ರಾಯಚೂರು | ಮಸ್ಕಿ ತಾಲೂಕು ಶೈಕ್ಷಣಿಕ ಅಭಿವೃದ್ಧಿಗೆ ಡಿವಿಪಿ ಒತ್ತಾಯ

Date:

Advertisements
  • ಗ್ರಾಮೀಣ ಭಾಗದಿಂದ ಪಟ್ಟಣದ ಶಾಲಾ -ಕಾಲೇಜಿಗೆ ಆಗಮಿಸುವ ವಿದಾರ್ಥಿಗಳಿಗೆ ಮೂಲಭೂತ ಸೌಕರ್ಯ ಕೊರತೆ
  • ಮಸ್ಕಿ ತಾಲೂಕು ಘೋಷಣೆಯಾಗಿ 5-6 ವರ್ಷಗಳು ಕಳೆದರೂ ಶೈಕ್ಷಣಿಕವಾಗಿ ಅಭಿವೃದ್ಧಿಯಲ್ಲಿ ಹಿನ್ನಡೆ

ಮಸ್ಕಿ ತಾಲೂಕು ಘೋಷಣೆಯಾಗಿ 5-6 ವರ್ಷಗಳು ಕಳೆದರೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದದೆ ಇರುವುದು ವಿಪರ್ಯಾಸ, ತಾಲೂಕಿನ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ವಿದಾರ್ಥಿಗಳು ಅಸಮಧಾನ ವ್ಯಕ್ತಪಡಿಸಿದರು.

ದಲಿತ ವಿದ್ಯಾರ್ಥಿ ಪರಿಷತ್‌ ನೇತ್ರತ್ವದಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿವರಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಾಲ್ಲೂಕು ದಂಡಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಶೈಕ್ಷಣಿಕ ಕೊರತೆ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯಿಂದ ಬೇಸತ್ತು ಶಿಕ್ಷಣಕ್ಕಾಗಿ ಪಕ್ಕದ ತಾಲೂಕು ಮತ್ತು ಜಿಲ್ಲೆಗಳ ಮೊರೆ ಹೋಗುತ್ತಿದ್ದಾರೆ. ತಾಲೂಕಿನಲ್ಲಿರುವ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳಲ್ಲಿನ ಸಮಸ್ಯೆಗಳು ಕೂಡ ಶಿಕ್ಷಣದಲ್ಲಿ ಹಿಂದುಳಿಯಲು ಕಾರಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

Advertisements

ದಲಿತ ವಿಧ್ಯಾರ್ಥಿ ಪರಿಷತ್ ಜಿಲ್ಲಾ ಮುಖಂಡ ಮೌನೇಶ್ ಜಾಲವಾಡಗಿ ಮಾತನಾಡಿ, ” ಗ್ರಾಮೀಣ ಭಾಗದಿಂದ ಪಟ್ಟಣದ ಶಾಲಾ -ಕಾಲೇಜಿಗೆ ಆಗಮಿಸುವ ವಿದಾರ್ಥಿಗಳಿಗೆ ಸುಸಜ್ಜಿತ ವಾದ ಗ್ರಂಥಾಲಯ,ಇಂದಿರಾ ಕ್ಯಾಂಟೀನ್ ಹಾಗೂ ಇನ್ನಿತರ ಸರಕಾರಿ ಸೌಲಭ್ಯಗಳು ಒದಗಿಸಬೇಕು” ಎಂದು ಒತ್ತಾಯಿಸಿದರು .

ಬೇಡಿಕೆಗಳು:

1. ನೂತನ ಸುಸಜ್ಜಿತ ಬಸ್‌ ನಿಲ್ದಾಣ ನಿರ್ಮಾಣ ಮಾಡಬೇಕು.

2. ಎಲ್ಲಾ ಇಲಾಖೆಯ ಸರ್ಕಾರಿ ವಸತಿ ನಿಲಯಗಳ ಕಟ್ಟಡ ನಿರ್ಮಾಣ ಮಾಡಬೇಕು,

3. ದೇವನಾಂಪ್ರಿಯ ಪದವಿ ಕಾಲೇಜಿಗೆ ಪ್ರತ್ಯೇಕ ಬಸ್‌ ವ್ಯವಸ್ಥೆ ಕಲ್ಪಿಸಬೇಕು.

4. ಪರಿಶಿಷ್ಟ ವರ್ಗಗಳ ಮೆಟೀಕ್‌ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಬಸ್‌ ವ್ಯವಸ್ಥೆ ಮತ್ತು ಮೂಲಭೂತ ಸೌಕರ್ಯ ಒದಗಿಸಬೇಕು.

5. ಎಸ್.ಸಿ., ಎಸ್.ಟಿ ವಸತಿ ನಿಲಯಗಳನ್ನು ನಿರ್ಮಾಣ ಮಾಡಬೇಕು,

6. ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿಗೆ ಕಂಪೌಂಡ್ ಹಾಗೂ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು.

ಈ ಸುದ್ದಿ ಓದಿದ್ದೀರಾ? ಈ ದಿನ ವಿಶೇಷ | ಪಠ್ಯಪುಸ್ತಕ ಪರಿಷ್ಕರಣೆಯ ನಡೆ ಗೊಂದಲದ ಗೂಡು- ತಜ್ಞರ ಆಕ್ರೋಶ

7. ತಾಲ್ಲೂಕಿನ ಹಿರೆ ಕಡಬುರು, ಎಲೇಕುಡ್ಲಿಗಿ,ತಲೇಖಾನ್, ಹೂವಿನ ಭಾವಿ ಗ್ರಾಮಗಳಿಗೆ ಬಸ್ ಸೌಲಭ್ಯ ಕಲ್ಪಿಸಬೆಕು.

ಈ ಸಂದರ್ಭದಲ್ಲಿ ಪ್ರಮುಖರಾದ ಹುಸೇನಪ್ಪ , ಎಚ್ ಎಂ ಬಡಿಗೇರ್ ಸೇರಿದಂತೆ ವಿವಿಧ ಶಾಲಾ ಕಾಲೇಜು ವಿಧ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X