ರಾಯಚೂರು | ತಜ್ಞ ವೈದ್ಯರ ನೇಮಿಸುವಂತೆ ಡಿವೈಎಫ್‌ಐ ಒತ್ತಾಯ

Date:

  • ಜಾಲಹಳ್ಳಿ ಸರ್ಕಾರಿ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ
  • ಶಾಸಕಿ ಕರೆಮ್ಮ ನಾಯಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆಗೆ ಆಗ್ರಹ

ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಸರ್ಕಾರಿ ಸಮುದಾಯ ಆಸ್ಪತ್ರೆಗೆ ನೂರಿತ ತಜ್ಞ ವೈದ್ಯರನ್ನು ನೇಮಕ ಮಾಡುವಂತೆ ಒತ್ತಾಯಿಸಿ ಗುರುವಾರ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್‌ಐ) ಒತ್ತಾಯಿಸಿದೆ. ಸಂಘಟನೆಯ ಕಾರ್ಯಕರ್ತರು ಆಸ್ಪತ್ರೆಯ ಅವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

- Advertisement -

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಕಾರ್ಯದರ್ಶಿ ರಾಜು ನಾಯಕ ಮಾತನಾಡಿ, “ತಾಲೂಕಿನಲ್ಲಿಯೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಜಾಲಹಳ್ಳಿ ಪಟ್ಟಣದಲ್ಲಿ ಸುಮಾರು 30,000 ಜನಸಂಖ್ಯೆ ಇದೆ. ಆದರೆ, ಗ್ರಾಮೀಣ ಪ್ರದೇಶದ ಉಪ – ಕೇಂದ್ರಗಳಲ್ಲಿ ದೊರಕುವ ಸಣ್ಣ ಸೌಲಭ್ಯ ಸಹ ಈ ಸಮುದಾಯ ಅಸ್ಪತ್ರೆಯಲ್ಲಿ ಸಿಗುವುದಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“65 ಜನ ಸಿಬ್ಬಂದಿಗಳು ಇರಬೇಕಾದ ಈ ಆಸ್ಪತ್ರೆಯಲ್ಲಿ ಕೇವಲ 16 ಸಿಬ್ಬಂದಿ ಮಾತ್ರ ಇದ್ದಾರೆ. ತಜ್ಞ ವೈದ್ಯರ ಕೊರತೆಯಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಆಸ್ಪತ್ರೆಯಲ್ಲಿ ಹೇಳೊರಿಲ್ಲ, ಕೇಳೋರಿಲ್ಲ ಎನ್ನುವಂತಾಗಿದೆ. ರಾತ್ರಿ ವೇಳೆಯಲ್ಲಿ ಹೆರಿಗೆಗೆ ವೈದ್ಯರು ಇರದ ಕಾರಣ ನರ್ಸ್‌ಗಳೇ ಗತಿ ಎಂಬಂತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಯಿಲ್ಲದೆ ಗಬ್ಬು ನಾರುವಂತಾಗಿದೆ. ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯ ಇಲ್ಲದ ಆಸ್ಪತ್ರೆಯಲ್ಲಿ ರೋಗಿಗಳು ನರಕಯಾತನೆ ಅನುಭವಿಸುತ್ತಿದ್ದಾರೆ. ಸ್ಥಳೀಯ ಶಾಸಕಿ ಕರಿಯಮ್ಮ ಜಿ.ನಾಯಕ ಅವರು ಹಾಗೂ ಜಿಲ್ಲಾ ಅರೋಗ್ಯ ಇಲಾಖೆಯ ಅಧಿಕಾರಿಗಳು ಈ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ವ್ಯವಸ್ಥೆ ಮಾಡುವವರೆಗೆ ನಮ್ಮ ಹೋರಾಟ ನಿರಂತರವಾಗಿ ನಡೆಸಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಕಾರು ಅಪಘಾತ; ಪ್ರವಾಸಕ್ಕೆ ತೆರಳಿದ ಕಾನೂನು ವಿದ್ಯಾರ್ಥಿ ಸಾವು

ಈ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷ ರೀಯಾಜ್ ಆರ್ತಿ, ಮುಖಂಡರಾದ ನರಸಣ್ಣ ನಾಯಕ, ಮೌನೇಶ ದಾಸರ್, ರಂಗನಾಥ ನಾಯಕ ಸೇರಿದಂತೆ ಅನೇಕರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...