ಬೀದರ್‌ | ಬರಗಾಲ ಘೋಷಣೆ; ಅನ್ಯಾಯ ಸಲ್ಲ : ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ್

Date:

  • ರಾಜ್ಯ ಸರ್ಕಾರ ರೈತಪರ ಯೋಜನೆಗಳಾದ ಕಿಸಾನ್‌ ಸಮ್ಮಾನ್‌, ವಿದ್ಯಾನಿಧಿ ಯೋಜನೆಗಳು ವಾಪಸ್‌ ಪಡೆದಿದೆ.
  • ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಾಗೂ ಬಿಜೆಪಿ ರೈತ ಮೋರ್ಚಾ ನೇತ್ರತ್ವದಲ್ಲಿ ನಡೆದ ಪ್ರತಿಭಟನೆ

ಹುಮನಾಬಾದ್ ಮತಕ್ಷೇತ್ರದ ಹುಮನಾಬಾದ್‌ ಮತ್ತು ಚಿಟುಗುಪ್ಪಾ ತಾಲೂಕುಗಳಲ್ಲಿ ಅತಿ ಕಡಿಮೆ ಮಳೆಯಾದರೂ ಕೂಡಾ ಬರಗಾಲ ಪೋಷಿಸದೇ ಮಲತಾಯಿ ಧೋರಣೆ ಮಾಡಿದೆ ಎಂದು ಹುಮನಾಬಾದ್‌ ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ್‌ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಾಗೂ ಬಿಜೆಪಿ ರೈತ ಮೋರ್ಚಾ ಒಗ್ಗೂಡಿ‌  ಹುಮನಾಬಾದ್‌ ಪಟ್ಟಣದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌಧ ದವರೆಗೆ ರಾಜ್ಯ ಸರ್ಕಾರದ ವಿರುದ್ಧ ನಡೆದ ಪ್ರತಿಭಟನಾ ಮೆರವಣಿಗೆಯ ನೇತ್ರತ್ವ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಮುಖ್ಯಮಂತ್ರಿ ಸಿದ್ದರಾಮಯ್ಯ ನೇತ್ರತ್ವದ ರಾಜ್ಯ ಸರ್ಕಾರ ರೈತಪರ ಯೋಜನೆಗಳಾದ ಕಿಸಾನ್‌ ಸಮ್ಮಾನ್‌, ವಿದ್ಯಾನಿಧಿ ಯೋಜನೆಗಳು ಕಾಂಗ್ರೇಸ್ ಸರ್ಕಾರ ವಾಪಸ್‌ ಪಡೆದಿದೆ. ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸಲು ಸಾಧ್ಯವಾಗದೆ ಗಗಕ್ಕೇರಿದೆ. ಕೃಷಿಗೆ ಅಗತ್ಯವಿರುವ ವಸ್ತುಗಳ ಬೆಲೆ ಏರಿಕೆಯಾಗಿದೆ, ಕೃಷಿ ಪಂಪ್‌ಸೆಟ್‌ ಗಳಿಗೆ ವಿದ್ಯುತ್‌ ಕಡಿತಗೊಳಿಸಲಾಗಿದೆ. ರಾಜ್ಯದಲ್ಲಿ ಅತಿವೃಷ್ಟಿ, ಅನಾವೃಷ್ಟಿಯಾಗಿ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೂ ಸರ್ಕಾರ ರೈತರ ಬಗ್ಗೆ ಕಾಳಜಿವಹಿಸದೇ ನಿರ್ಲಕ್ಷ್ಯ ವಹಿಸುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಬೀದರ್‌ ಜಿಲ್ಲೆಯ ಹುಮನಾಬಾದ್‌ ಹಾಗೂ ಚಿಟಗುಪ್ಪ ತಾಲ್ಲೂಕಿನಲ್ಲಿ ಸಕಾಲಕ್ಕೆ ಮಳೆಯಾಗದ ಕಾರಣ ರೈತರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ಆದರೆ ರಾಜ್ಯ ಸರ್ಕಾರ ಈ ಎರಡು ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶಗಳೆಂದು ಘೋಷಿಸದೆ ಅನ್ಯಾಯ ಎಸಗಿದೆ. ಕೂಡಲೇ ಎರಡು ತಾಲ್ಲೂಕು ಬರಪೀಡಿತ ತಾಲ್ಲೂಕು ಎಂದು ಘೋಷಿಸಬಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸಂಬಂಧ ರಾಜ್ಯಪಾಲರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್ದಾರ್‌ ಅಂಜುಮ್‌ ತಬಸುಮ್‌ ಅವರಿಗೆ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಮದ್ಯ ಮಾರಾಟಕ್ಕೆ ಪರವಾನಗಿ | ಜೀವ್ನ ಬರ್ಬಾದ್‌ ಆಗ್ತದೆ ಎನ್ನುತ್ತಿರುವ ಮಹಿಳೆಯರು

ಪ್ರತಿಭಟನೆಯಲ್ಲಿ ಬಿಎಸ್‌ಎಸ್‌ಕೆ ಅಧ್ಯಕ್ಷ ಸುಭಾಷ ಕಲ್ಲೂರ್, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಖಾಸೀಂ ಅಲಿ, ಜಿಲ್ಲಾ ಉಪಾಧ್ಯಕ್ಷ ಕರಬಸಪ್ಪ ಮಲ್ಲಶೆಟ್ಟಿ, ತಾಲ್ಲೂಕು ಅಧ್ಯಕ್ಷ ಮುಖಿಮೋದ್ದೀನ್‌ ಪಾಟೀಲ್‌, ಬಿಜೆಪಿ ಮಂಡಲ ಅಧ್ಯಕ್ಷ ಪ್ರಭಾಕರ ನಾಗರಾಳೆ, ರೈತ ಮೋರ್ಚಾ ಅಧ್ಯಕ್ಷ ರಾಮರಾವ ಕೇರೂರ್‌ ಸೇರಿದಂತೆ ಗಣಪತರಾವ ಸೇಡೋಳ, ಉಷಾರೆಡ್ಡಿ, ಜಗದೇವಿ ಬಲಭೀಮ,‌ ಅನೀಲ ಪಸರ್ಗಿ, ವಿಶ್ವನಾಥ ಪಾಟೀಲ್‌ ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿ ಮೃತಪಟ್ಟ ಘಟನೆ...

ಉಡುಪಿ | ಶ್ರೀ ದುರ್ಗಾಂಬ ಬಸ್ ಕಳವು ಪ್ರಕರಣ: ಬಸ್ ಪತ್ತೆ

ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಸುಮಾರು ₹40 ಲಕ್ಷ ಮೌಲ್ಯದ...

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...