ಬಾಗೇಪಲ್ಲಿ | ಶಾಸಕ ಮುನಿರತ್ನ ರಾಜೀನಾಮೆಗೆ ಡಿಎಸ್‌ಎಸ್‌ ಒತ್ತಾಯ

Date:

ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಗುತ್ತಿಗೆದಾರರೊಬ್ಬರನ್ನು ವೈಯಕ್ತಿಕವಾಗಿ ನಿಂದಿಸಿದ್ದಲ್ಲದೆ, ಸ್ತ್ರಿಯರನ್ನು ಮತ್ತು ಪರಿಶಿಷ್ಟ ಸಮುದಾಯಗಳನ್ನು ನಿಂದಿಸುವ ಮೂಲಕ ತಮ್ಮ ಸ್ಥಾನಕ್ಕೆ ಧಕ್ಕೆ ಬರುವಂತೆ ನಡೆದುಕೊಂಡಿದ್ದಾರೆ. ಆದ್ದರಿಂದ ಶಾಸಕ ಮುನಿರತ್ನ ಕೂಡಲೇ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಡಿಎಸ್‌ಎಸ್‌ ಮುಖಂಡ ಕಿರಣ್ ಕುಮಾರ್ ಒತ್ತಾಯಿಸಿದರು.

- Advertisement -

ನಗರ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ ಪ್ರಶಾಂತ್‌ ವರ್ಣಿಗೆ ದೂರು ಸಲ್ಲಿಸಿ ಮಾತನಾಡಿದ ಅವರು, ಶಾಸಕನ ನಡೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಕೂಡಲೇ ಶಾಸಕನನ್ನು ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕು. ಈತನ ಎಲ್ಲಾ ಕಾನೂನು ಬಾಹಿರ, ಅನೈತಿಕ, ಅಕ್ರಮ ವ್ಯವಹಾರಗಳ ಬಗ್ಗೆ ಪರಿಶೀಲನೆ ನಡೆಸಿ, ಶಿಸ್ತು ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಹೊಲೆಯ ಸಮುದಾಯದ ಕುರಿತು ಜಾತಿ ನಿಂದನೆ ಮಾಡಿರುವ ಶಾಸಕ ಮುನಿರತ್ನ ಸ್ತ್ರೀಯರ ಕುರಿತು ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ. ಜೀವ ಬೆದರಿಕೆ ಹಾಕಿ, ಹಣಕ್ಕೆ ಬೇಡಿಕೆಯಿಟ್ಟ, ಗುತ್ತಿಗೆದಾರನ ವಿರುದ್ಧ ದರ್ಪ ಮೆರೆದಿದ್ದಾರೆ. ಇಂತಹ ಬೇಜವಾಬ್ದಾರಿತನದ, ದುರ್ವರ್ತನೆಯನ್ನು ತೋರಿರುವ ಶಾಸಕ ಮುನಿರತ್ನಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಸಂಸದ ಸುಧಾಕರ್‌ ಅಪ್ರಭುದ್ಧ ರಾಜಕಾರಣಿ: ಜಿಲ್ಲಾಧ್ಯಕ್ಷ ಕೇಶವರೆಡ್ಡಿ ಕಿಡಿ

ಈ ಸಂಧರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖಂಡರಾದ ಎಸ್.ಎನ್.ನರಸಿಂಹಪ್ಪ, ಗಂಗಾಧರ, ರಾಮಾಂಜಿ, ರಾಜು, ಶ್ರೀನಿವಾಸ್, ರವಿ, ರಾಜು, ಎ.ಪಿ.ವೆಂಕಟೇಶ್, ಬಾಬು, ಜಯಂತ್, ಸುರೇಶ, ಲಕ್ಷ್ಮೀ ನಾಯ್ಕ, ಲಕ್ಷ್ಮಿ ನರಸಿಂಹಪ್ಪ ಸೇರಿದಂತೆ ಇತರರು ಇದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...