ್ತು ಉತ್ತೇಜಿಸಲು ಇಂತಹ ಮೇಳಗಳು ಸಹಕಾರಿಯಾಗಿವೆ. ಜಿಲ್ಲಾಡಳಿತ ಉತ್ತಮ ಕೆಲಸ ಕೈಗೊಂಡಿದೆ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಮೆಚ್ಚುಗೆ ವ್ಯಕ್ತಪಡಿಸಿದರು.

- Advertisement -

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ತೋಟಗಾರಿಕೆ ಇಲಾಖೆ ಹಾಗೂ ಕೊಡಗು ಜಿಲ್ಲಾ ಹಾಪ್‍ಕಾಮ್ಸ್ ವತಿಯಿಂದ ನಗರದ ಕೊಡಗು ಜಿಲ್ಲಾ ಹಾಪ್‍ಕಾಮ್ಸ್ ಆವರಣದಲ್ಲಿ ಮೇ 28ರ ವರೆಗೆ ಏರ್ಪಡಿಸಿರುವ ‘ಮಾವು ಮತ್ತು ಹಲಸು ಮೇಳ’ಕ್ಕೆ ಚಾಲನೆ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಮಾವು ಮತ್ತು ಹಲಸು ಮೇಳದಿಂದ ರೈತರು ನೇರವಾಗಿ ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲು ಅನುಕೂಲವಾಗಿದೆ. ಜೊತೆಗೆ ಗ್ರಾಹಕರಿಗೂ ಸಹಕಾರಿಯಾಗಲಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ. ಬಿ ಸಿ ಸತೀಶ ಮಾತನಾಡಿ, “ಮಾವು ಮತ್ತು ಹಲಸು ಮೇಳದಲ್ಲಿ 25ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗಿದೆ. ರಾಮನಗರ ಜಿಲ್ಲೆಯಿಂದ ಹೆಚ್ಚಿನ ಮಾವು ಬೆಳೆಗಾರರು ಆಗಮಿಸಿದ್ದಾರೆ. ರುಚಿಯಾದ ಮಾವು ಮತ್ತು ಹಲಸಿನ ಹಣ್ಣನ್ನು ಗ್ರಾಹಕರು ಸವಿಯುವಂತಾಗಬೇಕು. ಮೇಳದಿಂದ ರೈತರು ಮತ್ತು ಗ್ರಾಹಕರಿಗೆ ಅನುಕೂಲವಾಗಿದೆ” ಎಂದರು.

ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಎಚ್ ಆರ್ ನಾಯಕ್, ಹಿರಿಯ ಸಹಾಯಕ ನಿರ್ದೇಶಕ ಸಿ ಎಂ ಪ್ರಮೋದ್ ಅವರು ಹಲವು ರೀತಿಯ ಮಾವು ಮತ್ತು ಹಲಸು ಬಗ್ಗೆ ಮಾಹಿತಿ ನೀಡಿದರು.

ಮಾವು ಮತ್ತು ಹಲಸು ಮೇಳದಲ್ಲಿ ಬಾದಾಮಿ, ರಸಪುರಿ, ಸಿಂಧೂರ, ತೋತಾಪುರಿ, ದಾಶೇರಿ, ನೀಲಂ, ರುಮಾನಿ, ಅಮ್ರಪಾಲಿ, ಕೊಡಗಿನ ಕಾಡು ಮಾವು, ಮಲ್ಗೋವ, ಮಲ್ಲಿಕಾ, ಬಂಗಿನಪಲ್ಲಿ, ಸಕ್ಕರೆ ಗುತ್ತಿ, ಕಲ್ಕತ್ತಾ ಗೋಲ್ಡ್, ಕೇಸರ್, ವಾಲಜ, ಇಮಾಮ್ ಪಸಂದ್, ಮುಂದ, ಕಾಲಪಾಡಿ, ಹೀಗೆ ಹದಿನೈದಕ್ಕೂ ಹೆಚ್ಚು ರೀತಿಯ ಮಾವಿನ ಹಣ್ಣುಗಳು ಮಾವು ಮೇಳದಲ್ಲಿ ಕಂಡು ಬಂದವು.

ಪಿಂಗಾರ ತೋಟಗಾರಿಕಾ ಫಾಮ್ರ್ಸ್ ಪ್ರೊಡ್ಯೂಷನ್ ವತಿಯಿಂದ ಹಲಸಿನಕಾಯಿ ಹಪ್ಪಳ, ಚಿಪ್ಸ್, ಹಲ್ವ, ಸುಕೇಲಿ, ಹಲಸಿನಕಾಯಿ ಬೀಜದ ಬಿಸ್ಕೇಟ್, ಬಾಳೆಹಣ್ಣಿನ ಹಪ್ಪಳ, ಬಾಳೆ ಕಾಯಿ ಹಪ್ಪಳ, ಪಲ್ಫ್ ಮತ್ತಿತರ ಹಲಸು ಮತ್ತು ಬಾಳೆ ಹಣ್ಣಿನ ತಿಂಡಿ ತಿನಿಸುಗಳು ಮೇಳದಲ್ಲಿಇತ್ತು.

ಈ ಸುದ್ದಿ ಓದಿದ್ದೀರಾ? ಎಂಟು ಜಿಲ್ಲೆಗಳಿಗೆ ಸಿಗದ ಸಚಿವ ಸ್ಥಾನದ ಪ್ರಾತಿನಿಧ್ಯ

ಪುತ್ತೂರಿನ ತೋಟಗಾರಿಕಾ ಇಲಾಖೆ ವತಿಯಿಂದ ಹಲವು ಮಾವಿನ ತಳಿಗಳಾದ ಮಲ್ಲಿಕಾ, ಕೇಸರ್, ಕಾಳಪಾಡಿ, ಮತ್ತಿತರ ಮಾವಿನ ಸಸಿಗಳನ್ನು ಮಾರಾಟ ಮಾಡಲಾಗುತ್ತಿದೆ. ರೈತರಿಗೆ ಸಾವಯವ ಕೃಷಿ ದೃಢೀಕರಣ ನೀಡುವ ಸಂಸ್ಥೆ ವತಿಯಿಂದ ಬೆಲ್ಲದ ಪುಡಿ ಹಾಗೂ ಅಚ್ಚು ಬೆಲ್ಲವನ್ನು ಮಾರಾಟ ಮಾಡಲಾಗುತ್ತಿದೆ.

ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಮಡಿಕೇರಿ ನಗರಸಭಾಧ್ಯಕ್ಷೆ ಅನಿತಾ ಪೂವಯ್ಯ, ಹಾಪ್ ಕಾಮ್ಸ್ ಅಧ್ಯಕ್ಷರಾ ಬಿದ್ದಾಟಂಡ ರಮೇಶ್ ಚಂಗಪ್ಪ, ಹಾಪ್‍ಕಾಮ್ಸ್ ಉಪಾಧ್ಯಕ್ಷ ಮಲ್ಲಂಡ ಮಧುದೇವಯ್ಯ, ನಿರ್ದೇಶಕ ನಾಗೇಶ್ ಕುಂದಲ್ಪಾಡಿ, ಎಸ್ ಪಿ ಪೊನ್ನಪ್ಪ, ಬೇಬಿ ಪೂವಯ್ಯ, ಲೀಲಾ ಮೇದಪ್ಪ, ಕೊನೇರಿರ ಎಂ ಮನೋಹರ್, ಸುವಿನ್ ಗಣಪತಿ, ಮಹೇಶ್, ಕಾಂಗೀರ ಸತೀಶ್ ಹಾಗೂ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಮಾಜಿ ತಾ.ಪಂ ಸದಸ್ಯನ ಮೇಲೆ ಹಲ್ಲೆ ಆರೋಪ; ಆರು ಮಂದಿ ವಿರುದ್ಧ ಪ್ರಕರಣ ದಾಖಲು

ಸಾಲದ ಬಡ್ಡಿ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಶಹಾಪುರ ತಾಲ್ಲೂಕು ಪಂಚಾಯಿತಿ ಮಾಜಿ...

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...