ಯಾದಗಿರಿ | ಶಾಸಕ ಸ್ಥಾನದ ಸದಸ್ಯತ್ವದಿಂದ ಮುನಿರತ್ನ ಅಮಾನತಿಗೆ ದಸಂಸ ಆಗ್ರಹ

Date:

ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಮಾತನಾಡಿ ಜಾತಿ ನಿಂದನೆ ಮಾಡಿರುವ ಶಾಸಕ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ಅಮಾನತುಗೊಳಿಸಿ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಯಾದಗಿರಿ ಜಿಲ್ಲಾ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

- Advertisement -

ದಸಂಸ ಜಿಲ್ಲಾ ಸಂಚಾಲಕ ಮರೆಪ್ಪ ಚಟ್ಟೇರಕರ್ ಮಾತನಾಡಿ, ʼಶಾಸಕ ಮುನಿರತ್ನ ಗುತ್ತಿಗೆದಾರರ ಸಂಭಾಷಣೆಯ ಜೊತೆಯಲ್ಲಿ ಹೆಣ್ಣು ಮಕ್ಕಳ ವಿಷಯವಾಗಿ ಒಕ್ಕಲಿಗ ಹಾಗೂ ಪರಿಶಿಷ್ಟರ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ. ದಲಿತ ಮಹಿಳೆಯರ ಕುರಿತು ಅವಹೇಳನಕಾರಿಯಾಗಿ ಮಾತನಾಡಿ ಜಾತಿ ನಿಂದನೆ ಮಾಡಿರುವುದು ಖಂಡನೀಯ. ಬಿಜೆಪಿ ಶಾಸಕ ಮುನಿರತ್ನ ವಿರುದ್ದ ಎಸ್ಸಿ-ಎಸ್ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿ ಪರಿಶಿಷ್ಟ ಜಾತಿ ಮತ್ತು ಒಕ್ಕಲಿಗ ಸಮುದಾಯದವರಿಗೆ ನ್ಯಾಯ ಒದಗಿಸಬೇಕುʼ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

“ಜನಪ್ರತಿನಿಧಿಯಾಗಿ ತಮ್ಮ ಕ್ಷೇತ್ರದ ಎಲ್ಲ ಜಾತಿ-ಜನಾಂಗದ ಒಬ್ಬ ಸೇವಕನಾಗಿ ಕೆಲಸ ಮಾಡಬೇಕು.ಆದರೆ ಶಾಸಕ ಮುನಿರತ್ನ ಕ್ಷೇತ್ರದ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಸಿ ನಿಂದನೆ ಮಾಡಿರುವುದು ಸಮುದಾಯಕ್ಕೆ ಅಘಾತವುಂಟು ಮಾಡಿದೆ. ಕೂಡಲೇ ರಾಜ್ಯ ವಿಧಾನಸಭೆ ಸಭಾಪತಿಗಳು ಶಾಸಕ ಮುನಿರತ್ನ ನಾಯ್ಡು ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕುʼ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಮುಡಾ ಪ್ರಕರಣ | ವಿಪಕ್ಷದವರ ರಾಜಕೀಯ ದುರುದ್ದೇಶ‌ ಬಯಲು ಮಾಡುತ್ತೇವೆ: ಸಚಿವ ಪರಮೇಶ್ವರ್

ಈ ಸಂದರ್ಭದಲ್ಲಿ ದಸಂಸ ವಿಭಾಗೀಯ ಸಂಚಾಲಕ ಮಾನಪ್ಪ ಕಟ್ಟಿಮನಿ ಸೇರಿದಂತೆ ಪ್ರಮುಖರಾದ ಗೋಪಾಲ,‌ ಹೊನ್ನಪ್ಪ ನಾಟೆಕಾರ, ಮಲ್ಲಿನಾಥ ಸುಂಗಲಕರ್, ಸೈದಪ್ಪ ಕೊಲ್ಲೂರು, ಬಸವರಾಜ ಕೂಡ್ಲಗಿ, ಜೈಭೀಮ್ ಕೊಲ್ಲೂರ,ರಾಕೇಶ ಬನ್ನೆಟ್ಟಿ, ವಿಶಾಲ ಕೌಳೂರು, ವಿಜಯ ಆಶನಾಳ, ಅಂಬ್ರೀಶ್ ಚಟ್ಟೇರಕರ್, ಬಸವರಾಜ, ರಾಮು ಕೂಳೂರ್, ಮಲ್ಲು ಕಾಗಿ, ಬಸವರಾಜ ಕೂಲೂರ್, ಆನಂದ ಹೊಸಹಳ್ಳಿ, ಭೀಮಣ್ಣ ರಾಕಮಗೇರಾ, ತಿಪಣ್ಣ ಹಳಗೇರಿ, ಬಸವರಾಜ ಮಾಟನೂರ್, ವಸಂತ ‌ಸುಂಗಲಕರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...

ವಿಜಯಪುರ | ಬಿಎಲ್‌ಡಿಇ ಪಾಲಿಟೆಕ್ನಿಕ್‌ನಲ್ಲಿ ಸಿವಿಲ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಜೊತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ವಿಜಯಪುರ ನಗರದ...