ವೃತ್ತಿಪರ ಕೋರ್ಸ್‌ಗಳಿಗೆ ಹೆಚ್ಚುವರಿ ಹಣ ವಸೂಲಿ: ರಾಣಿ ಚನ್ನಮ್ಮ ವಿವಿ ಅಧೀನ ಕಾಲೇಜುಗಳ ವಿರುದ್ಧ ಡಿವಿಪಿ ಆರೋಪ

Date:

ರಾಜ್ಯದ ಪ್ರತಿಷ್ಠಿತ ರಾಣಿ ಚನ್ನಮ್ಮ ವಿವಿ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಇಡಿ ಹಾಗೂ ಇತರ ವೃತ್ತಿಪರ ಕೋರ್ಸ್‌ಗಳಲ್ಲಿ ಅಕ್ರಮವಾಗಿ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಪೂರ್ಣ ಪಟ್ಟಿಯನ್ನು ಕುಲಸಚಿವರಿಗೆ ಸಲ್ಲಿಸಲಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್(DVP) ತಿಳಿಸಿದೆ.

- Advertisement -

ಹಣ ವಸೂಲಿಯಲ್ಲಿ ತೊಡಗಿರುವ, ಭ್ರಷ್ಟಾಚಾರ ನಡೆಸುತ್ತಿರುವ ಹಾಗೂ ಸರಿಯಾದ ಶೈಕ್ಷಣಿಕ ವ್ಯವಸ್ಥೆ ಇಲ್ಲದ ಮೋನಿಕಾ ಬಸವರಾಜ್ ಕಣ್ಣಿ ಬಿ.ಇಡ್ ಮತ್ತು ಕಲ್ಲೂರ ಬಿ.ಇಡ್ ಕಾಲೇಜುಗಳಾದ ಖಾಸಗಿ ಸಂಸ್ಥೆಗಳ ವಿರುದ್ಧ ತನಿಖೆ ನಡೆಸಲು ಸಮಿತಿ ರಚನೆ ಮಾಡಲಾಗಿದ್ದು, ತನಿಖಾ ವರದಿಯ ಆಧಾರದಲ್ಲಿ ಸಿಂಡಿಕೆಟ್ ಸಭೆಯಲ್ಲಿ ಕ್ರಮ ಕೈಗೊಳ್ಳಲು ಅನುಮೋದನೆ ಕೂಡ ದೊರೆತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

ನಿನ್ನೆ ಡಿವಿಪಿ ನೇತೃತ್ವದಲ್ಲಿ ನಡೆದ ಸತತ ನಾಲ್ಕು ಗಂಟೆಗಳ ಚರ್ಚೆಯಲ್ಲಿ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪ್ರತಿನಿಧಿಗಳು, ಈ ಅಕ್ರಮಗಳಲ್ಲಿ ತೊಡಗಿರುವ ಸಂಸ್ಥೆಗಳನ್ನು ಬಂದ್ ಮಾಡುವ ಕುರಿತು ಸರ್ಕಾರ ಕೆಲವೇ ದಿನಗಳಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂಬ ಭರವಸೆ ನೀಡಿದೆ.

ಈ ಸಂದರ್ಭದಲ್ಲಿ ವಿದ್ಯಾರ್ಥಿ ಹಾಗೂ ಯುವಜನರಿಗೆ ಡಿವಿಪಿ ಮನವಿ ಮಾಡಿದ್ದು, “ಯಾವುದೇ ಶಿಕ್ಷಣ ಸಂಸ್ಥೆಗಳು ನಿಯಮದ ವಿರುದ್ಧವಾಗಿ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದರೆ. ಅದರ ಸಂಪೂರ್ಣ ಮಾಹಿತಿಯನ್ನು ನಿರ್ಭಯವಾಗಿ ನಮ್ಮ ಗಮನಕ್ಕೆ ತರಬೇಕು. ಯಾರೂ ಭಯಪಡುವ ಅಗತ್ಯವಿಲ್ಲ. ಕಾನೂನುಗಳು ಸಂಪೂರ್ಣವಾಗಿ ವಿದ್ಯಾರ್ಥಿಗಳ ಪರವಾಗಿವೆ. ಹಿಂಜರಿಕೆ ಪಡದೆ, ಧೈರ್ಯವಾಗಿ ಧ್ವನಿ ಎತ್ತಿ. ನಿಮ್ಮ ಹಕ್ಕುಗಳ ಹೋರಾಟದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ನಿಮ್ಮ ಜೊತೆಯಲ್ಲೇ ಇರುತ್ತದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಡಿ.20ರಂದು ಕೆ ದೊರೈರಾಜ್ ಅವರ ‘ನಮ್ಮ ಹಟ್ಟಿ’ ಕೃತಿ ಬಿಡುಗಡೆ

ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ ರಾಜ್ಯಾಧ್ಯಕ್ಷ ಶ್ರೀನಾಥ್ ಪೂಜಾರಿ, ರಾಜ್ಯ ಮುಖಂಡ ಅಜಿತ ಮಾದರ, ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ್ ಅಜಮಾನಿ, ಆದರ್ಶ್ ಗಸ್ತಿ, ಸಹ ಸಂಚಾಲಕ ಮಾದೇಶ ಚಲವಾದಿ, ಸುದೀಪ್, ರಾಹುಲ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...