ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥರಾಗಿದ್ದ ಮಂಡ್ಯ ಜಿಲ್ಲೆಯ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಜಗದೀಶ್ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಮೈಸೂರಿಗೆ ಸಾಗುಸುತ್ತಿದ್ದಾಗ ಜೆಡಿಎಸ್ ನಾಯಕ, ಮಾಜಿ ಶಾಸಕ ಸುರೇಶ್ ಗೌಡ ಮಾರ್ಗ ಮಧ್ಯೆ ಆ್ಯಂಬುಲೆನ್ಸ್ ತಡೆದಿದ್ದರೆಂದು ಕಾಂಗ್ರೆಸ್ ಆರೋಪಿಸಿತ್ತು. ಆದರೆ, ಜೆಡಿಎಸ್ ನಾಯಕರು ಅದನ್ನು ತಿರಸ್ಕರಿಸಿದ್ದರು. ಮಾತ್ರವಲ್ಲದೆ, ಆ್ಯಂಬುಲೆನ್ಸ್ ತಡೆದಿದ್ದು ಸಾಬೀತಾದರೆ ತಾವು ರಾಜಕೀಯದಿಂದ ನಿವೃತ್ತಿ ಘೋಷಿಸುವುದಾಗಿ ಸವಾಲು ಹಾಕಿದ್ದರು.
ಜಗದೀಶ್ ಆತ್ಮಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ತಿರುವು ಸಿಕ್ಕಿದ್ದು, ಆರೋಪಕ್ಕೆ ಪೂರಕವಾಗಿ ಸಿಸಿಟಿವಿ ವಿಡಿಯೋಗಳು, ಮೊಬೈನಲ್ಲಿ ಚಿತ್ರೀಕರಿಸಿರುವ ವಿಡಿಯೋಗಳನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.
ಈ ಸುದ್ದಿ ಓದಿದ್ದೀರಾ? ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣ: ಬಿಜೆಪಿ ಕಾರ್ಪೊರೇಟರ್ ಸಹೋದರನ ಬಂಧನ
ಅಸ್ವಸ್ಥರಾಗಿದ್ದ ಜಗದೀಶ್ ಅವರನ್ನು ಮಧ್ಯರಾತ್ರಿ ನಾಗಮಂಗಲದ ಮೂಲಕ ಆ್ಯಂಬುಲೆನ್ಸ್‌ನಲ್ಲಿ ಸಾಗಿಸುವಾಗ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡ 108 ವಾಹನವನ್ನು ನಿಲ್ಲಿಸಿದ್ದಾರೆಂಬುದಕ್ಕೆ ಸಿಸಿಟಿವಿ ಫೂಟೇಜ್‌ಗಳು ದೊರಕಿರುವುದಾಗಿ ಕಾಂಗ್ರೆಸ್ ಆರೋಪಿಸಿದ್ದು, ಸುರೇಶ್ ಗೌಡ ಹಾಗೂ ಜೆಡಿಎಸ್ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.