ಉಡುಪಿ | ಭೀಮಾ ಕೋರೇಗಾಂವ್ ವಿಜಯೋತ್ಸವ : ದಸಂಸ ಅಂಬೇಡ್ಕರ್ ವಾದದಿಂದ ಶೌರ್ಯ ಸ್ಮರಣೆ

Date:

ದಲಿತರ ಸ್ವಾಭಿಮಾನ ಹಾಗೂ ಅಸ್ಮಿತೆಯ ಸಂಕೇತವಾದ ಭೀಮಾ ಕೋರೇಗಾಂವ್ ವಿಜಯೋತ್ಸವವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಗುರುವಾರ ಸಂಜೆ ಪಂಜಿನ ಮೆರವಣಿಗೆಯೊಂದಿಗೆ ಭವ್ಯವಾಗಿ ಆಚರಿಸಲಾಯಿತು.

- Advertisement -
WhatsApp Image 2026 01 01 at 11.11.09 PM

ಕಾರ್ಯಕ್ರಮದಲ್ಲಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು, ಜನವರಿ 1 ನಮ್ಮೆಲ್ಲರ ಬಿಡುಗಡೆಯ ಹರಿಕಾರ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನದೊಂದಿಗೆ ಅವಿನಾಭಾವವಾಗಿ ಬೆಸೆದ ದಿನವೆಂದು ಹೇಳಿದರು. ಯಾವುದೇ ಪ್ರಮುಖ ಕಾರ್ಯಕ್ರಮಗಳಿದ್ದರೂ ಸಹ ಬಾಬಾ ಸಾಹೇಬ್ ಅವರು ತಮ್ಮ ಜೀವನದ ಕೊನೆಯ ದಿನದವರೆಗೆ ಜನವರಿ 1ರಂದು ಭೀಮಾ ಕೋರೇಗಾಂವ್‌ಗೆ ತೆರಳಿ ವಿಜಯ ಸ್ತಂಭಕ್ಕೆ ಗೌರವ ಸಲ್ಲಿಸುತ್ತಿದ್ದರು. ಆ ಪರಂಪರೆಯನ್ನು ಮುಂದುವರಿಸಿಕೊಂಡು ನಾವು ಅಂಬೇಡ್ಕರ್ ವಿಚಾರಧಾರೆಯಲ್ಲಿ ನಂಬಿಕೆಯಿಟ್ಟವರು ಅವರ ಚಿಂತನೆ ಹಾಗೂ ಹೋರಾಟವನ್ನು ಬೆಂಬಲಿಸಿ ಮುನ್ನಡೆಸುತ್ತಿದ್ದೇವೆ ಎಂದ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಭೀಮಾ ಕೋರೇಗಾಂವ್ ವಿಜಯವು ಶೋಷಿತ ಸಮುದಾಯಗಳು ಜಾತಿವಾದಿ ಪೇಶ್ವೆಗಳ ವಿರುದ್ಧ ಜಯ ಸಾಧಿಸಿದ ಐತಿಹಾಸಿಕ ದಿನವಾಗಿದ್ದು, ಅದು ನಮ್ಮ ಸ್ವಾಭಿಮಾನದ ಪ್ರತೀಕವಾಗಿದೆ. ಜನವರಿ 1 ಬಂದಾಗಲೆಲ್ಲ ನಮ್ಮ ರೋಮರೋಮಗಳಲ್ಲಿ ಶೌರ್ಯದ ಕಿಚ್ಚು ಉರಿಯುತ್ತದೆ. ನಮ್ಮ ಹಿರಿಯರು ನಿರ್ಮಿಸಿದ ಶೌರ್ಯದ ಇತಿಹಾಸವನ್ನು ನೆನಪಿಸಿಕೊಂಡು ನಾವು ರೋಮಾಂಚನಗೊಳ್ಳುತ್ತೇವೆ. ಈ ಹಿನ್ನಲೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ಕಾರ್ಯಕರ್ತರು ಬೆಳಗ್ಗೆಯಿಂದಲೇ ತುದಿಗಾಲಲ್ಲಿ ನಿಂತು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಎಂದು ಅವರು ತಿಳಿಸಿದರು.

WhatsApp Image 2026 01 01 at 11.11.09 PM 1

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ಚಿಂತಕ ಪ್ರೋ ಕೆ ಫಣಿರಾಜ್, ನವ ಪೇಶ್ವೆವಾದಿಗಳು ಇನ್ನೂ ಕೂಡ ದಲಿತರ ಮೇಲಿನ ದಮನವನ್ನು ಕಡಿಮೆ ಮಾಡಿಲ್ಲ. ಹಾಗಾಗಿ ಈ ಮಹರ್ ಪ್ರತಿಭಟನೆ ಇಂದಿಗೂ ಮುಂದುವರಿಯಬೇಕಾದ ಅಗತ್ಯವಿದೆ. ನವ ಪೇಶ್ವೆವಾದಿ ಆಡಳಿತವನ್ನು ಕೊನೆಗಾಣಿಸುವವರೆಗೂ ಭೀಮಾ ಕೋರೇಗಾಂವ್ ಹೋರಾಟ ಮುಂದುವರಿಯಬೇಕಾಗಿದೆ ಎಂದು ತಿಳಿಸಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದಂತೆ ಇದೊಂದು ವಿಜಯೋತ್ಸವ ಮಾತ್ರವಲ್ಲ ದಲಿತರ ಪ್ರತಿರೋಧದ ಪ್ರತೀಕವಾಗಿ ಬ್ರಾಹ್ಮಣಶಾಹಿ ನವ ಪೇಶ್ವೆವಾದಿಗಳ ವಿರುದ್ಧ ಸಂಘಟನಾತ್ಮಕ ಹೋರಾಟ ಮಾಡಬೇಕಾಗುದೆ. ಆ ಮೂಲಕ ಅಂಬೇಡ್ಕರ್ ಹಾಕಿಕೊಟ್ಟ ಮಾರ್ಗದಲ್ಲಿ ಸಾಗಬೇಕಾಗಿದೆ ಎಂದು ಅವರು ಹೇಳಿದರು.

ಉಡುಪಿಯ ಕೆಥೋಲಿಕ್ ಸೆಂಟರ್ ಬಳಿ ಧರ್ಮಗುರು ಫಾ. ವಿಲಿಯಂ ಮಾರ್ಟಿಸ್ ಪಂಜಿನ ಮೆರವಣಿಗೆಗೆ ಚಾಲನೆ ನೀಡಿದರು. ಅಲ್ಲಿಂದ ಹೊರಟ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿದ್ದು, ಸರ್ವಿಸ್ ಬಸ್ ನಿಲ್ದಾಣದ ಬಳಿಯ ಕ್ಲಾಕ್ ಟವರ್ ಎದುರು ಸಮಾಪ್ತಿಗೊಂಡಿತು.

WhatsApp Image 2026 01 01 at 11.11.13 PM

ಈ ಸಂದರ್ಭದಲ್ಲಿ ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್, ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ, ಜನಪರ ಹೋರಾಟಗಾರ ಕಲ್ಕುಳಿ ವಿಠಲ್ ಹೆಗ್ಡೆ, ಕೊರಗರ ಅಭಿವೃದ್ಧಿ ಒಕ್ಕೂಟದ ಅಧ್ಯಕ್ಷೆ ಸುಶೀಲಾ ನಾಡಾ, ಸಾಮಾಜಿಕ ಹೋರಾಟಗಾರ ಇದ್ರೀಸ್ ಹೂಡೆ, ದಸಂಸ ಮುಖಂಡರಾದ ರಾಜು ಕೆಸಿ ಬೆಟ್ಟಿನಮನೆ, ಶ್ಯಾಮ್ ಸುಂದರ್ ತೆಕ್ಕಟ್ಟೆ, ಅಣ್ಣಪ್ಪ ನಕ್ರೆ, ದೇವು ಹೆಬ್ರಿ, ರಾಜೇಂದ್ರ ಮಾಸ್ತರ್, ಶಂಕರ್ ದಾಸ್ ಚೇಂಡ್ಕಳ, , ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

WhatsApp Image 2026 01 01 at 11.11.10 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ದೊಡ್ಡ ಗುಂಡಿಗಳನ್ನು ಮುಚ್ಚಿದ ಶಾಲಾ ಮಕ್ಕಳು 

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಳವಳ್ಳಿ ಗ್ರಾಮದಲ್ಲಿ ರಸ್ತೆಯ ದೊಡ್ಡ ದೊಡ್ಡ...

ಚಿಕ್ಕಮಗಳೂರು | ಮತದಾರರ ಪಟ್ಟಿಗೆ ಸಲ್ಲಿಸಿದ್ದ ಆಕ್ಷೇಪಣೆಗಳನ್ನು ಹಿಂಪಡೆದ ಹೆಚ್.ಕೆ ದಿನೇಶ್

ಕೊಪ್ಪ ತಾಲ್ಲೂಕಿನ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ನಮೂನೆ–7ರ ಮೂಲಕ ಈ ಹಿಂದೆ...

ಧಾರವಾಡ | ಜನರು ಬೀದಿಗಳಿದು ಪ್ರತಿರೋಧ ವ್ಯಕ್ತಪಡಿಸಬೇಕು: ಬಹುಭಾಷಾ ನಟ ಪ್ರಕಾಶ್ ರೈ

"ಇದು ಸಂವಿಧಾನದ ಉಳಿವು–ಅಳಿವಿನ ಪ್ರಶ್ನೆ, ಪ್ರಜಾಪ್ರಭುತ್ವದ ಪ್ರಶ್ನೆ ಹಾಗೂ ಸ್ವಾತಂತ್ರ್ಯವನ್ನು ರಕ್ಷಿಸುವ...

ಚಿಕ್ಕಮಗಳೂರು | ಚಲಿಸುತ್ತಿದ್ದ ಕಾರು ಕೆರೆಗೆ; ಮೂವರು ಪಾರು 

ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾ‌ರ್ ಕೆರೆಗೆ ಬಿದ್ದ ಪರಿಣಾಮ...