ಚಿತ್ರದುರ್ಗ | ಜಿಲ್ಲೆಯಲ್ಲಿ ಬರ; ಮೇವಿಗಾಗಿ ಆಂಧ್ರದತ್ತ ಮುಖ ಮಾಡಿದ ರೈತರು

Date:

ಮಳೆಯ ಅಭಾವದಿಂದ ದನಕರುಗಳಿಗೆ ಮೇವಿಲ್ಲದಂತಾಗಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು, ಚಳ್ಳಕೆರೆ, ಹಿರಿಯೂರು ಹಾಗೂ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಭಾಗದ ರೈತರು ಮೇವು ಖರೀದಿಗಾಗಿ ನೆರೆಯ ರಾಜ್ಯ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗೆ ಹೋಗುತ್ತಿದ್ದಾರೆ. ಅನಂತಪುರ ಭಾಗದ ರೈತರು ಹೆಚ್ಚಾಗಿ ಭತ್ತ ಬೆಳೆಯುತ್ತಿದ್ದು, ಭತ್ತದ ಹುಲ್ಲು ದೊರೆಯುತ್ತದೆ ಎಂದು ತಿಳಿದುಬಂದಿದೆ.

- Advertisement -

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರದ ಪರಿಸ್ಥಿತಿ ಇದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಮೇವು ಮತ್ತು ನೀರಿನ ಕೊರತೆ ತೀವ್ರವಾಗಿದೆ. ಬರದಿಂದಾಗಿ ಜನರಷ್ಟೇ ಅಲ್ಲದೆ, ದನ-ಕರು, ಕುರಿ, ಮೇಕೆಗಳು ಸಹ ಸಂಕಷ್ಟಕ್ಕೆ ಸಿಲುಕಿವೆ. ಈ ಬಗ್ಗೆ ಮಾತನಾಡಿರುವ ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ, “ಕುಡಿಯುವ ನೀರಿನ ಅಗತ್ಯತೆಗಳನ್ನು ಪರಿಹರಿಸಲು ಯಾವುದೇ ಹಣಕಾಸಿನ ಕೊರತೆ ಇಲ್ಲ. ಜಾನುವಾರುಗಳನ್ನು ರಕ್ಷಿಸಲು, ಗೋಶಾಲೆಗಳನ್ನು ಸ್ಥಾಪಿಸಲು ಸ್ಥಳಗಳನ್ನು ಗುರುತಿಸಲಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ರಂಗಯ್ಯನದುರ್ಗ ಅಣೆಕಟ್ಟು ತುಂಬಿದೆ. ಪೆರ್ಲಗುಡ್ಡದ ಗೊರ್ಲಮಾರೆ, ಬೋಡಿಕಟ್ಟೆಯಲ್ಲಿ ಸಾಕಷ್ಟು ನೀರಿದ್ದರೂ, ನಮ್ಮ ಭಾಗದ ರೈತರಿಗೆ ಅದು ಉಪಯೋಗವಾಗುತ್ತಿಲ್ಲ. ಆಂಧ್ರಪ್ರದೇಶಕ್ಕೆ ನೀರು ಹರಿದು ಹೋಗುತ್ತಿದೆ. ಅಲ್ಲಿನ ರೈತರಿಗೆ ಭತ್ತ ಹಾಗೂ ಶೇಂಗಾ ಬೆಳೆ ಬೆಳೆಯಲು ಅವಕಾಶ ಹೆಚ್ಚಿದೆ. ಆದರೆ, ಜಿಲ್ಲೆಯ ಮೊಳಕಾಲ್ಮುರು, ಚಳ್ಳಕೆರೆ, ಹಿರಿಯೂರು ತಾಲೂಕಿನಲ್ಲಿ ಸಾಮಾನ್ಯ ವರ್ಷದಲ್ಲಿ ಯಥೇಚ್ಛವಾಗಿ ಮೇವು ಬೆಳೆಯುವ ರೈತರು ಸಂಕಷ್ಟದಲ್ಲಿದ್ದಾರೆ.

ಆಂಧ್ರಪ್ರದೇಶದಿಂದ ಮೇವು ಖರೀದಿಸಲು ದೊಡ್ಡ ಮೊತ್ತದ ಹಣ ತೆತ್ತಿದ್ದಾರೆ. ಟ್ರ್ಯಾಕ್ಟರ್ ಗೆ ಮೂರರಿಂದ ನಾಲ್ಕು ಸಾವಿರ ರೂ.ಗೆ ಸಿಗುತ್ತಿದ್ದ ಭತ್ತದ ಹುಲ್ಲು ಈಗ ಐದರಿಂದ ಆರು ಸಾವಿರ ರೂ. ಆಗಿದೆ. ಹತ್ತರಿಂದ 12 ಸಾವಿರ ರೂ.ಗೆ ಮಾರಾಟವಾಗುತ್ತಿದ್ದ ಶೇಂಗಾ ಹೊಟ್ಟು, 20ರಿಂದ 25 ಸಾವಿರ ರೂ. ಆಗಿದೆ. ಹೆಚ್ಚಿನ ಹಣ ನೀಡಿ ಜಾನುವಾರುಗಳಿಗೆ ಮೇವು ಹಾಕುವ ಸ್ಥಿತಿ ಜಿಲ್ಲೆಯ ರೈತರದ್ದು. ಇನ್ನೂ ಕೆಲವು ರೈತರು ಕುರಿ, ಮೇಕೆಗಳನ್ನು ಸಾಕಲಾಗದೆ ಮಾರಿದ್ದಾರೆ.

ಜಿಲ್ಲಾಡಳಿತ ರೈತರಿಗೆ ಮೇವಿನ ಕಿಟ್ ವಿತರಿಸಿ ಮೇವು ಬೆಳೆಯಬೇಕು. ನಿಂತ ನೀರಿಲ್ಲ. ಆದರೆ, ಮೇವು ಬೆಳೆಯಲು ಸಾಕಷ್ಟು ತೇವಾಂಶವಿರುವಲ್ಲಿ ಮೇವು ಬೆಳೆಯಲು ನರೇಗಾ (MGNREGA) ಕಾರ್ಯಕರ್ತರನ್ನು ಬಳಸಿಕೊಳ್ಳಬೇಕು ಎನ್ನುತ್ತಾರೆ ಸ್ಥಳೀಯ ರೈತರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ವಸತಿ ಯೋಜನೆಗಳ ಪ್ರಗತಿಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ...

ಬಾಗೇಪಲ್ಲಿ | ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಬಗ್ಗೆ ಅಸಕ್ತಿ ಬೆಳೆಸಲು ಯುವ ಸಂಸತ್‌ ಕಾರ್ಯಕ್ರಮ ಸಹಕಾರಿ:- ತಹಶಿಲ್ದಾರ್ ಮನೀಷಾ ಎನ್ ಪತ್ರಿ

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಜನರ ಪಾತ್ರ...