ದಸರಾ | ನನಗೆ ಸಿಕ್ಕಿದ್ದು ಸಾಮಾಜಿಕ ಕಲಾ ನ್ಯಾಯ: ಹಂಸಲೇಖ

Date:

Advertisements

ಮೈಸೂರು ದಸರಾ ಉದ್ಘಾಟನೆಗೆ ಈ ಬಾರಿ ನನ್ನನ್ನು ಸರ್ಕಾರ ಆಯ್ಕೆ ಮಾಡಿದೆ. ಇದು ಕಾವ್ಯಕ್ಕೆ ಸಿಕ್ಕ ಗೌರವ, ಸಾಮಾಜಿಕ ನ್ಯಾಯ ಎಂದು ಹಲವರು ಹೇಳುತ್ತಿದ್ದಾರೆ. ಆದರೆ, ಇದು ಸಾಮಾಜಿಕ ಕಲಾ ನ್ಯಾಯ ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ.

ಮಂಗಳವಾರ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನಾನು ಸಿನಿಮಾ ಬರಹಾಗಾರ, ನನಗೆ ಕವಿ ಪಟ್ಟ ಬೇಡ” ಎಂದರು.

ಬರಗಾಲದಲ್ಲಿ ದಸರಾ ಆಚರಿಸುತ್ತಿದ್ದೇವೆ. ನಾವು ರೈತರ ವಿಚಾರವನ್ನು ಗಮನಿಸಿಬೇಕು. ರೈತರ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡಬೇಕು. ಸ್ಮಾರ್ಟಿ ಸಿಟಿಗಿಂತ ಸ್ಮಾರ್ಟ್ ವಿಲೇಜ್ ಆಗಬೇಕು” ಎಂದು ಹೇಳಿದರು.

Advertisements

“ಕನ್ನಡದ ಅಸ್ಮಿತೆ ಕಾಪಾಡಬೇಕು. ಹಿಂದಿ ಹೇರಿಕೆ‌ ಇಂದಿನದ್ದಲ್ಲ. ನಾನು ಎಂಟನೇ ತರಗತಿಯಲ್ಲಿದ್ದಾಗಲಿಂದಲೂ ಇದೆ. ದೆಹಲಿಗೆ ಕನ್ನಡ ಬೇಕಾಗಿಲ್ಲ – ನಮಗೆ ಹಿಂದಿ ಬೇಕಾಗಿಲ್ಲ” ಎಂದರು.

“ಮಕ್ಕಳು ಇಂಗ್ಲಿಷ್​​ನಲ್ಲೇ ಓದಬೇಕೆಂಬ ಆಸೆ ಪೊಷಕರಲ್ಲಿದೆ. ಇಂಗ್ಲಿಷ್ ಇದ್ದರೆ ಮಾತ್ರ ಕೆಲಸ ಸಿಗುವುದು ಎಂಬ ಭಾವನೆ ಅವರಲ್ಲಿದೆ. ಮನೆಯಲ್ಲಿ ಇಂಗ್ಲಿಷ್ ಕಲಿಸುವ ಹಂತಕ್ಕೆ ಪೋಷಕರು ಹೋಗಿದ್ದಾರೆ. ಇಂಗ್ಲಿಷ್ ಕೆಲಸಕ್ಕೆ ಇಟ್ಟುಕೊಳ್ಳಿ ಕನ್ನಡದ ಅಸ್ಮಿತೆ ಉಳಿಸಲು ಕಲಿಯಿರಿ. ಶಾಲೆಯಿಂದ ಮಾತ್ರವಲ್ಲ, ಮನೆಯಿಂದಲೇ ಕನ್ನಡ ಕಲಿಕೆ‌ ಆಗಬೇಕು” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X