ದಲಿತರ ಮೂಲಭೂತ ಸಮಸ್ಯೆಗಳು ಮತ್ತು ದಲಿತರ ಮೇಲಿನ ದೌರ್ಜನ್ಯಗಳ ಬಗ್ಗೆ ಜಿಲ್ಲಾಡಳಿತ ನಿರ್ಲಕ್ಷ್ಯ ಹಾಗೂ ದಲಿತ ವಿರೋಧಿ ನೀತಿಯನ್ನು ಖಂಡಿಸಿ ಭೂಮಿ ಮತ್ತು ವಸತಿಗಾಗಿ ಒತ್ತಾಯಿಸಿ ಜಿಲ್ಲಾದ್ಯಂತ ಏಕಕಾಲಕ್ಕೆ ಹಮ್ಮಿಕೊಂಡಿರುವ ದಸಂಸ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹವು ಮೂರನೇ ಕಾಲಿಟ್ಟಿದೆ.
ಬಗರ್‌ಹುಕುಂ ಸಾಗುವಳಿ ಚೀಟಿ, ಭೂಮಿ ಮಂಜೂರಾತಿ, ಭೂರಹಿತರಿಗೆ ಭೂಮಿ ಮತ್ತು ವಸತಿ, ದಲಿತರ ಮೇಲಿನ ದೌರ್ಜನು ತಡೆಗಟ್ಟುವಿಕೆ, ಗೌರಿಬಿದನೂರು ತಾಲೂಕಿನ ಜೋಡಿ ಗ್ರಾಮಗಳ ಗೇಣಿದಾರರ ಭೂ ಸಮಸ್ಯೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ತಾಲೂಕು ಕಚೇರಿ ಮುಂಭಾಗ ದಸಂಸ ವತಿಯಿಂದ ಮೂರು ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದ್ದು, ಇದುವರೆಗೆ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಹೋರಾಟಗಾರರು ಅಸಮಾಧಾನ ವ್ಯಕ್ತಪಡಿಸಿದರು.
ಇದೇ ವೇಳೆ ಮಾತನಾಡಿದ ದಸಂಸ ಮುಖಂಡ, ಮಾಜಿ ಜಿಪಂ ಸದಸ್ಯ ಕೆ ಸಿ ರಾಜಾಕಾಂತ್, ಕೇವಲ ಭರವಸೆಯ ಮಾತುಗಳಿಂದ ಯಾವುದೇ ಪ್ರಯೋಜನವಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸೂಕ್ತ ಪ್ರಗತಿಯಾಗಬೇಕು. ಆಗ ಮಾತ್ರವೇ ಧರಣಿ ಸತ್ಯಾಗ್ರಹವನ್ನು ಹಿಂಪಡೆಯಲಾಗುವುದು. ಜಿಲ್ಲಾಡಳಿತ ನಮ್ಮ ಬೇಡಿಕೆ ಈಡೇರಿಕೆಗೆ ಸೂಕ್ತ ಕ್ರಮವಹಿಸದ ಹೊರತು ಯಾವುದೇ ಕಾರಣಕ್ಕೂ ಧರಣಿ ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ : ಚಿಕ್ಕಬಳ್ಳಾಪುರ | ಅಭಿವೃದ್ಧಿ ಮರೆತು, ಮುಖ್ಯಮಂತ್ರಿ ಚರ್ಚೆಯಲ್ಲಿ ತಲ್ಲೀನವಾದ ಸರಕಾರ; ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ
ಪ್ರತಿಭಟನೆಯಲ್ಲಿ ದಸಂಸ ಜಿಲ್ಲಾ ಶಾಖೆಯ ಜಿಲ್ಲಾ ಸಂಚಾಲಕರಾದ ಸಿ ಬಿ ಗಂಗಪ್ಪ, ತಾಲೂಕು ಸಂಚಾಲಕ ಎನ್ ಪರಮೇಶ್, ತ್ಯಾಗರಾಜು, ಖಜಾಂಚಿ ಮುನಿನಾರಾಯಣಪ್ಪ, ಚಿನ್ನಪ್ಪ, ಮುನಿಕದಿರಪ್ಪ, ಕಣಿತಹಳ್ಳಿ ಮುನಿಯಪ್ಪ, ರಾಮಕೃಷ್ಣಪ್ಪ, ಮೂರ್ತಿ, ಲಕ್ಷ್ಮಯ್ಯ, ವೈ ನಾರಾಯಣ, ಶ್ರೀನಿವಾಸ್, ಕರಗಪ್ಪ, ಚೈತ್ರಾ, ಆಶಾ ಸೇರಿದಂತೆ ಮತ್ತಿತರರು ಹಾಜರಿದ್ದರು.

ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಮಾಂತರ ಜಿಲ್ಲಾ ಸಂಯೋಜಕರು. ಪತ್ರಕರ್ತ, ಪರಿಸರ ಪ್ರೇಮಿ.
ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಜ್ಜರಹಳ್ಳಿ ಗ್ರಾಮದವರು.