ಸಿದ್ದರಾಮಯ್ಯಗೆ ಆತ್ಮಸಾಕ್ಷಿ ಇದ್ದರೆ ಸಂಪುಟದಿಂದ ಡಿ.ಸುಧಾಕರ್‌ರನ್ನು ವಜಾ ಮಾಡಲಿ: ಕುಮಾರಸ್ವಾಮಿ

Date:

  • ‘ದಲಿತರ ಪರವಾಗಿ ಉದ್ದುದ್ದ ಬಾಷಣ ಮಾಡಿದವರು ಎಲ್ಲಿದ್ದಾರೆ?’
  • ‘ಸಿದ್ದರಾಮಯ್ಯನವರೆ, ನಿಮಗೆ ಮಾನ ಮರ್ಯಾದೆ ಇದೆಯಾ?’

ದಲಿತರ ರಕ್ಷಣೆ ಮಾಡುತ್ತೇವೆ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಈ ಸರ್ಕಾರದಲ್ಲಿ ಏನಾಗುತ್ತಿದೆ? ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಅವರಿಂದ ದಲಿತರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಇಂತಹ ವ್ಯಕ್ತಿಯನ್ನು ಸಂಪುಟದಲ್ಲಿ ಇರಿಸಿಕೊಳ್ಳಬಾರದು ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ದಲಿತರಿಗೆ ಧಮ್ಕಿ ಹಾಕಿ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಡಿ ಸುಧಾಕರ್ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕು.‌ ಹಾಗೂ ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು” ಎಂದು ಒತ್ತಾಯಿಸಿದರು.

ಈ ಭೂಮಿ ಪ್ರಕರಣ ಮುಗಿದೇ ಹೋಗಿತ್ತು. ಈಗ ಕಾನೂನುಬದ್ದವಾಗಿ ಜೀವ ಕೊಟ್ಟಿದ್ದಾರೆ. ಎಲ್ಲದಕ್ಕೂ ತನಿಖೆ ಅಂತ ಹೇಳ್ತೀರಲ್ಲಾ, ಇದಕ್ಕೆ ಯಾವ ತನಿಖೆ ಮಾಡುತ್ತೀರಾ? ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮೇಲೆ ಕಾಗದದ ಚೂರು ಎಸೆದರು ಎಂದು ನೀವೆಲ್ಲಾ ಉದ್ದುದ್ದ ಬಾಷಣ ಮಾಡಿದ್ದಿರಲ್ಲ. ಇವತ್ತು ಆ ದಲಿತ ಸಮುದಾಯದ ಹೆಣ್ಣು ಮಗಳ ಮೇಲೆ ಮಚ್ವು ಕೊಡಲಿ ಹಿಡಿದು ಬೆದರಿಸಲು ಹೊರಟಿದ್ದೀರಲ್ಲಾ? ಜನ ಇದಕ್ಕೇನಾ ನಿಮಗೆ ಮತ ಹಾಕಿದ್ದು” ಎಂದು ವಾಗ್ದಾಳಿ ನಡೆಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಇನ್ಮುಂದೆ ಭಾಗಿಯಾಗಲ್ಲ: ಯತ್ನಾಳ ಸ್ಪಷ್ಟನೆ

“ಸಿದ್ದರಾಮಯ್ಯನವರೆ, ನೀವು ಬೇರೆ ಪಕ್ಷದವರಿಗೆ ಮಾನ ಮರ್ಯಾದೆ ಇದೆಯಾ ಅಂತ ಕೇಳ್ತೀರಲ್ಲ, ಈಗ ನಿಮಗೆ ಏನಿದೆ ಅಂತ ನಾನು ಕೇಳಲು ಬಯಸುತ್ತೇನೆ. ಎಫ್ ಐ ಆರ್ ದಾಖಲಿಸಿದ ಪೊಲೀಸ್ ಅಧಿಕಾರಿಗಳ ಮೇಲೆಯೆ ಒತ್ತಡ ಹೇರುವ ಕೆಲಸ ಮಾಡುತ್ತಿದ್ದೀರಿ. ನಿಮಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ?” ಎಂದು ಕುಟುಕಿದರು.

“ಅಧಿಕಾರಿಗಳನ್ನು ಬಹಳ ಕೀಳಾಗಿ ನಡೆಸಿಕೊಳ್ಳುತ್ತಿದ್ದೀರಿ. ಎಫ್ ಐ ಆರ್ ದಾಖಲಿಸಿದ ಅಧಿಕಾರಿಯನ್ನು ದಾಖಲೆಗಳನ್ನು ತೆಗೆದುಕೊಂಡು ಮನೆಗೆ ಬಾ ಅಂತ ಬೆದರಿಕೆ ಹಾಕುತ್ತೀರಿ. ಇದಾ ದಲಿತರ ರಕ್ಷಣೆ? ಎಂದು ಸಿದ್ದರಾಮಯ್ಯ ಅವರ ಮೇಲೆ ಕುಮಾರಸ್ವಾಮಿ ಹರಿಹಾಯ್ದರು.

“ನಾವು ಟೀಕಿಸಿದರೆ ಅಸೂಯೆ ಅಂತೀರಾ. ಇಂತಹ ಕೆಲಸ ಮಾಡಿದರೆ ನಾವು ನೋಡಿಕೊಂಡು ಸುಮ್ಮನೆ ಇರಬೇಕಾ? ಹೀಗೇನಾ ನೀವು ದಲಿತರನ್ನು ಉದ್ದಾರ ಮಾಡುವುದು? ಇದು ದಲಿತ ವಿರೋಧಿ, ಜನವಿರೋಧಿ ಸರ್ಕಾರ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ” ಎಂದು ಕಿಡಿ ಕಾರಿದರು.

“ದಲಿತ ಸಂಘಟನೆಗಳು ಇದನ್ನು ನೋಡಿಕೊಂಡು ಸುಮ್ಮನೇ ಕೂರಬಾರದು. ನಾನು ಮನವಿ ಮಾಡುತ್ತೇನೆ. ಅವರೂ ಇದನ್ನು ಗಮನಿಸಲಿ. ಈ ಮಂತ್ರಿಯ ವಿರುದ್ಧ ಹೋರಾಟ ನಡೆಸಬೇಕು. ನಾನು ಕೂಡ ಬೆಂಬಲ ಕೊಡುವೆ” ಎಂದು ಕುಮಾರಸ್ವಾಮಿ ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಭಕ್ತರಿಗೆ ಶ್ರೇಯಸ್ ಅಯ್ಯರ್ ಬ್ಯಾಟಿನ ಏಟು; ವಿಶ್ವಕಪ್‌ನಲ್ಲಿ ಶ್ರೇಯಸ್ ಕೈಬಿಡಲು ಮೋದಿ ಕಾರಣವೇ?

ಬೆಟ್ಟಿಂಗ್‌ ದಂಧೆಗೂ ಹೆಸರಾಗಿರುವ, ಭಾರತದ ಕ್ರಿಕೆಟ್‌ ಪ್ರೇಮಿಗಳ ಹುಚ್ಚಿನ ಆಟ ಐಪಿಎಲ್‌-2024...

ರಾಯಚೂರು | ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಪ್ರಾರಂಭಕ್ಕೆ ನೀಡಿರುವ ಆದೇಶ ಹಿಂಪಡೆಯಲು ಒತ್ತಾಯಿಸಿ; ಜೂ.3ರಂದು ಪ್ರತಿಭಟನೆ

ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ನೀಡಿರುವ ಆದೇಶ ಹಿಂಪಡೆಯುವಂತೆ...

ಪ್ರತಿ ತಿಂಗಳು ನಾನು ಮತ್ತು ಸಿಎಂ ಸೇರಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡುತ್ತೇವೆ: ಡಿ ಕೆ ಶಿವಕುಮಾರ್

ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಬಲವರ್ಧನೆಗೆ “ಕಾಂಗ್ರೆಸ್ ಕುಟುಂಬ” ಕಾರ್ಯಕ್ರಮ ರೂಪಿಸಲಾಗುವುದು....