ಬಸ್ ಚಾಲನೆ ವೇಳೆ ಚಾಲಕನಿಗೆ ಪಿಡ್ಸ್ ; ಸರಣಿ ಅಪಘಾತ

Date:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (ಕೆಎಸ್ಆರ್‌ಟಿಸಿ) ಬಸ್ ಚಾಲನೆ ವೇಳೆ, ಚಾಲಕನಿಗೆ ಪಿಡ್ಸ್ ಬಂದ ಪರಿಣಾಮ ಸರಣಿ ಅಪಘಾತ ಸಂಭವಿಸಿದ ಘಟನೆ ಬೆಂಗಳೂರು ಸಮೀಪದ ಮಡಕಶಿರದ ಮಾರುತಿನಗರದ ಬಳಿ ನಡೆದಿದೆ.

- Advertisement -

ನೆಲಮಂಗಲ ಡಿಪೋದ ಚಿತ್ರದುರ್ಗ ವಿಭಾಗಕ್ಕೆ ಸೇರಿದ KA-57F4409 ನಂಬರ್ ಕೆಎಸ್ಆರ್‌ಟಿಸಿ ಬಸ್ ಪಾವಗಡದಿಂದ ಬೆಂಗಳೂರಿಗೆ ಡಿಸೆಂಬರ್ 25ರಂದು ತೆರಳುತ್ತಿತ್ತು. ಈ ವೇಳೆ, ಮಧ್ಯಾಹ್ನ 3ಗಂಟೆ ಸುಮಾರಿಗೆ ಚಾಲಕ ಪಿಡ್ಸ್‌ನಿಂದ ಬಳಲು ಪ್ರಾರಂಭಿಸಿದ್ದಾರೆ. ಹೀಗಾಗಿ, ರಸ್ತೆಯ ಪಕ್ಕ ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಬಸ್ ಒಂದು ಗೂಡ್ಸ್ ಆಟೋ ಮತ್ತು ಬೈಕ್‌ಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ...

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ ಸಂಚು ನಡೆದಿದೆ. ಕೇಂದ್ರ ಸರ್ಕಾರ (ಮೋದಿ-ಶಾ ಜೋಡಿ) ಮತ್ತು ಚುನಾವಣಾ ಆಯೋಗ (ಗ್ಯಾನೇಶ್‌ ಕುಮಾರ್‌) ಜಂಟಿಯಾಗಿ ಎಸ್‌ಐಆರ್‌ ಹೆಸರಿನಲ್ಲಿ ಅರ್ಹ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು...

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ ಮಹಿಳಾ ಕ್ರೀಡಾಪಟುಗಳ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ. ಬಡತನ, ಗಾಯದ ನೋವು ಹಾಗೂ ಸಮಾಜದ ಕಟ್ಟುಪಾಡುಗಳನ್ನು ಮೆಟ್ಟಿ ನಿಂತು 14 ಚಿನ್ನದ...

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಈ ಬಸ್‌ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಯಾರಿಗೂ ಕೂಡ ಪ್ರಾಣಹಾನಿ ಸಂಭವಿಸಿಲ್ಲ. ಆದರೆ, ಬಸ್ ಡಿಕ್ಕಿ ಹೊಡೆದ ರೈತ ನಾರಾಯಣ ಅವರ ತಲೆಗೆ ತೀವೃ ಗಾಯವಾಗಿದೆ. ಅವರು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೈತ ನಾರಾಯಣ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ರೈತನನ್ನ ಕಾಣಲು ಕೆಎಸ್ಆರ್‌ಟಿಸಿಯ ಯಾವುದೇ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿಲ್ಲ. ರೈತನಿಗೆ ನಿಗಮದ ಕಡೆಯಿಂದ ಯಾವುದೇ ರೀತಿಯ ಸಹಾಯ ಕೂಡ ಆಗಿಲ್ಲ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಅಣ್ಣಾಮಲೈ ಚಾಟಿ ಏಟು ಪ್ರಕರಣ | ಸ್ತ್ರೀ ಕುಲದ ರಕ್ಷಣೆಗಾಗಿ ವಿನೂತನ ಪ್ರತಿಭಟನೆ: ಬಿ ವೈ ವಿಜಯೇಂದ್ರ

ಈ ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಈ ಘಟನೆ ಕುರಿತಂತೆ ಮಡಕಶಿರ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪೊಲೀಸರು ಬಸ್ ಅನ್ನು ವಶಕ್ಕೆ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ಕೇಂದ್ರಕ್ಕೆ ಪ್ರಸ್ತಾವನೆ: ಮಧು ಬಂಗಾರಪ್ಪ

ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ...

ಶಿವಮೊಗ್ಗ | ಗನ್, ಡ್ರ್ಯಾಗರ್ ಹಿಡಿದು ರೀಲ್ಸ್‌! ಯುವಕನ ವಿರುದ್ಧ ಸುವೋ ಮೊಟೋ ಕೇಸ್‌

ಯುವಕನೊಬ್ಬ ಗನ್ ಮತ್ತು ಡ್ರ್ಯಾಗರ್ ಹಿಡಿದುಕೊಂಡು ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಪೋಸ್ಟ್ ಮಾಡಿ...

ಶಿವಮೊಗ್ಗ | ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆ ಆತ್ಮಹತ್ಯೆಗೆ ಶರಣು

ಧೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಶಿವಮೊಗ್ಗ...

ಜಮಖಂಡಿಯಲ್ಲಿ ಅ.4ರಂದು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ನಾಡು–ನುಡಿ, ಸಾಹಿತ್ಯ ಹಾಗೂ ಸಂಸ್ಕೃತಿಯ ಸೊಗಡನ್ನು ಪಸರಿಸುವ ಉದ್ದೇಶದಿಂದ ಜಮಖಂಡಿ...