ಉಡುಪಿ | ಹಳ್ಳಿ ಹಳ್ಳಿಗಳಲ್ಲಿ ಅಸ್ಪೃಶ್ಯತೆ, ದಬ್ಬಾಳಿಕೆ ಇನ್ನೂ ಜೀವಂತ – ಶ್ಯಾಮರಾಜ್ ಬಿರ್ತಿ

Date:

ಬುದ್ಧಿವಂತರ, ವಿದ್ಯಾವಂತರ ಜಿಲ್ಲೆಯೆಂದು ಕರೆಸಿಕೊಳ್ಳುವ ಉಡುಪಿ ಜಿಲ್ಲೆಯ ಹಳ್ಳಿ ಹಳ್ಳಿಯ ಭಾಗಗಳಲ್ಲಿ ಅಸ್ಪೃಶ್ಯತೆ, ದಬ್ಬಾಳಿಕೆ, ದೌರ್ಜನ್ಯಗಳು ಇನ್ನೂ ಜೀವಂತವಾಗಿವೆ ಎಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ ಹೇಳಿದರು.

- Advertisement -

ಅವರು ಇಂದು ಬ್ರಹ್ಮಾವರ ತಾಲೂಕಿನ ಬಿಲ್ಲಾಡಿಯ ದ.ಸಂ.ಸ.ಅಂಬೇಡ್ಕರ್ ವಾದ ಗ್ರಾಮ ಶಾಖೆಯ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಬಿಲ್ಲಾಡಿ ಶಾಖೆ ಉದ್ಘಾಟಿಸಿ ಪ್ರಾಸ್ತಾವಿಕ ಮಾತನಾಡಿದ ದ.ಸಂ.ಸ.ಜಿಲ್ಲಾ ಪ್ರಧಾನ ಸಂಚಾಲಕರಾದ ಮಂಜುನಾಥ ಗಿಳಿಯಾರು ದಲಿತ ಸಂಘರ್ಷ ಸಮಿತಿಯ ಹೋರಾಟ ಅಂದ್ರೆ ಅದು ಈ ಸಮಾಜದ ಶೋಷಿತರ ಪರವಾದ ಹೋರಾಟ, ನಿರ್ಗತಿಕರ ಪರವಾದ ಹೋರಾಟ ಇಲ್ಲಿ ಯಾವುದೇ ಸ್ವಹಿತಾಸಕ್ತಿಗೆ ಅವಕಾಶ ಇಲ್ಲ. ನಮ್ಮ ಭೀಮ ಸೇನಾನಿಗಳು ಮೈಯೆಲ್ಲಾ ಕಣ್ಣಾಗಿ ಸಮಾಜದಲ್ಲಿ ನಮಗಾಗುವ ಅನ್ಯಾಯದ ವಿರುದ್ಧ ಸಿಡಿದೇಳಬೇಕು. ಶೋಷಣೆ ಮತ್ತು ದೌರ್ಜನ್ಯವನ್ನು ಖಂಡಿಸಿ ದಮನಿತರ ಧ್ವನಿಯಾಗಬೇಕು ಎಂದರು.

ಬಿಲ್ಲಾಡಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಪ್ರಥ್ವಿರಾಜ್ ಹೆಗ್ಡೆ, ತಾಲೂಕು ಪಂಚಾಯತ್ ಸದಸ್ಯರಾದ ನಿರ್ಮಲ ಶೆಟ್ಟಿಯವರು ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಾವರ ತಾಲೂಕು ಸಂಚಾಲಕರಾದ ವಡ್ಡರ್ಸೆ ಶ್ರೀನಿವಾಸ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ನ ಮಾಜಿ ಸದಸ್ಯರಾದ ಪ್ರವೀಣ್ ಶೆಟ್ಟಿ ವಂಡಾರು. ಚಂದ್ರಶೇಖರ್ ಶೆಟ್ಟಿ ಬಿಲ್ಲಾಡಿ, ದ.ಸಂ.ಸ.ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮಸುಂದರ ತೆಕ್ಕಟ್ಟೆ, ಸುರೇಶ ಹಕ್ಲಾಡಿ, ಜಿಲ್ಲಾ ಸಮಿತಿಯ ಸಧಸ್ಯರಾದ ಕುಮಾರ್ ಕೋಟಾ, ಹರೀಶ್ಚಂದ್ರ ಬಿರ್ತಿ, ರಾಜು ಬೆಟ್ಟಿನಮನೆ, ಸುಧಾಕರ ಮಾಸ್ಟರ್ ಗುಜ್ಜರಬೆಟ್ಟು, ಶಿವಾನಂದ ಬಿರ್ತಿ ಉಪಸ್ಥಿತರಿದ್ದರು.

ಪ್ರಶಾಂತ್ ಬಿರ್ತಿ ಮತ್ತು ತಂಡದವರಿಂದ ಹೋರಾಟದ ಗೀತೆಗಳನ್ನು ಹಾಡಲಾಯಿತು. ಗೌರಿ ಬಿಲ್ಲಾಡಿ ಅವರನ್ನು ಬಿಲ್ಲಾಡಿ ಶಾಖೆಯ ಮಹಿಳಾ ಸಂಚಾಲಕಿಯವರಾಗಿ ಆಯ್ಕೆ ಮಾಡಲಾಯಿತು‌. ಮೊದಲಿಗೆ ಚಂದ್ರ ಕೊರ್ಗಿಯವರು ಎಲ್ಲರನ್ನೂ ಸ್ವಾಗತಿಸಿದರು ಶ್ರೀನಿವಾಸ್ ಮಲ್ಯಾಡಿ ವಂದಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಳ್ಳೆಗಾಲ | ಕಬ್ಬಿಗೆ ಟನ್‌ಗೆ ₹6,000 ಎಂಎಸ್‌ಪಿ ನಿಗದಿಗೆ ಆಗ್ರಹ

ಕಬ್ಬಿಗೆ ಪ್ರತಿ ಟನ್‌ಗೆ ₹6,000 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸುವುದು...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಮೈಸೂರಿನಲ್ಲಿ ಪತ್ರಕರ್ತರ ಛಾಯಾಚಿತ್ರ ಪ್ರದರ್ಶನ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮೆಚ್ಚುಗೆ

ಪತ್ರಿಕಾ ಛಾಯಾಗ್ರಾಹಕರ ಸೃಜನಶೀಲತೆ ಹಾಗೂ ಪ್ರಕೃತಿ ಮತ್ತು ವನ್ಯಜೀವಿಗಳ ಸೌಂದರ್ಯವನ್ನು ಸೆರೆಹಿಡಿಯುವ...

ಸರಗೂರಿನಲ್ಲಿ ಉಪಶಮನ ಆರೈಕೆ ಕುರಿತು ಜಾಗೃತಿ ಜಾಥಾ

ಮೈಸೂರು ಜಿಲ್ಲೆಯ ಸರಗೂರಿನಲ್ಲಿ ವಿವೇಕಾನಂದ ಸ್ಮಾರಕ ಆಸ್ಪತ್ರೆಯ ಉಪಶಮನ ಆರೈಕೆ ಕೇಂದ್ರ...