ಚಿಕ್ಕಬಳ್ಳಾಪುರ | ದಲಿತರನ್ನು ಎದುರು ಹಾಕಿಕೊಂಡರೆ ಸರಕಾರಗಳಿಗೆ ಉಳಿಗಾಲವಿಲ್ಲ : ಆರ್‌ ಆಂಜನೇಯ ರೆಡ್ಡಿ ಎಚ್ಚರಿಕೆ

Date:

Advertisements

ದಲಿತರನ್ನು ಎದುರು ಹಾಕಿಕೊಂಡರೆ ಸರಕಾರಗಳಿಗೆ ಉಳಿಗಾಲವಿಲ್ಲ. ಹಾಗಾಗಿ ಆಳುವ ಸರಕಾರಗಳು ದಲಿತ ಹೋರಾಟಗಾರರ ತಾಳ್ಮೆಯನ್ನು ಪರೀಕ್ಷೆ ಮಾಡಬಾರದು ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್‌ ಆಂಜನೇಯ ರೆಡ್ಡಿ ಎಚ್ಚರಿಕೆ ನೀಡಿದರು.

ಚಿಕ್ಕಬಳ್ಳಾಪುರ ನಗರದ ತಾಲೂಕು ಕಚೇರಿ ಮುಂಭಾಗ ಸೋಮವಾರ ಎಂಟನೇ ದಿನಕ್ಕೆ ಕಾಲಿಟ್ಟ ದಸಂಸ ಹಾಗೂ ಗಡಿನಾಡು ರೈತ ಸಂಘದ ಧರಣಿ ಸತ್ಯಾಗ್ರಹಕ್ಕೆ ಬೆಂಬಲ ನೀಡಿ ಮಾತನಾಡಿದ ಅವರು, ದಲಿತ ಹೋರಾಟಗಾರರನ್ನು ಎದುರು ಹಾಕಿಕೊಂಡರೆ ಸರಕಾರಗಳಿಗೆ ಉಳಿಗಾಲವಿಲ್ಲ. ಆದ್ದರಿಂದ, ದಲಿತರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕು. ಇಲ್ಲವಾದರೆ ನಿಮ್ಮ ಅಧಿಕಾರ ಕಸಿದುಕೊಳ್ಳುತ್ತಾರೆ ಎಂದು ಹೇಳಿದರು.

ಪ್ರಪಂಚದಲ್ಲಿ ಶುದ್ಧ ಕುಡಿಯುವ ನೀರಲ್ಲಿ ಇಂತಿಷ್ಟು ಪ್ರಮಾಣದಲ್ಲಿ ಆರೋಗ್ಯಕರ ಅಂಶಗಳಿರಬೇಕೆಂದು ಡಬ್ಲ್ಯೂಎಚ್‌ಒ ನಿಗದಿಗೊಳಿಸಿದೆ. ಆದರೆ, ನಮ್ಮ ದುರಾದೃಷ್ಟ ನಮಗೆ ನೈಟ್ರೇಟ್ ಯುಕ್ತ ನೀರನ್ನು ಕೊಡಲಾಗಿದೆ. ಇದರಿಂದ ಕೆಲವೇ ದಿನಗಳಲ್ಲಿ ಕ್ಯಾನ್ಸರ್‌ ಕಾಯಿಲೆ ಬರುವುದು ಖಚಿತ ಎಂದು ಆತಂಕಗೊಂಡರು.

Advertisements

ದಲಿತ ಮುಖಂಡ, ಜಿಪಂ ಮಾಜಿ ಸದಸ್ಯ ರಾಜಾಕಾಂತ್ ಮಾತನಾಡಿ, ಜಿಲ್ಲಾದ್ಯಂತ ಎಲ್ಲಾ ತಾಲೂಕು ಕೇಂದ್ರಗಳಲ್ಲೂ ಏಕಕಾಲಕ್ಕೆ ದಲಿತರು ಹಾಗೂ ರೈತ ಮುಖಂಡರು ಭೂಮಿ, ವಸತಿ ಇತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಗುಡಿಬಂಡೆಯ 92 ವರ್ಷದ ದಲಿತರೊಬ್ಬರು ಸಾವನ್ನಪಿದ್ದಾರೆ. ಮಹಿಳೆಯರು, ಮಕ್ಕಳು, ವಯಸ್ಕರು ಚಳಿಯನ್ನೂ ಲೆಕ್ಕಿಸದೆ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಎಸ್‌ಸಿಎಸ್‌ಪಿ / ಟಿಎಸ್‌ಪಿ ಅನುದಾನ ಬಳಕೆಯಾಗುತ್ತಿಲ್ಲವೇಕೆ?

ಒಂದು ಬಡಾವಣೆ ನಿರ್ಮಾಣ ಮಾಡಲು 18 ವರ್ಷ ಸಮಯ ತೆಗೆದುಕೊಂಡಿದ್ದಾರೆ. ಡಿಸಿಯವರ ಮಾತನ್ನ ತಹಶೀಲ್ದಾರ್ ಕೇಳದಿದ್ದರೆ, ಈ ಜಿಲ್ಲೆಗೆ ಜಿಲ್ಲಾಧಿಕಾರಿ ಬೇಕಾ ಎಂಬ ಪ್ರಶ್ನೆ ಮೂಡುತ್ತದೆ. ಕೆಲಸ ಮಾಡದ, ಮಾತನ್ನು ಕೇಳದ ತಹಶೀಲ್ದಾರ್ ಅವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.

ಎಲ್ಲೆಲ್ಲಿ ಆಶ್ರಯ ಯೋಜನೆ ಸಮಿತಿಗಳು, ಬಗರ್‌ ಹುಕುಂ ಸಮಿತಿಗಳು ಇಲ್ಲವೋ ಅಲ್ಲಿ ಡಿಸಿಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಬಗರ್ ಹುಕುಂ ಸಾಗುವಳಿ ಚೀಟಿ ವಿತರಿಸಬೇಕೆಂಬ ನಿಯಮವಿದೆ. ಆದರೂ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರ ನಗರದಲ್ಲಿ ಬಗರ್‌ ಹುಕುಂ ಸಮಿತಿ ಇದ್ದೂ ಇಲ್ಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವ ರೆಡ್ಡಿ ಮಾತನಾಡಿ, ದಲಿತರು, ಲಿಂಗತ್ವ ಅಲ್ಪಸಂಖ್ಯಾತರು, ವಿಕಲಚೇತನರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಎಲ್ಲಾ ಮುಖಂಡರೊಂದಿಗೆ ಚರ್ಚಿಸಲಾಗುವುದು. ಭೂಮಿ, ವಸತಿ ನಿರ್ಮಾಣದ ಕುರಿತು ಎಲ್ಲಾ ಶಾಸಕರ ಗಮನಕ್ಕೆ ತಂದು ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.

ಜಿಪಂ ಸಿಇಒ ಪ್ರಕಾಶ್‌ ಜೆ ನಿಟ್ಟಾಲಿ ಮಾತನಾಡಿ, ಪ್ರಸ್ತುತ 13 ಬೇಡಿಕೆಗಳನ್ನು ಇಟ್ಟಿದ್ದಾರೆ. ಯಾವುದೇ ಅಧಿಕಾರಿಗಳು ದಲಿತರ ಪರವಾಗಿಲ್ಲ ಎಂದು ಹೇಳಲಾಗುವುದಿಲ್ಲ. ನಮ್ಮಿಂದ ತಪ್ಪಾಗಿದ್ದರೆ ಕೂಡಲೇ ಸರಿಪಡಿಸುವ ಕೆಲಸ ಮಾಡುತ್ತೇವೆ. ಜಿಲ್ಲಾಧಿಕಾರಿಗಳ ಸಭೆ ಕರೆದು ಸಮಸ್ಯೆಗಳ ಕುರಿತು ಕ್ರಮವಹಿಸಲಾಗುವುದು. ದಯವಿಟ್ಟು ಧರಣಿಯನ್ನು ಕೈಬಿಡಬೇಕು ಎಂದು ಮನವಿ ಮಾಡಿದರು.

ಗಡಿನಾಡು ರೈತ ಸಂಘದ ಜಿಲ್ಲಾಧ್ಯಕ್ಷ ಮಂಚನಬೆಲೆ ವೆಂಕಟೇಶ್‌, ರಾಜ್ಯ ವಿಕಲಚೇತನರ ಒಕ್ಕೂಟದ ಜಿಲ್ಲಾಧ್ಯಕ್ಷ ಕಿರಣ್‌ ನಾಯಕ್ ಮಾತನಾಡಿದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ನವ ಗ್ರಾಮಗಳ ಹುಟ್ಟಿಗಾಗಿ ಶ್ರಮ ಸಮಾಜ ಪಕ್ಷದ ಉದಯ

ಪ್ರತಿಭಟನೆ ವೇಳೆ ಎಸಿ ಅತೀಕ್‌ ಪಾಶ, ನಗರಸಭೆ ಆಯುಕ್ತರು, ತಾಪಂ ಇಒ ಮಂಜುನಾಥ್‌ ಸೇರಿದಂತೆ ನೂರಾರು ಮಂದಿ ಪ್ರತಿಭಟನಾಕಾರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X