ತುಮಕೂರು | ದಸಂಸ ಸುವರ್ಣ ಮಹೋತ್ಸವ ಸಂಭ್ರಮ; ಫೆ.18ರಂದು ಸಮಾರಂಭ

Date:

ಸಮಾಜದ ಸಮಾನತೆಗಾಗಿ ನಿರಂತರ ಹೋರಾಡುತ್ತಿರುವ, ಶೋಷಿತ ವರ್ಗಕ್ಕೆ ಬೆನ್ನೆಲುಬಾಗಿ ನಿಂತಿರುವ ಪ್ರೊ. ಬಿ ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿ (ದಸಂಸ) 50 ವರ್ಷದ ಸುವರ್ಣ ಮಹೋತ್ಸವ ಸಂಭ್ರಮ ಆಚರಿಸಿಕೊಳ್ಳುತ್ತಿದೆ. ಫೆ.18ರಂದು ತುಮಕೂರಿನಲ್ಲಿ ಸಮಾರಂಭ ನಡೆಯಲಿದೆ. ಸಮಾರಂಭದಲ್ಲಿ ಎಲ್ಲ ದಲಿತ ಮುಖಂಡರು ಬಣಗಳನ್ನು ಬದಿಗೊತ್ತಿ ಭಾಗಿಯಾಗಬೇಕು ಎಂಧು ದಸಂಸ ತಾಲೂಕು ಸಂಚಾಲಕ ಚೇಳೂರು ಶಿವನಂಜಪ್ಪ ಮನವಿ ಮಾಡಿದ್ದಾರೆ.

- Advertisement -

ಗುಬ್ಬಿಯಲ್ಲಿ ಸುದ್ದಿಗೋ‍ಷ್ಠಿ ನಡೆಸಿ ಅವರು ಮಾತನಾಡಿದರು. “ಫೆ.18ರಂದು ತುಮಕೂರಿನ ಎಂಪ್ರೆಸ್ ಆಡಿಟೋರಿಯಂನಲ್ಲಿ ಸುವರ್ಣ ಮಹೋತ್ಸವ ಸಮಾರಂಭ ನಡೆಯಲಿದೆ. ಸಮಾರಂಭವನ್ನು ಸಹಕಾರ ಸಚಿವ ಕೆ.ಎನ್ ರಾಜಣ್ಣ ಉದ್ಘಾಟಿಸಲಿದ್ದಾರೆ. ದಸಂಸ ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭದಲ್ಲಿ ‘ದಲಿತ ಚಳವಳಿಯ ತಾತ್ವಿಕ ನೆಲೆಗಳು’ ಎಂಬ ಪುಸ್ತಕವನ್ನು ದಸಂಸ ರಾಜ್ಯ ಸಂಚಾಲಕ ಎಂ ಗುರುಮೂರ್ತಿ ಬಿಡುಗಡೆಗೊಳಿಸಲಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ರಾಜ್ಯದ ನಾನಾ ಭಾಗಗಳಲ್ಲಿ ದಲಿತರು ಅನುಭವಿಸಿದ ದೌರ್ಜನ್ಯ ಪ್ರಶ್ನಿಸುವ ವಿದ್ಯಮಾನವನ್ನು ಒಂದಡೆ ಸೇರಿಸಲು ಒಂದು ಸಾಂಸ್ಥಿಕ ವೇದಿಕೆ ಸೃಷ್ಟಿಸಿ ದಲಿತ ಸಂಘರ್ಷ ಸಮಿತಿ ರಚಿಸಿ ಅಂಬೇಡ್ಕರ ಹೇಳಿದ ಶಿಕ್ಷಣ, ಸಂಘಟನೆ ಮತ್ತು ಹೋರಾಟ ತತ್ವ ಅಳವಡಿಕೊಂಡು ಅನೇಕ ಹೋರಾಟದಲ್ಲಿ ನ್ಯಾಯ ದೊರಕಿಸಿ ಕೊಡುವ ಕೆಲಸ ಪ್ರೊ.ಬಿ.ಕೃಷ್ಣಪ್ಪ ಹಾಗೂ ಎನ್.ಗಿರಿಯಪ್ಪ ನಡೆಸಿದ್ದರು. ಇದರ ಫಲ ಇಂದು ದಲಿತರಿಗೆ ಹೋರಾಟದ ಶಕ್ತಿ ಬಂದಿದೆ. ಈ ಹಿಂದೆ ನಡೆದ ಬೆತ್ತಲೆ ಸೇವೆ, ಪಿಟಿಸಿಎಲ್ ಕಾಯಿದೆ, ಉಳುವವನೇ ಭೂಮಿ ಒಡೆಯ ಕಾನೂನು ಹಾಗೂ ದಲಿತ ಮಕ್ಕಳ ಶಿಕ್ಷಣಕ್ಕೆ ವಸತಿ ಶಾಲೆ ತೆರೆದ ಕೀರ್ತಿ ದಸಂಸ ಗೆ ಸಲ್ಲಲಿದೆ ಎಂದ ಅವರು ಈ ಅಭೂತ ಪೂರ್ವ ಕಾರ್ಯಕ್ರಮದಲ್ಲಿ ನಿರಂತರ ಹೋರಾಟ ನಡೆಸಿದ ತಾಲ್ಲೂಕು ಮತ್ತು ಜಿಲ್ಲಾ ದಲಿತ ಮುಖಂಡರಿಗೆ ಸನ್ಮಾನ ಮಾಡಲಾಗುವುದು” ಎಂದರು.

ದಸಂಸ ಮಹಿಳಾ ಘಟಕದ ಜಿಲ್ಲಾ ಸಂಚಾಲಕಿ ಲಾವಣ್ಯ ಮಾತನಾಡಿ, “ಮಹಿಳಾ ದೌರ್ಜನ್ಯ ತಡೆ ಹಿಡಿಯಲು ಈ ಸಂಘಟನೆ ದೊಡ್ಡ ಶಕ್ತಿಯಾಗಿ ಹೊರ ಹೊಮ್ಮಿದೆ. ತುಳಿತಕ್ಕೆ ಒಳಗಾದ ಮಹಿಳೆಯರ ಬಗ್ಗೆ ಸಂಘರ್ಷ ಸಮಿತಿ ಕಾಳಜಿ ವಹಿಸಿ ಸಮಾನತೆ ನೀಡುವಲ್ಲಿ ಸಹ ಹೋರಾಟ ನಡೆಸಿದೆ. ಇಂತಹ ವೈಚಾರಿಕತೆಯ ದಸಂಸ 50 ವರ್ಷ ತುಂಬಿರುವುದು ಸಾರ್ಥಕ ಕ್ಷಣವಾಗಿದೆ. ಈ ಸಂಭ್ರಮಕ್ಕೆ ತಾಲೂಕಿನ ಎಲ್ಲಾ ದಲಿತರು ಆಗಮಿಸಿ ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಈಶ್ವರಯ್ಯ, ನರೇಂದ್ರ ಕುಮಾರ್, ಸುರೇಶ್, ರಾಮಕೃಷ್ಣ, ದೊಡ್ಡಮ್ಮ, ಶಿವಮ್ಮ, ರಮೇಶ್, ಮಧು, ಯೋಗೀಶ್, ನರಸಿಯಪ್ಪ, ಸಿದ್ದೇಶ್ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...