ದಸರಾ ಮೆರವಣಿಗೆ : ತುಮಕೂರು ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಮಾರ್ಗ ಬದಲಾವಣೆ

Date:

ತುಮಕೂರು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಚರಿಸಲಾಗುತ್ತಿರುವ ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 12ರಂದು ವೈಭವದ ದಸರಾ ಮೆರವಣಿಗೆ ನಡೆಯಲಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಮಾರ್ಗ ಬದಲಾಯಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ.

- Advertisement -

ಮೆರವಣಿಗೆಯಲ್ಲಿ ಸುಮಾರು 30,000-35,000 ಜನರು ಸೇರುವ ನಿರೀಕ್ಷೆಯಿರುವುದರಿಂದ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಈ ಬಸ್ ಸಂಚಾರ ಮಾರ್ಗವನ್ನು ಬದಲಾಯಿಸಿ ಆದೇಶ ಹೊರಡಿಸಲಾಗಿದೆ. ಬೆಂಗಳೂರು ಕಡೆಯಿಂದ ತುಮಕೂರು ನಗರಕ್ಕೆ ಬರುವ ಬಸ್ಸ್ಗಳು ಜಾಸ್ ಟೋಲ್ -ಶ್ರೀ ಕೆ.ಎನ್ ರಾಜಣ್ಣ ರವರ ಮನೆಯ ಮುಂಭಾಗದ ರಸ್ತೆ ಮೂಲಕ ರಿಂಗ್ ರಸ್ತೆಗೆ ಪ್ರವೇಶಿಸಿ, ಗುಬ್ಬಿ ಗೇಟ್ ರಿಂಗ್ ರಸ್ತೆಗೆ ಬರುವುದು.ಕುಣಿಗಲ್ ಕಡೆಯಿಂದ ತುಮಕೂರು ನಗರಕ್ಕೆ ಬರುವ ಬಸ್ಸ್ಗಳು ಕುಣಿಗಲ್ ಜಂಕ್ಷನ್ ಮೂಲಕ ಗುಬ್ಬಿ ಗೇಟ್ ರಿಂಗ್ ರಸ್ತೆಗೆ ಬರುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿರಾ ಕಡೆಯಿಂದ ತುಮಕೂರು ನಗರಕ್ಕೆ ಬರುವ ಬಸ್ಸ್ಗಳು ಶಿರಾಗೇಟ್‌ಗೆ ಬಂದು ಶಿರಾಗೇಟ್ 80 ಅಡಿ ರಸ್ತೆ ಮೂಲಕ ಹೊಸ ಔಟರ್ ರಿಂಗ್ ರಸ್ತೆ ಯಿಂದ ಗುಬ್ಬಿ ಗೇಟ್ ರಿಂಗ್ ರಸ್ತೆ ಬರುವುದು.ಗುಬ್ಬಿ ಕಡೆಯಿಂದ ತುಮಕೂರು ನಗರಕ್ಕೆ ಬರುವ ಬಸ್ಸ್ಗಳು ಗುಬ್ಬಿ ಗೇಟ್ ರಿಂಗ್ ರಸ್ತೆವರೆಗೆ ಬರುವುದು.

ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಕೆಎಸ್‌ಆರ್‌ಟಿಸಿ ಬಸ್ ಚಾಲಕರಿಗೆ ಸೂಚಿಸಲಾಗಿದೆ, ಆದೇಶವನ್ನು ಉಲ್ಲಂಘಿಸಿದವರ ವಿರುದ್ದ ಕಾನೂನು ರೀತ್ಯಾ ಅಗತ್ಯ ಕ್ರಮ ವಹಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಕೆರೆಗೆ ಬಿದ್ದು 14 ವರ್ಷದ ಬಾಲಕ ಸಾವು: ದನಗಳಿಗೆ ನೀರು ಕುಡಿಸಲು ಹೋದಾಗ ದುರ್ಘಟನೆ

ದನಗಳಿಗೆ ನೀರು ಕುಡಿಸಲು ಕೆರೆಗೆ ತೆರಳಿದ್ದ 14 ವರ್ಷದ ಬಾಲಕನೊಬ್ಬ ಕಾಲು...

ಮುಂಡಗೋಡ | ಬಾಚಣಕಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಉತ್ತರಾಖಂಡ ಮೂಲದ ಯುವಕ ಸಾವು

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮದ ಡ್ಯಾಂ ಹಿನ್ನೀರಿನಲ್ಲಿ ಈಜಾಡಲು ತೆರಳಿದ್ದ ಹೋಟೆಲ್‌...

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ತುಮಕೂರು ದಸರಾ: ಹತ್ತು ದಿನಗಳ ಸಾಂಸ್ಕೃತಿಕ ಸಂಭ್ರಮ ನಾಳೆಯಿಂದ : ಡಾ. ಜಿ. ಪರಮೇಶ್ವರ್

ಮೈಸೂರಿಗೆ ಹೋಗುವ ಬದಲು ತುಮಕೂರಿನಲ್ಲೇ ದಸರಾ ನೋಡೋಣ ಎಂಬ ಮಾತು ಜನರ...