ಬಸ್ ಚಾಲಕ ಜಗದೀಶ್ ಪ್ರಕರಣ | ಮಾರ್ಗ ಮಧ್ಯೆ ಆ್ಯಂಬುಲೆನ್ಸ್ ತಡೆದ ಜೆಡಿಎಸ್ ಮುಖಂಡರು; ಸಾಕ್ಷಿ ಬಿಡುಗಡೆಗೊಳಿಸಿದ ಕಾಂಗ್ರೆಸ್

Date:

ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥರಾಗಿದ್ದ ಮಂಡ್ಯ ಜಿಲ್ಲೆಯ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಜಗದೀಶ್ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಮೈಸೂರಿಗೆ ಸಾಗುಸುತ್ತಿದ್ದಾಗ ಜೆಡಿಎಸ್ ನಾಯಕ, ಮಾಜಿ ಶಾಸಕ ಸುರೇಶ್ ಗೌಡ ಮಾರ್ಗ ಮಧ್ಯೆ ಆ್ಯಂಬುಲೆನ್ಸ್ ತಡೆದಿದ್ದರೆಂದು ಕಾಂಗ್ರೆಸ್ ಆರೋಪಿಸಿತ್ತು. ಆದರೆ, ಜೆಡಿಎಸ್ ನಾಯಕರು ಅದನ್ನು ತಿರಸ್ಕರಿಸಿದ್ದರು. ಮಾತ್ರವಲ್ಲದೆ, ಆ್ಯಂಬುಲೆನ್ಸ್ ತಡೆದಿದ್ದು ಸಾಬೀತಾದರೆ ತಾವು ರಾಜಕೀಯದಿಂದ ನಿವೃತ್ತಿ ಘೋಷಿಸುವುದಾಗಿ ಸವಾಲು ಹಾಕಿದ್ದರು.

ಜಗದೀಶ್‌ ಆತ್ಮಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ತಿರುವು ಸಿಕ್ಕಿದ್ದು, ಆರೋಪಕ್ಕೆ ಪೂರಕವಾಗಿ ಸಿಸಿಟಿವಿ ವಿಡಿಯೋಗಳು, ಮೊಬೈನಲ್ಲಿ ಚಿತ್ರೀಕರಿಸಿರುವ ವಿಡಿಯೋಗಳನ್ನು ಕಾಂಗ್ರೆಸ್‌ ಬಿಡುಗಡೆ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣ: ಬಿಜೆಪಿ ಕಾರ್ಪೊರೇಟರ್ ಸಹೋದರನ ಬಂಧನ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಸ್ವಸ್ಥರಾಗಿದ್ದ ಜಗದೀಶ್‌ ಅವರನ್ನು ಮಧ್ಯರಾತ್ರಿ ನಾಗಮಂಗಲದ ಮೂಲಕ ಆ್ಯಂಬುಲೆನ್ಸ್‌ನಲ್ಲಿ ಸಾಗಿಸುವಾಗ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡ 108 ವಾಹನವನ್ನು ನಿಲ್ಲಿಸಿದ್ದಾರೆಂಬುದಕ್ಕೆ ಸಿಸಿಟಿವಿ ಫೂಟೇಜ್‌ಗಳು ದೊರಕಿರುವುದಾಗಿ ಕಾಂಗ್ರೆಸ್‌ ಆರೋಪಿಸಿದ್ದು, ಸುರೇಶ್ ಗೌಡ ಹಾಗೂ ಜೆಡಿಎಸ್ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೈಂದೂರು | ಸಮಾಜದ ಎಲ್ಲ ವರ್ಗದವರ ಹಿತ ಕಾಯಲು ಬದ್ಧ: ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್

ಲೋಕಸಭಾ ಚುನಾವಣೆಯಲ್ಲಿ ಬೈಂದೂರು ಮತದಾರರು ನನ್ನ ಕೈ ಬಲಪಡಿಸಿದರೆ, ಸಮಾಜದ ಎಲ್ಲ...

ಚಿಕ್ಕಬಳ್ಳಾಪುರ | ₹400 ಕೋಟಿ ನಕಲಿ ನೋಟು ಹಂಚಿಕೆಗೆ ಸಕಲ ತಯಾರಿ: ಪಕ್ಷೇತರ ಅಭ್ಯರ್ಥಿ ಆರೋಪ 

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಮತದಾರರಿಗೆ ಹಣ ಹಂಚಲು ಜನವರಿ...

ಚಿಕ್ಕಮಗಳೂರು | ಮಾಜಿ ಸಚಿವ ಮಾಧುಸ್ವಾಮಿ ಕಾರು ಅಪಘಾತ

ಮಾಜಿ ಸಚಿವ ಮಾಧುಸ್ವಾಮಿ ಅವರು ತೆರಳುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಚಿಕ್ಕಮಗಳೂರು...

ವಿಶೇಷ ಜಾತ್ರೆ | ತಲೆ ಮೇಲೆ ತೆಂಗಿನಕಾಯಿ ಒಡೆದುಕೊಂಡು ಮಳೆಗಾಗಿ ಪ್ರಾರ್ಥನೆ ಮಾಡಿದ ಖಾಜಿಸೊನ್ನೇನಹಳ್ಳಿ ಗ್ರಾಮಸ್ಥರು

ಅಕಾಲಿಕ ಮಳೆಯಿಂದ ರಾಜ್ಯದಲ್ಲಿ ಬಿರು ಬೇಸಿಗೆ ವಾತಾವರಣ ಸೃಷ್ಟಿಯಾಗಿದೆ. ದಿನದಿಂದ ದಿನಕ್ಕೆ...