- ಸೆ.4ರಂದು ಸಚಿವ ಸಂಪುಟದ ಉಪ ಸಮಿತಿ ಸಭೆ ನಡೆಯಲಿದೆ
- ಒಟ್ಟು 114 ತಾಲೂಕುಗಳಲ್ಲಿ ಜಂಟಿ ಸರ್ವೇ ಆಗಿದೆ: ಸಿದ್ದರಾಮಯ್ಯ
ಸೆ.4ರಂದು ಸಚಿವ ಸಂಪುಟದ ಉಪ ಸಮಿತಿ ಸಭೆ ನಡೆಯಲಿದೆ. ಒಟ್ಟು 114 ತಾಲೂಕುಗಳಲ್ಲಿ ಜಂಟಿ ಸರ್ವೇ ಆಗಿದ್ದು, 105 ತಾಲೂಕುಗಳಲ್ಲಿ ಬರ ಘೋಷಣೆ ಮಾಡಲಾಗುವುದು. ನಂತರ 73 ತಾಲೂಕುಗಳ ಘೋಷಣೆಗೆ ಸೇರ್ಪಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬಳ್ಳಾರಿಯ ತೋರಣಗಲ್ನ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜೂನ್ನಲ್ಲಿ ಮಳೆ ಇಲ್ಲ. ಆಗಸ್ಟ್ನಲ್ಲಿ ಶೇ.56% ಮಳೆ ಕೊರತೆ ಆಗಿದೆ. ಕಾವೇರಿಗೆ ಸಂಕಷ್ಟ ಬಂದಿದ್ದು, ಬೆಳೆ ರಕ್ಷಣೆ ಮಾಡಬೇಕಿದೆ. ಇದಕ್ಕಾಗಿ ಸಂಕಷ್ಟ ಸೂತ್ರ ಪಾಲಿಸಬೇಕಿದೆ ಕಾವೇರಿ ನೀರು ಹಂಚಿಕೆ ಮತ್ತು ಬರ ಪರಿಹಾರಕ್ಕೆ ಸರ್ಕಾರ ಸೂಕ್ತವಾಗಿ ಸ್ಪಂದಿಸಬೇಕು” ಎಂದು ಒತ್ತಾಯಿಸಿದರು.
ಮೇಕೆದಾಟು ವಿಚಾರವಾಗಿ ತಮಿಳುನಾಡು ಸರ್ಕಾರ ಅನಗತ್ಯ ವಿರೋಧ ವ್ಯಕ್ತಪಡಿಸುತ್ತಿದೆ. ಕೆಆರ್ಎಸ್ನಲ್ಲಿ 113 ಅಡಿ ನೀರು ಬಂದಿದೆ. ಹಾರಂಗಿ ಕಬಿನಿಯಲ್ಲಿ ನೀರು ಬರಬೇಕಿತ್ತು. ಆದರೆ ಮಳೆ ಕೊರತೆಯಿಂದ ನೀರು ಕೊಡಲು ಆಗಿಲ್ಲ ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಖಾಸಗಿ ಸಾರಿಗೆ ಒಕ್ಕೂಟ ಬಂದ್ಗೆ ಕರೆ: ಸಿಎಂ, ಸಾರಿಗೆ ಸಚಿವರೊಂದಿಗೆ ಮಾತನಾಡುತ್ತೇನೆ ಎಂದ ಡಿಸಿಎಂ ಡಿಕೆ
ಒಂದು ದೇಶ ಒಂದು ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಒಂದು ದೇಶ ಒಂದು ಚುನಾವಣೆ ಜಾರಿ ಎಲ್ಲ ರಾಜ್ಯಗಳಿಗೆ ಕಷ್ಟ ಆಗಲಿದೆ ಎನ್ನುವುದು ನನ್ನ ವೈಯಕ್ತಿಕ ವಿಚಾರ. ವಿಧಾನಸಭೆ ಸೇರಿದಂತೆ ಸ್ಥಳೀಯ ಚುನಾವಣೆಗಳನ್ನು ನಡೆಸುವುದು ಸುಲಭವಲ್ಲ. ಮಾಜಿ ರಾಷ್ಟ್ರಪತಿ ಕೋವಿಂದ್ ಅವರ ನೇತೃತ್ವದ ಸಮಿತಿ ವರದಿ ನೀಡಲಿ ಎಂದಿದ್ದಾರೆ.