ಒಣದ್ರಾಕ್ಷಿ ಬೆಲೆ ಭಾರೀ ಕುಸಿತ; ಬೆಳೆಗಾರರಲ್ಲಿ ನಷ್ಟದ ಭೀತಿ

Date:

ರಾಜ್ಯದಲ್ಲಿ ಒಣದ್ರಾಕ್ಷಿಯ ಬೆಲೆಯಲ್ಲಿ ಭಾರೀ ಕುಸಿತ ಕಂಡಿದ್ದು, ಕೆ.ಜಿಗೆ 90-140 ರೂ.ಗೆ ಮಾರಾಟವಾಗುತ್ತಿದೆ. ಇದರಿಂದಾಗಿ, ದ್ರಾಕ್ಷಿ ಬೆಳೆಯುವ ರೈತರು ನಷ್ಟದ ಸುಳಿಯಲ್ಲಿ ಸಿಲುಕಿಕೊಳ್ಳುವ ಆತಂಕದಲ್ಲಿದ್ದಾರೆ.

- Advertisement -

ರಾಜ್ಯ ಮತ್ತು ನೆರೆಯ ರಾಜ್ಯ ಮಹಾರಾಷ್ಟ್ರದ ಮಾರುಕಟ್ಟೆಗಳಲ್ಲಿ 180ರಿಂದ 300 ರೂ.ವರೆಗೆ ಮಾರಾಟವಾಗುತ್ತಿದ್ದ ಒಣದ್ರಾಕ್ಷಿ, ಈಗ ಬರೋಬ್ಬರಿ 50% ಕುಸಿತ ಕಂಡಿದೆ ಎಂದು ವರದಿಯಾಗಿದೆ. ಇನ್ನೂ ಬೆಲೆ ಕುಸಿಯುವ ಸಾಧ್ಯತೆಯಿದೆ ಎಂದೂ ಹೇಳಲಾಗುತ್ತಿದೆ. ಉತ್ತಮ ಬೆಲೆ ಮತ್ತು ಲಾಭದ ನಿರೀಕ್ಷೆಯಲ್ಲಿದ್ದ ರೈತರಿಗೆ ಆಘಾತ ಎದುರಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಈಗಾಗಲೇ ದ್ರಾಕ್ಷಿ ಬೆಳೆಯಲು ಎಕರೆಗೆ ಸರಾಸರಿ 2 ಲಕ್ಷ ರೂ. ವೆಚ್ಚವಾಗುತ್ತಿದೆ. ಈಗಿರುವ ಬೆಲೆಯಲ್ಲಿ ಬಂಡವಾಳವೂ ವಾಪಸ್‌ ಬರುವಂತೆ ಕಾಣುತ್ತಿಲ್ಲ. ಇನ್ನು, ಕೋಲ್ಡ್‌ ಸ್ಟೋರೇಜ್‌ಗೆ ಬಾಡಿಗೆ ಕಟ್ಟಿ, ಒಣದ್ರಾಕ್ಷಿಯನ್ನು ಶೇಖರಿಸಿಡುವ ಪರಿಸ್ಥಿತಿಯಲ್ಲೂ ನಾವಿಲ್ಲ. ದಿಕ್ಕು ತೋಚದಾಗಿದೆ” ಎಂದು ದ್ರಾಕ್ಷಿ ಬೆಳೆಗಾರರು ಅವಲತ್ತುಕೊಂಡಿದ್ದಾರೆ.

“ದ್ರಾಕ್ಷಿ ಬೆಳೆಯುವ ರೈತರನ್ನು ಸರ್ಕಾರ ಕೈಹಿಡಿಯಬೇಕು. ಒಣ ದ್ರಾಕ್ಷಿಗೆ ಬೆಂಬಲ ಬೆಲೆ ಘೋಷಿಸಬೇಕು. ಸರ್ಕಾರವೇ ಬೆಂಬಲ ಬೆಲೆಯಲ್ಲಿ ಖರೀದಿಸಿ ಅಂಗನವಾಡಿ, ಹಾಸ್ಟೆಲ್‌ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ವಿತರಿಸಬೇಕು. ಇದರಿಂದ ರೈತರಿಗೂ, ಮಕ್ಕಳಿಗೂ ನೆರವಾದಂತಾಗುತ್ತದೆ” ಎಂದು ರೈತರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...